Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

Breaking News: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ‘ದಳಪತಿ ವಿಜಯ್’ ಅಧಿಕಾರ ಸ್ವೀಕಾರ !

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ
KARNATAKA

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

By kannadanewsnow05

ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ಅಬ್ಬರ ಜೋರಾಗಿರಲಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಇದರೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ತಲುಪುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಮೈಸೂರು, ಬಳ್ಳಾರಿ, ಹಾಸನ, ಚಾಮರಾಜನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷವಾಗಿ ಇಂದು ಮತ್ತು ನಾಳೆ ಭಾರೀ ಮಳೆಯ ಮುನ್ಸೂಚನೆ ಇದ್ದು, ಸುಮಾರು 64.5 ಮಿಲಿ ಮೀಟರ್‌ನಿಂದ 115.5 ಮಿಲಿ ಮೀಟರ್‌ವರೆಗೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಈ ಹವಾಮಾನ ಬದಲಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ತನ್ನ ಅಧಿಕೃತ ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಮಳೆ ಮತ್ತು ಗಾಳಿಯ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪ್ರಾಧಿಕಾರ ಸೂಚಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಸದ್ಯಕ್ಕೆ ಶುಷ್ಕ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆಯ ವರದಿ ತಿಳಿಸಿದೆ.

Share. Facebook Twitter LinkedIn WhatsApp Email

Related Posts

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

3 Mins Read

BIG NEWS : ಸಚಿವ ಡಿ. ಸುಧಾಕರ್, ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚನೆ

2 Mins Read

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

2 Mins Read
Recent News
ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

Breaking News: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ‘ದಳಪತಿ ವಿಜಯ್’ ಅಧಿಕಾರ ಸ್ವೀಕಾರ !

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

Shocking: ಭಾರತದಲ್ಲಿ ಪ್ರತಿ 18 ನಿಮಿಷಕ್ಕೊಮ್ಮೆ ಅತ್ಯಾಚಾರ! ಅಪರಾಧ ಪ್ರಮಾಣ ಇಳಿಕೆಯ ನಡುವೆಯೂ ಬೆಚ್ಚಿಬೀಳಿಸುತ್ತಿದೆ NCRB ವರದಿ

State News
KARNATAKA

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

By kannadanewsnow05 KARNATAKA 1 Min Read

ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ…

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

BIG NEWS : ಸಚಿವ ಡಿ. ಸುಧಾಕರ್, ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚನೆ

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.