ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮುಂದಿನ 3 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಕಟ್ಟೆಗಳು ಮೈದುಂಬಿ ಹರಿಯುತ್ತಿವೆ. ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ ಮುಂದಿನ 3 ದಿನ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಜುಲೈ 5 ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನೂ, ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಧಾರವಾಡ ಹಾವೇರಿ ಜಿಲ್ಲೆಗಳಲ್ಲೂ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಈ ಭಾಗಗಳಲ್ಲಿನ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಷ್ಟೇ ಅಲ್ಲದೇ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿನೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Watch Video: ಜೋರು ಮಳೆ ನಡುವೆಯೂ ಆಹಾರ ತಲುಪಿಸಲು ಕುದುರೆಯನ್ನೇರಿ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್!
ಕ್ರೂಸರ್-ಕಾರು ನಡುವೆ ಭೀಕರ ಅಪಘಾತ: ತೆಲಂಗಾಣದ ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ