ಶಿವಮೊಗ್ಗ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುತ್ತಿದೆ. ನಾಳೆ ಕೂಡ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜೊತೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ 18-08-2025ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದಿದ್ದಾರೆ.
ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ. ಸದರಿ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ಸಾರ್ವತ್ರಿಕ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಸೂಚಿಸಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…
BREAKING: ಭಾರೀ ಮಳೆ ಹಿನ್ನಲೆ: ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಧರ್ಮಸ್ಥಳದ ಕುರಿತ ನಿರಂತರ ಅಪಪ್ರಚಾರಕ್ಕೆ ಬಿವೈ ವಿಜಯೇಂದ್ರ ತೀವ್ರ ಆಕ್ಷೇಪ: ಸಿಎಂ ಜನತೆ ಕ್ಷಮೆಗೆ ಒತ್ತಾಯ