ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿನಲ್ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಾಳೆ ಕೂಡ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ನಾಳೆ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ.
ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ, ಉಳ್ಳಾಲ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ನೀಡಿ ಡಿಸಿ ಮುಲೈ ಮುಗಿಲನ್ ಆದೇಶಿಸಿದ್ದಾರೆ.
ಇದು ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಶಾಲಾ ಮಕ್ಕಳು ಕೆಸರಲ್ಲಿ ನಡೆಯುವ ಮನಕಲಕುವ ಕಥೆ!