ಬೆಂಗಳೂರು: ನಗರದಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆ ಕೊಂಚ ಬಿಡುವು ಕೊಟ್ಟಿತ್ತು. ಆ ಬಳಿಕ ಇಂದು ಮತ್ತೆ ಆರ್ಭಟಿಸಿದೆ. ಇಂದು ಸಂಜೆಯಿಂದ ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಇದರ ನಡುವೆ ಮುಂದಿನ ಮೂರು ಗಂಟೆಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಗ್ರಾಮಾಂತರ, ನಗರ ವ್ಯಾಪ್ತಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವಂತ ಮುನ್ಸೂಚನೆಯನ್ನು ನೀಡಿರುವಂತ ಹವಾಮಾನ ಇಲಾಖೆ, ಗುಡುಗು ಸಿಡಿಲು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದಿದೆ.
ಇತ್ತ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲೂ ಮುಂಗಾರು ಮಳೆ ಆರ್ಭಟಿಸುತ್ತಿದೆ. ಜೂನ್.23ರವರೆಗೆ ಸಾಧಾರಣ ಮಳೆ, ಬೆಂಗಳೂರಿನಲ್ಲೂ ಸಾಧಾರಣ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಕ್ಕಳು ಪೋಷಕರ ಗೌರವ ಹೆಚ್ಚಿಸುವ ಕೆಲಸ ಮಾಡಿ: ದಕ್ಷಿಣ ಕನ್ನಡ ಮೋಗವೀರ ಮಹಾಸಭಾ ಅಧ್ಯಕ್ಷ ಜಯ ಸಿ ಕೋಟ್ಯಾನ್
BREAKING : ಬೆಂಗಳೂರಲ್ಲಿ ಕೃಷಿ ಹೊಂಡದಲ್ಲಿ ತಾಯಿ-ಮಗಳ ಮೃತದೇಹ ಪತ್ತೆ : ಪತಿಯೇ ಹತ್ಯೆಗೈದಿರುವ ಶಂಕೆ!