ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದಿನಿಂದ ಮತ್ತೆ ಆರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದಿನಿಂದ 6 ದಿನ ಗುಡುಗು, ಮಿಂಚು ಸಹಿತ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಇಂದಿನಿಂದ 6 ದಿನ ಗುಡುಗು, ಮಿಂಚು ಸಹಿತ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. #Karnatakarains pic.twitter.com/MfXqXOm1ON
— DIPR Karnataka (@KarnatakaVarthe) May 28, 2025
ಕಳೆದ ಒಂದು ವಾರದಿಂದ ಎಡಬಿಡದೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಚಳಿಗಾಳಿ ಬೀಸುತ್ತಿದ್ದು, ಜನರು ಹೊರ ಬರದಂತೆ ಆಗಿದೆ.
ಮಹಾಮಳೆಗೆ ರಾಜ್ಯದ ಹಲವೆಡೆ ಸಾವು-ನೋವುಗಳು ಸಂಭವಿಸಿದ್ದಾವೆ. ಅಲ್ಲಲ್ಲೇ ಮನೆ, ಧನದ ಕೊಟ್ಟಿಗೆಗಳು ಬಿದ್ದು ಹಾನಿಗೊಂಡಿದ್ದಾವೆ. ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಪರಿಹಾರ ನೀಡುವಂತ ಕಾರ್ಯವನ್ನು ಸ್ಥಳೀಯ ಆಡಳಿತಗಳು ಮಾಡುತ್ತಿವೆ.
Watch Video: ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ನೆರೆಮನೆಯವನ ಮೂಗು ಕಚ್ಚಿದ ಭೂಪ!
‘ಥಗ್ ಲೈಫ್’ ವಿವಾದ: ಕಮಲ್ ಹಾಸನ್ ಭಾಷಾ ಹೇಳಿಕೆಗೆ ಬಹಿಷ್ಕಾರ ಕರೆ | Thug of life