ಬೆಂಗಳೂರು: ಕಳೆದವಾರದಿಂದ ಬಿಡುವುಕೊಟ್ಟಿದ್ದ ಮಳೆ ಮತ್ತೆ ಶುರುವಾಗಿದೆ. ನಿನ್ನೆ ಸಂಜೆ ಬೆಂಗಳೂರಿನಲ್ಲಿ ಸುರಿದ ಮಳೆಗೆ ಜನರು ಮತ್ತೆ ರೋಸಿ ಹೋಗಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಮತ್ತೆ ಮಳೆ ಆರಂಭಗೊಂಡಿದೆ. ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇಂದು ಸಂಜೆಯ ಬಳಿಕ ಮತ್ತೆ ಮಳೆ ಶುರುವಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು – ಮಿಂಚಿನ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.