ಬೆಂಗಳೂರು : ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿದ್ದು, ಕರಾವಳಿ ಭಾಗದಲ್ಲಿ ವರುಣನ ಅಬ್ಬರದಿಂದ ಭಾರಿ ಆವಾಂತರಗಳು ಸೃಷ್ಟಿಯಾಗುತ್ತಿವೆ ಈ ಹಿನ್ನಲೆಯಲ್ಲಿ ಇಂದು ಆರು ಜಿಲ್ಲೆಗಳಲ್ಲಿನ ಹಲವು ತಾಲೂಕಿನ ಶಾಲಾ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹಾಸನದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇದೀಗ 6 ತಾಲೂಕುಗಳಿಗೆ ರಜೆ ಘೋಷಿಸಿದ್ದು, ಹಾಸನ, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು, ಹೊಳೆನರಸೀಪುರದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಅಲ್ಲದೆ ಬೆಳಗಾವಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಹಾವೇರಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇನ್ನು ಉತ್ತರ ಕನ್ನಡದ 6 ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು ಉತ್ತರ ಕನ್ನಡದ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಡಿಯ, ಹಳಿಯಾಳ, ಯಲ್ಲಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಚಿಕ್ಕಮಗಳೂರಲ್ಲಿ 6 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್ ಆರ್ ಪುರದಲ್ಲಿ ಪ್ರಾಥಮಿಕ ಮತ್ತು ಹೈಸ್ಕೂಲ್ ಗಳಿಗೆ ರಜೆ ಘೋಷಿಸಲಾಗಿದೆ.