ರಾಮನಗರ: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜನ ಜೀವನ ತತ್ತರಿಸಿ ಹೋಗಿದೆ. ಅನೇಕ ಕಡೆಯಲ್ಲಿ ರಸ್ತೆಗಳು ಮುಳುಗಡೆಯಾಗಿದ್ದರೇ, ಕೆಲ ರಸ್ತೆಗಳಲ್ಲಿನ ಅಂಡರ್ ಪಾಸ್ ಗಳು ಜಲಾವೃತಗೊಂಡು, ಸಂಚಾರ ಅಸ್ತವ್ಯಸ್ಥಗೊಂಡಿದೆ. ಅಲ್ಲದೇ ಅಂಡರ್ ಪಾಸ್ ನಲ್ಲಿ ಸಿಲುಕಿದಂತ ಬಸ್ ಒಂದರಿಂದ 50 ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ಮಳೆರಾಯಣ ಆರ್ಭಟಕ್ಕೆ ಜನರು ತತ್ತರಿಸಿ ಹೋಗುವಂತೆ ಆಗಿದೆ. ಭಾರೀ ಮಳೆಯಿಂದಾಗಿ ಬೆಂಗಳೂರು – ಮೈಸೂರು ರಸ್ತೆ ಜಲಾವೃತಗೊಂಡು, ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್: ಇನ್ಮುಂದೆ ರಸ್ತೆಗಳಲ್ಲಿ ನಿಲ್ಲಿಸೋ ಎಲ್ಲಾ ವಾಹನಗಳಿಗೆ ಶುಲ್ಕ
ಇನ್ನೂ ರಾಮನಗರದ ಬಿಳಗುಂಬ ಗ್ರಾಮದ ಬಳಿಯ ಬೆಂಗಳೂರು- ಮೈಸೂರು ರಸ್ತೆಯ ಅಂಡರ್ ಪಾಸ್ ನಲ್ಲಿ ಉದಯರಂಗ ಬಸ್ ಸಿಲುಕಿಕೊಂಡಿತ್ತು. ಈ ಬಸ್ ನಲ್ಲಿ 50ಕ್ಕೂ ಹೆಚ್ಚು ಜನರು ಇದ್ದರು.
ಬೆಂಗಳೂರಿನಿಂದ ಮಳವಳ್ಳಿಗೆ ಹೋಗುತ್ತಿದ್ದ ಬಸ್ ಕೆಟ್ಟು ಅಡರ್ ಪಾಸ್ ನಲ್ಲಿ ಸಿಲುಕಿದ ಕಾರಣ, ಅದರಲ್ಲಿದ್ದಂತ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಕ್ಷಣ ಕ್ಷಣಕ್ಕೂ ಮಳೆಯಿಂದಾಗಿ ಅಂಡರ್ ಪಾಸ್ ನಲ್ಲಿ ನೀರು ಹೆಚ್ಚಾಗುತ್ತಿರುವ ಕಾರಣ, ಬಸ್ ಮುಳುಗೋ ಭೀತಿಯಲ್ಲಿದೆ.
ಬೆಂಗಳೂರಿನಲ್ಲಿ ತಡರಾತ್ರಿ ಕುಡಿದ ಮತ್ತಿನಲ್ಲಿ ಆಫ್ರಿಕನ್ ಮಹಿಳೆಯರಿಂದ ಕಿರಿಕ್: ಪೊಲೀಸರ ಮೇಲೆ ಹಲ್ಲೆಗೂ ಯತ್ನ.?