ಮಡಿಕೇರಿ: ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಮಡಿಕೇರಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಆದೇಶಿಸಿದ್ದು, ಗುರುವಾರ, ಶುಕ್ರವಾರದಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ, ನಾಡಿದ್ದು ರಜೆ ಘೋಷಿಸಲಾಗಿದೆ ಅಂತ ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.
BREAKING: ಟಾಟಾ ಕೆಮಿಕಲ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್.ಚಂದ್ರಶೇಖರನ್ ರಾಜೀನಾಮೆ | N.Chandrasekaran Resign
ನಾಳೆ ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು-ಕಾಶ್ಮೀರದಲ್ಲಿ ಅಣಕು ಕವಾಯತು | Mega security drill