ಕೆಎನ್ಎನ್ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಭಾರೀ ಮಳೆಯ ಕಾರಣದಿಂದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ನಾಳೆ ಕೂಡ ವರುಣನ ಆರ್ಭಟ ಮುಂದುವರೆಯುವ ಕಾರಣ ರಾಜ್ಯದ ಕೆಲ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ 11 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಾಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಡಗೋಡು ಹೊರತುಪಡಿಸಿ ಜಿಲ್ಲೆಯ 11 ತಾಲ್ಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ನಾಳೆ ರಜೆಯನ್ನು ಘೋಷಿಸಲಾಗಿದೆ.
ಈ ಸಂಬಂಧ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದು, ನಾಳೆ ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಹೊನ್ನಾವರ, ಯಲ್ಲಾಪುರ, ಜೋಯಿಡಾ, ಹಳಿಯಾಳ, ಸಿದ್ದಾಪುರ, ಭಟ್ಕಳ, ದಾಂಡೇಲಿ ತಾಲ್ಲೂಕಿನ ಶಾಲಾ-ಕಾಲೇಜಿಗೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ.
ನಾಳೆ ಬೆಳಗಾವಿ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ರಜೆ
ಬೆಳಗಾವಿ ಜಿಲ್ಲೆಯ 7 ತಾಲ್ಲೂಕಿನ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಬೆಳಾಗವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ಮಳೆಯ ಕಾರಣ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರಜೆ ನೀಡಿ ಆದೇಶಿಸಿದ್ದಾರೆ.
ಹಾಸನ ಜಿಲ್ಲೆಯ ಈ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆ
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ ಹಾಸನ ಜಿಲ್ಲೆಯ ಸಕಲೇಶಪುರ, ಅರಕಲಗೋಡು ತಾಲ್ಲೂಕಿನ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ.
ಬೇಲೂರು ತಾಲ್ಲೂಕಿನ ಅರೆಹಳ್ಳಿ, ಬಿಕ್ಕೋಡು ಹೋಬಳಿಯ ಶಾಲೆಗಳಿಗೆ, ಆಲೂರು ತಾಲ್ಲೂಕಿನ ಕೆ.ಹೊಸಕೋಟೆ, ಪಾಳ್ಯ ಹೋಬಳಿಯ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಹಾಸನ ಜಿಲ್ಲೆಯ 2 ತಾಲ್ಲೂಕಿನ ನಾಲ್ಕು ಹೋಬಳಿಯ ಅಂಗನವಾಡಿ, ಶಾಲೆಗಳಿಗೆ ಮಾತ್ರವನೇ ನಾಳೆ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಡಿಸಿ ಲತಾಕುಮಾರಿ ರಜೆ ನೀಡಿ ಆದೇಶಿಸಿದ್ದಾರೆ.
ಧಾರವಾಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
ಧಾರವಾಡ ಜಿಲ್ಲೆಯಲ್ಲೂ ಮಳೆಯ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಧಾರವಾಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ನೀಡಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಆದೇಶಿಸಿದ್ದಾರೆ. ನಾಳೆ ಧಾರವಾಡ ಜಿಲ್ಲೆಯ ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ನಾಳೆ ರಜೆ ಘೋಷಿಸಿ ಡಿಸಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಭಾರತದಲ್ಲಿ ಮೊದಲ ಬಾರಿಗೆ: ವಂತಾರದಿಂದ ‘ಪಶುವೈದ್ಯಕೀಯ ತರಬೇತಿ ಕೋರ್ಸ್’ ಆರಂಭ
ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ: ಈವರೆಗೆ 6.24 ಲಕ್ಷ ಜನರಿಂದ ವೀಕ್ಷಣೆ