ಹೊಸದಿಲ್ಲಿ: ಮಾಂಡೌಸ್ ಚಂಡಮಾರುತದಿಂದ ಚೆನ್ನೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, 16 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ
ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ಉತ್ತರ ತಮಿಳುನಾಡು ಮತ್ತು ಪುದುಚೇರಿ ನಡುವೆ 70 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಗಾಳಿಯೊಂದಿಗೆ ಚೆನ್ನೈನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ.
ಶುಕ್ರವಾರ ಸಂಜೆಯಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ತಮಿಳುನಾಡಿನ ಕೆಲವು ಭಾಗಗಳು ಜಲಾವೃತಗೊಂಡಿವೆ.
ಕೆಟ್ಟ ಹವಾಮಾನದ ಕಾರಣ ದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 16 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇವುಗಳಲ್ಲಿ ಮೂರು ಅಂತರರಾಷ್ಟ್ರೀಯ ವಿಮಾನಗಳು ಸೇರಿವೆ ಎಂದು ಮಾಹಿತಿ ಲಭ್ಯವಾಗಿದೆ