ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮಕ್ಕಳ ಹಿತದೃಷ್ಟಿಯಿಂದ ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹತ್ತು ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶ ಹೊರಡಿಸಿದ್ದು, ಸೋಮವಾರ ಭಾರೀ ಮಳೆ ಜಿಲ್ಲೆಯಾಧ್ಯಂತ ಆಗಲಿದೆ ಅಂತ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ.
ಕೊಡಗು ಜಿಲ್ಲೆ
ಇನ್ನೂ ಕೊಡಗು ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರೆದಿದ್ದು, ಇಂದೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಹಿನ್ನೆಲೆಯಲ್ಲಿ ಕೊಡಗಿನ ಎಲ್ಲಾ ಶಾಲಾ-ಕಾಲೇಜುಗಳಿಗೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಿನಾಂಕ 15-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 15-07-2024 ರಂದು ರಜೆಯನ್ನು ಘೋಷಿಸಲಾಗಿದೆ.