ಮಡಿಕೇರಿ:ರಾಜ್ಯದಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಜನರು ಜನರು ತತ್ತರಿಸಿದ್ದಾರೆ. ವೀಪರಿತ್ಯ ಮಳೆಯಿಂದ ಕೊಡಗು ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ.
RAIN ALEART: ಕರ್ನಾಟಕ ಸೇರಿದಂತೆ ಈ ಮೂರು ರಾಜ್ಯಗಳಲ್ಲಿ ಮುಂದಿನ 3 ದಿನ ಭಾರಿ ಮಳೆ; ಐಎಂಡಿ ಮುನ್ಸೂಚನೆ
ರಾಷ್ಟ್ರೀಯ ಹೆದ್ದಾರಿ 275 ಮಡಿಕೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುತ್ತಿತ್ತು. ಆದರೆ ದೇವರಕೊಲ್ಲಿ ಕೊಯನಾಡು ಮಧ್ಯೆ ಇರುವ ಅರಣ್ಯ ಇಲಾಖೆಯ ಕಚೇರಿ ಬಳಿ ದೊಡ್ಡ ಪ್ರಮಾಣದಲ್ಲಿ ಬಿರುಕು ಕಾಣಿಸಿಕೊಂಡಿದ್ದು ರಸ್ತೆ ಸಂಪೂರ್ಣ ಕುಸಿದುಹೋಗುವ ಭೀತಿ ಎದುರಾಗಿದೆ.ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳಕ್ಕೆ ಮಡಿಕೇರಿ ತಹಶಿಲ್ದಾರ್ ಭೇಟಿ ನೀಡಿದ್ದು, ಭಾರೀ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದೆ.