ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿದಿದ್ದು ,ಮಳೆಯಿಂದಾಗಿ ಚಾಮುಂಡಿ ಬೆಟ್ಟದ ನಂದಿ ಮಾರ್ಗದಲ್ಲಿ ಮತ್ತೆ ರಸ್ತೆ ಕುಸಿತ ಸಂಭವಿಸಿದೆ.
ಮಳೆಯಿಂದಾಗಿ ವೀಕ್ಷಣಾ ಗೋಪುರದ ಪಕ್ಕದಲ್ಲೇ ರಸ್ತೆ ಕುಸಿತಗೊಂಡಿದೆ. ಧಾರಾಕಾರ ಮಳೆಗೆ ಈ ಹಿಂದೆಯೂ ರಸ್ತೆ ಕುಸಿಗೊಂಡಿತ್ತು.ಇದೀಗ ಒಂದು ಕಡೆ ರಸ್ತೆ ಕಾಮಗಾರಿ, ಇನ್ನೊಂದೆಡೆ ಭೂ ಕುಸಿತ ಸಂಭವಿಸಿದ್ದು,,ವಾಹನ ಸಂಚಾರಕ್ಕೆ ಭಾರೀ ಅಡ್ಡಿ ಉಂಟಾಗಿದೆ.
ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು (ಗುರುವಾರ) ಭಾರೀ ಮಳೆಯಾಗಲಿದೆ. 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದೆ.
ಇದೇ ವೇಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಈ ವರ್ಷ ಬೆಂಗಳೂರು 1,706 ಮಿಮೀ ದಾಖಲೆಯ ಮಳೆಯಾಗಿದೆ. ಈ ಮೂಲಕ ಬೆಂಗಳೂರಿನ ಮಳೆ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. 2017ರಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1,696 ಮಿಮೀ ಮಳೆಯಾಗಿತ್ತು.
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ವಿದರ್ಭ, ಮಧ್ಯ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದ ಮೇಲೆ ಲಘುವಾಗಿ ಮಳೆಯಾಗಬಹುದು. ಉತ್ತರಾಖಂಡ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಒಡಿಶಾ, ಛತ್ತೀಸ್ಗಢ ಮತ್ತು ವಿದರ್ಭದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಹಾಗೇ, ಲಕ್ಷದ್ವೀಪ, ಕೇರಳ, ತಮಿಳುನಾಡು, ಕರಾವಳಿ ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಮೇಘಾಲಯ, ಮಣಿಪುರ, ಮಿಜೋರಾಂ, ತೆಲಂಗಾಣ, ದಕ್ಷಿಣ ಮಧ್ಯಪ್ರದೇಶ, ಕೊಂಕಣ ಮತ್ತು ಗೋವಾ, ಮಹಾರಾಷ್ಟ್ರದಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ.