ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ನಾಳೆ ಉತ್ತರ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸಾಧ್ಯತೆ – Kannada News Now


India State

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ನಾಳೆ ಉತ್ತರ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತೆಲಂಗಾಣ,ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಮೂರು ದಿನಗಳ ಕಾಳ ಮಳೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 20 ಮತ್ತು 21 ರಂದು ಉತ್ತರ ಒಳನಾಡಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ರಾಯಚೂರು, ಗದಗ, ಬಾಗಲಕೋಟೆ, ಕೊಪ್ಪಳ, ಕಲಬುರ್ಗಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ.ೆ

ವಾಯುಭಾರ ಕುಸಿತದ ಪರಿಣಾಮ ಉತ್ತರ ಮಹಾರಾಷ್ಟ್ರ, ದಕ್ಷಿಣ ಕರಾವಳಿಯ ಸಮೀಪ ಚಂಡಮಾರುತ ಉಂಟಾಗುವ ಸಾಧ್ಯತೆ ಇದ್ದು ಉತ್ತರ ಕರ್ನಾಟಕದ ಹಲವು ಭಾಗ ಸೇರಿದಂತೆ ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
error: Content is protected !!