ಬೆಂಗಳೂರು : ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು ನಿನ್ನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅತಿಯಾದ ಮಳೆಯಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿತ್ತು. ಅಲ್ಲದೆ ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯ ಅಬ್ಬರ ಮುಂದುವರಿಯಲಿದ್ದು, ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 10 ರ ವರೆಗೆ ಮಳೆಯಾಗಲಿದೆ.
ಇಂದಿನಿಂದ ಅಕ್ಟೋಬರ್ 9ವರೆಗೆ 12 ಜಿಲ್ಲೆಗಳಿಗೆ ಯಲ್ಲೋ ಆರ್ಲಟ್ ಘೋಷಣೆಯಾಗಿದೆ. ಬೆಂಗಳೂರಿಗೆ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ ಇದೆ. ಇಂದಿನಿಂದ ಅಕ್ಟೋಬರ್ 9 ವೆರೆಗೆ ಸಿಲಿಕಾನ್ ಸಿಟಿಯಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಿ ಅ.9ವೆರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಯಲ್ಲಿ ಇಂದಿನಿಂದ ಅ.10 ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಂಗಳೂರು, ಕೊಡಗು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.