ನ.25ರಿಂದ ರಾಜ್ಯದಲ್ಲಿ ಮತ್ತೆ ʼ2 ದಿನʼ ಭಾರೀ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ನ.25ರಿಂದ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನ.25ರಂದು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ನ.26ರಂದು ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದ್ದು, ರಾಜ್ಯದ … Continue reading ನ.25ರಿಂದ ರಾಜ್ಯದಲ್ಲಿ ಮತ್ತೆ ʼ2 ದಿನʼ ಭಾರೀ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ