ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಇದೇ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು, ಉತ್ತರ ಒಳನಾಡಿನ ಜಿಲ್ಲೆಗಳಾದಂತ ವಿಜಯಪುರ, ಯಾದಗಿರಿ, ಕಲಬುರ್ಗಿ, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದಂತ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಯಲ್ಲಿ ನಾಳೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ.
ಇನ್ನೂ ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಮಂಡ್ಯ, ವಿಜಯನಗರ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರು ನಗರದಲ್ಲೂ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ.
ದೇಶದ 85 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲು: CRPF ಈ ಸಿಬ್ಬಂದಿಗಳಿಗೆ ಬಡ್ತಿ
CISF ಮಹಿಳಾ ಪೇದೆ ‘ನಟಿ ಕಂಗನಾ ರಣಾವತ್’ಗೆ ‘ಕಪಾಳಮೋಕ್ಷ’ ಮಾಡಿದ್ದು ಯಾಕೆ ಗಾತ್ತಾ? | Kangana Ranaut Slapped