ಗದಗ : ಗದಗ -ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಹಾಗೂ ಶಾಲಾ ಕಾಲೇಜು ಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಕ್ಕಳ ಆರೋಗ್ಯದ ಹಿತದೃಷ್ಠಿಯಿದ ಮತ್ತು ಹವಮಾನ ಇಲಾಖೆಯೂ ಮಳೆ ಮುಂದುವರಿಯುವ ಸಾಧ್ಯತೆಯ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಆಗಸ್ಟ್ 30ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ ಜನ ಜಾನುವಾರುಗಳ ಸುರಕ್ಷತೆಗೆ ಜಿಲ್ಲೆಯ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಮನವಿ ಮಾಡಿದ್ದಾರೆ.