ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಈಗಾಗಲೇ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನರು ಹೈರಾಣು ಆಗಿದ್ದಾರೆ. ಅದರಲ್ಲೂ ಕರವಾಳಿ ಭಾಗ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರೆದಿದೆ.

BIGG BREAKING NEWS : ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು

ಪಶ್ಚಿಮ ಘಟ್ಟಗಳಲ್ಲಿ ಮಳೆ ಅವಾಂತರ ಮುಂದುವರಿದಿದೆ. ಕುದುರೆಮುಖ ಭಾಗದಲ್ಲಿ ಭಾರೀ ಮಳೆ ಆಗ್ತಿದ್ದು, ಭದ್ರಾ ನದಿ ಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಹೊರನಾಡು-ಕಳಸ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗಿದೆ. ಹೀಗಾಗಿ ಪರ್ಯಾಯ ಮಾರ್ಗ ಹಳುವಳ್ಳಿ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ. ಅಷ್ಟೇ ಅಲ್ಲದೆ ಮನೆಗಳಿಗೆ ಮತ್ತು ತೋಟಗಳಿಗೆ ನೀರು ನುಗ್ಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

Share.
Exit mobile version