ಬೆಂಗಳೂರು : ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 16 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ʻಯೆಲ್ಲೋ, ಆರೆಂಜ್‌ʼ ಅಲರ್ಟ್‌ ಘೋಷಣೆ ಮಾಡಿದೆ.ಬಾಗಲಕೋಟೆ, ಗದಗ, ದಾವಣಗೆರೆ, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

Share.
Exit mobile version