ಬೆಂಗಳೂರು: ನಗರದಲ್ಲಿ ಈಗಾಗಲೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ಸಿಲಿಕಾನ್ ಸಿಟಿ ಜನತೆ ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಇಂದಿನಿಂದ ಆಗಸ್ಟ್.10ರವರೆಗೆ ಬೆಂಗಳೂರಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದೆ ಅಂತ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ.
ಈ ಬಗ್ಗೆ ಹವಾಮಾನ ತಜ್ಞ ಜಿಎಸ್ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದು, ಇಂದಿನಿಂದ ಆಗಸ್ಟ್.10ರವರೆಗೆ ಬೆಂಗಳೂರಲ್ಲಿ ಮಳೆ ಸಾಧ್ಯತೆ ಇದೆ. ಇವತ್ತು ಕರಾವಳಿ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗಿದೆ ಎಂದರು.
ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿರಾಲಿಯಲ್ಲಿ 9 ಸೆಂಟಿ ಮೀಟರ್ ಮಳೆಯಾಗಿದೆ. ರಾಯಚೂರಿನ ಗಬ್ಬೂರಿನಲ್ಲಿ 6 ಸೆಂಟಿ ಮೀಟರ್ ಮಳೆಯಾಗಿದೆ. ಬೆಂಗಳೂರಲ್ಲಿ 4 ಸೆಂಟಿ ಮೀಟರ್ ಆಗಿದೆ ಎಂದು ತಿಳಿಸಿದರು.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಾಳೆ, ನಾಡಿದ್ದು ಭಾರೀ ಮಳೆಯಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ನೀಡಲಾಗಿದೆ ಅಂತ ಹೇಳಿದರು.
BREAKING : ದೇಶದಿಂದ ಪರಾರಿಯಾಗಲು ಯತ್ನಿಸಿದ್ದ ಬಾಂಗ್ಲಾದೇಶದ ಮಾಜಿ ‘ಐಟಿ ಸಚಿವ’ ಅರೆಸ್ಟ್
ರಾಜ್ಯದಲ್ಲಿ ‘ವಿಪತ್ತು ನಿರ್ವಹಣೆ’ಗೆ ಎಲ್ಲಾ ಇಲಾಖೆಗಳು ಸಜ್ಜು: ಸಿಎಂ ಸಿದ್ಧರಾಮಯ್ಯ