ಬೆಂಗಳೂರು: ತಮಿಳುನಾಡು ತಿರುವಳ್ಳೂರು, ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ಮೈಲಾಡುತುರೈ, ನಾಗಪಟ್ಟಣಂ, ತಂಜಾವೂರು, ತಿರುವಾರೂರ್ ಮತ್ತು ಕಾರೈಕಲ್ ಜಿಲ್ಲೆಗಳಲ್ಲಿ ಇಂದು ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ.
BIGG NEWS : ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ : ಶಾಸಕ ಸಿ.ಟಿ. ರವಿ ಹೇಳಿದ್ದೇನು ಗೊತ್ತಾ?
ಹೀಗಾಗಿ ರಾಜ್ಯದಲ್ಲಿ ಮತ್ತೆ ಮಳೆ ಆತಂಕ ಶುರುವಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತವರಣ ನಿರ್ಮಾಣವಾಗಿದೆ.
ತಮಿಳುನಾಡಿನ ಇತರ ಭಾಗಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಿದೆ. ಚೆನ್ನೈ ಮತ್ತು ಇತರ ಪ್ರದೇಶಗಳಲ್ಲಿ ಇಂದು ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಪ್ರದೇಶಗಳಲ್ಲಿ ಡಿಸೆಂಬರ್ 25 ಮತ್ತು 26ರಂದು ಮಳೆಯಾಗುತ್ತದೆ ಎಂದು ಈ ಹಿಂದೆ IMD ಹೇಳಿತ್ತು. ಹೀಗಾಗಿ, ಇಂದು ತಮಿಳುನಾಡಿನ ದಕ್ಷಿಣ ಕರಾವಳಿಯಲ್ಲಿ ಭಾರೀ ಮಳೆಯೊಂದಿಗೆ ಅನೇಕ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 26ರಂದು ಕೇರಳದಲ್ಲಿ ಭಾರೀ ಮಳೆಯಾಗಲಿದೆ.