ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಇತ್ತೀಚಿಗೆ ಚುರುಕು ಪಡೆದುಕೊಳ್ಳುತ್ತಿದ್ದು, ಈ ನಡುವೆ ಒಂದು 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗದಲ್ಲಿ ಜೂ 24ರಂದು ಅತಿ ಭಾರಿ ಮಳೆ ಬೀಳುವ ಸಾಧ್ಯತೆ ಅಲ್ಲದೇ ಜೂ 25ರಿಂದ ಜೂ 28ರವರೆಗೆ ಅರೆಂಜ್ ಅಲರ್ಟ್ ನೀಡಿದೆ. ಬೆಳಗಾವಿ, ಧಾರವಾಡ, ದಾವಣಗೆರೆ, ಮಂಡ್ಯ, ಮೈಸೂರಿನಲ್ಲಿ ಮುಂದಿನ 2 ದಿನ ಯೆಲ್ಲೋ ಅರ್ಲಟ್ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಅಂಥ ತಿಳಿಸಿದೆ. ಇದಲ್ಲದೇ ಕರಾವಳಿ ಭಾಗದ ಜನತೆಗೆ ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರ ಇಳಿಯಬಾರದು ಎಂದು ಇಲಾಖೆ ಸಲಹೆ ನೀಡಿದೆ.