ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಜಲಪ್ರಳಯವೇ ಉಂಟಾಗಿದೆ. ಕೆಲ ಏರಿಯಾಗಳ ಅಪಾರ್ಮೆಂಟ್ ಗಳಿಗೆ ನೀರು ನುಗ್ಗಿದ ಪರಿಣಾಮ, ನೆರೆ ಸಂತ್ರಸ್ತರಾಗಿದ್ದಾರೆ. ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇದರ ನಡುವೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಯೆಲ್ಲೋ ಅಲರ್ಟ್ ಘೋಷಿಸಿದೆ.
ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ, ಬಳ್ಳಾರಿ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ 3 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನೂ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಯಲ್ಲೂ ಮಳೆಯಾಗಲಿದೆ ಎಂದಿದೆ. ಮುಂದಿನ ಮೂರು ಗಂಟೆಯಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಭಾನುವಾರವೂ ಮಳೆಯಾಗುವ ಕಾರಣ ರಾಜ್ಯದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ: ಅ.25ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಇತಿಹಾಸದಲ್ಲಿ ಮೊದಲ ಬಾರಿಗೆ 80,000 ರೂ.ಗಳನ್ನು ದಾಟಿದ ಚಿನ್ನದ ಬೆಲೆ | Gold Price