ಕಲಬುರಗಿ : ಕಲಬುರಗಿ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 2 ಮತ್ತು 3 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮುಂಜಾಗ್ರತೆ ವಹಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಗ್ರಾಮದಲ್ಲಿ ಕೆರೆ, ಹಳ್ಳ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುವ ಸಾಧ್ಯತೆ ಇದೆ. ಜಾನುವಾರುಗಳನ್ನು ನೀರು ಕುಡಿಸಲು ಕೆರೆ ಕಟ್ಟೆಗಳ ಬಳಿ ಹೋಗಬಾರದು. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು.
ಸಾರ್ವಜನಿಕ ಆಸ್ತಿ-ಪಾಸ್ತಿ, ಪ್ರಾಣ ಹಾನಿ ತಡೆಯುವ ದೃಷ್ಟಿಯಿಂದ ಜಿಲ್ಲಾಡಳಿತದ ಸೂಚನೆಯನ್ನು ಪಾಲಿಸಬೇಕು ಎಂದು ಈ ಮೂಲಕ ಕಲಬುರಗಿ ಜನತೆಯಲ್ಲಿ ಮನವಿ ಮಾಡಿದ್ದಾರೆ.