ಶಿವಮೊಗ್ಗ: ಜಿಲ್ಲೆಯಲ್ಲಿ ಎರಡು ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಹೊಸನಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆಯನ್ನು ಘೋಷಣೆ ಮಾಡಿರೋದಾಗಿ ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಈ ಸಂಬಂಧ ಸಾಗರ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಾಗರ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ತಿಳಿಯಪಡಿಸುವುದೆನೇಂದರೆ ಮಳೆಯ ಪ್ರಮಾಣ ಹೆಚ್ಚುತ್ತಿದ್ದು ಮಾನ್ಯ ತಹಸೀಲ್ದಾರ್ ರವರ ಸೂಚನೆ ಮೇರೆಗೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ದಿನಾಂಕ:16-07-2024 ರಂದು ಮಂಗಳವಾರ ಸಾಗರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಈ ದಿನವನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವಂತೆ ಸೂಚಿಸಿದ್ದಾರೆ.
ಇನ್ನೂ ಸಾಗರ ತಾಲ್ಲೂಕಿನಲ್ಲಿ ಯಥಾ ಸ್ಥಿತಿಯಲ್ಲಿ ಶಿಕ್ಷಕರಿಗೆ ತರಬೇತಿ ಇತ್ಯಾದಿ ಸಭೆಗಳು ಮುಂದುವರೆಯುತ್ತವೆ ಅಂತ ಮಾಹಿತಿ ನೀಡಿದ್ದಾರೆ. ಈ ಮೂಲಕ ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಕಾವೇರಿ ನದಿ ನೀರು ಬಿಡುಗಡೆ ವಿಚಾರ: ಕರ್ನಾಟಕದ ಬೆನ್ನಲ್ಲೇ, ಸರ್ವಪಕ್ಷಗಳ ಸಭೆ ಕರೆದ ‘ತಮಿಳುನಾಡು ಸರ್ಕಾರ’
HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ