ಜಮ್ಮುಕಾಶ್ಮೀರ: ರಿಯಾಸಿ ಜಿಲ್ಲೆಯ ಕತ್ರಾ ಪಟ್ಟಣದಲ್ಲಿರುವ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಸತತ ಎರಡನೇ ದಿನವೂ ಯಾತ್ರಾರ್ಥಿಗಳ ಸಂಚಾರವನ್ನು ಭಾರಿ ಮಳೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಇಂದು ಬೆಳಿಗ್ಗೆ ಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ವರದಿಯಾಗಿದೆ.
BIGG NEWS: ಇಂದು ಹಾವೇರಿ, ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಬಸವರಾಜ ಬೊಮ್ಮಾಯಿ
“ಪ್ರತಿಕೂಲ ಹವಾಮಾನದಿಂದಾಗಿ, ಯಾತ್ರೆಯನ್ನು ಭಾನುವಾರ ಬೆಳಿಗ್ಗೆಯವರೆಗೆ ಸ್ಥಗಿತಗೊಳಿಸಲಾಗಿದೆ” ಎಂದು ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿ ತಿಳಿಸಿದೆ.
ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಅನ್ನು ಈಗಾಗಲೇ ನಿಯೋಜಿಸಲಾಗಿದೆ. ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಏಜೆನ್ಸಿ ವರದಿ ಮಾಡಿದೆ.
ಭಾರಿ ಮಳೆಯಿಂದಾಗಿ ಶುಕ್ರವಾರ ಸಂಜೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ನಂತರ ಯಾತ್ರೆಯನ್ನು ಶನಿವಾರ ಬೆಳಿಗ್ಗೆ ಪುನರಾರಂಭಿಸಲಾಯಿತು. ನಿನ್ನೆ ಬೆಳಿಗ್ಗೆ 6.30 ರ ಸುಮಾರಿಗೆ 1,500 ಕ್ಕೂ ಹೆಚ್ಚು ಭಕ್ತರಿಗೆ ಹಳೆಯ ಟ್ರ್ಯಾಕ್ ನಲ್ಲಿ ತಮ್ಮ ಪ್ರಯಾಣವನ್ನು ಮುಂದುವರಿಸಲು ಅವಕಾಶ ನೀಡಲಾಯಿತು.