ಸುಭಾಷಿತ :

Monday, February 17 , 2020 5:14 AM

ಬೆಂಗಳೂರಿಗೆ ಅಮಿತ್ ಶಾ ಆಗಮನ ಹಿನ್ನೆಲೆ : ಹಲವೆಡೆ ಟ್ರಾಫಿಕ್ ಜಾಮ್ ಕಿರಿಕಿರಿ


Saturday, January 18th, 2020 3:54 pm

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಸಿಲಿಕಾನ್ ಸಿಟಿಗೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ಅಮಿತ್ ಶಾ ಜಯನಗರದ 5 ನೇ ಹಂತದಲ್ಲಿ ಸಂಸದರ ಕಚೇರಿಯನ್ನು ಉದ್ಘಾಟಿಸಿದರು. ಬಳಿಕ ಅಮಿತ್ ಶಾ ಎಚ್.ಎ.ಎಲ್ ನತ್ತ ಪ್ರಯಾಣ ಬೆಳೆಸಿದರು.

ಈ ಮಧ್ಯೆ, ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಉದ್ಯಾನನಗರಿಯ ಹಲವೆಡೆ ಭಾರಿ ವಾಹನ ದಟ್ಟಣೆ ಉಂಟಾಗಿದ್ದು, ಕಳೆದ ಒಂದೂವರೆ ಗಂಟೆಯಿಂದ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಯಿತು. ವಿಧಾನಸೌಧದ ಸುತ್ತಮುತ್ತಲ ರಸ್ತೆಗಳು, ರೇಸ್ ಕೋರ್ಸ್ ರಸ್ತೆ, ಮಲ್ಲೇಶ್ವರಂ, ಕೆ.ಆರ್.ಸರ್ಕಲ್, ನೃಪತುಂಗ ರಸ್ತೆ, ಕಾರ್ಪೋರೇಶನ್ ಸರ್ಕಲ್, ಮೇಖ್ರಿ ಸರ್ಕಲ್ ಸೇರಿದಂತೆ ಹಲವೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು…

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions