ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಅಂದರೆ ಹುಲಿಕಲ್ ಘಾಟ್ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಇಂದು ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳೆಬರೆ ಘಾಟ್ ಸರಪಳಿ 42.10 ರಿಂದ 42.20 ರಲ್ಲಿನ ಹೇರ್ ಪಿನ್ ತಿರುವಿನಲ್ಲಿ ಮೇ ಅಂತ್ಯದಲ್ಲಿ ಬಿದ್ದಂತಹ ಮಳೆಯಿಂದ ಕಾಂಕ್ರಿಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಪ್ರಸ್ತುತ ಮಣ್ಣು ಕುಸಿತವಾಗಿರುವ ಭಾಗದಲ್ಲಿ ತಾತ್ಕಾಲಿಕವಾಗಿ ದುರಸ್ಥಿ ಕಾರ್ಯ ಕೈಗೊಂಡಿರುವುದಾಗಿ, ಮತ್ತೆ ಮಳೆ ಚುರುಕುಗೊಂಡಿರುವುದರಿಂದ ಮಣ್ಣು ಮತ್ತೆ ಕುಸಿಯುವ ಸಂಭವವಿರುವುದರಿಂದ, ಸುರಕ್ಷತಾ ದೃಷ್ಠಿಯಿಂದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟಿ ಮಾರ್ಗ ವ್ಯಾಪ್ತಿಯಲ್ಲಿ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲದವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಾತ್ಕಾಲ ಲಿಕವಾಗಿ ಈ ಕಳಕಂಡಂತೆ ಅಧಿಸೂಚನೆ ಹೊರಡಿಸಲು ಕಾರ್ಯಪಾಲಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಶಿವಮೊಗ್ಗ ವಿಭಾಗ ಶಿವಮೊಗ್ಗ ರವರು ಉಲ್ಲೇಖದಂತೆ ಕೋರಿರುತ್ತಾರೆ.
ಸದರಿ ಪ್ರಸ್ತಾವನೆಯಂತೆ ಪೊಲೀಸ್ ಅಧಿಕ್ಷಕರು, ಶಿವಮೊಗ್ಗ ಜಿಲ್ಲೆ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು,ಶಿವಮೊಗ್ಗ ಜಿಲ್ಲೆ ಮತ್ತು ಜಿಲ್ಲಾಧಿಕಾರಿಗಳು, ಉಡುಪಿ ಜಿಲ್ಲೆ ಇವರ ಉಲ್ಲೇಖ (2) (3) (4) ವರದಿಗಳನ್ವಯ, SH-52 ರ ಬಾಳೆಬರೆ ಘಾಟ್ ನಲ್ಲಿ ಮಳೆ ಚುರುಕುಗೊಂಡಿರುವುದರಿಂದ ಮಣ್ಣು ಮತ್ತೆ ಕುಸಿಯುವ ಸಂಭವವಿರುವುದರಿಂದ ಭಾರಿ ವಾಹನಗಳ ಸಂಚಾರ ನಿಷೇದ ಮಾಡಿ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬಹುದಾಗಿ ವರದಿ ಸಲ್ಲಿಸಿರುತ್ತಾರೆ.
ಸದರಿ ಉಲ್ಲೇಖಗಳನ್ನು ಪರಿಶೀಲಿಸಿ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇವ ಮೋಟಾರ್ ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರ್ ವಾಹನಗಳ ನಿಯಮಾವಳಿಗಳು 1989 ರ ಕಲಂ 221(ಎ) (2) & (5) ರನ್ವಯ, SH-52ರ ಬಾಳೆಬರೆ ಘಾಟ್ ನ ಮೂಲಕ ಭಾರಿ ವಾಹನಗಳ ಸಂಚಾರ ನಿಷೇದ ಮಾಡುವುದು ಅಗತ್ಯವೆಂದು ಮನಗಂಡು ತಾತ್ಕಾಲಿಕವಾಗಿ ಮಳೆಗಾಲ ಮುಗಿಯುವವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ, ಈ ಕೆಳಕಂಡ ಪರ್ಯಾಯ ಮಾರ್ಗಗಳಲ್ಲಿ ತಾತ್ಕಾಲಿಕವಾಗಿ ಸಂಚರಿಸಲು ಆದೇಶಿಸಿದೆ.