ಬೆಂಗಳೂರು : ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.. ಸಿನಿಮಾದಲ್ಲಿ ವೀರಗಾಸೆ ಕಲೆ ಮತ್ತು ವೀರಭದ್ರ ದೇವರಿಗೆ ಅಪಮಾನ ಮಾಡಲಾಗಿದೆ ಕಲಾವಿದರು ಆಕ್ಷೇಪಿಸಿದ್ದಾರೆ.
ಈ ಹಿನ್ನೆಲೆ ಇಂದು ಮಧ್ಯಾಹ್ನ 3 ಗಂಟೆಗೆ ಫಿಲ್ಮ್ ಚೇಂಬರ್ ಸಭೆ ನಿಗದಿಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾಮಾ ಹರೀಶ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಹೆಡ್ ಬುಷ್ ಚಿತ್ರತಂಡದೊಂದಿಗೆ ಮಾತುಕತೆ ನಡೆಯಲಿದ್ದು, ವಿವಾದ ಇಲ್ಲಿದೆ ಅಂತ್ಯಗೊಳ್ಳುವ ನಿರೀಕ್ಷೆಯಿದೆ.ನಟ ಧನಂಜಯ್, ಅಗ್ನಿ ಶ್ರೀಧರ್, ಕರಗ ಸಮಿತಿ ಸದಸ್ಯರು ಭಾಗಿಯಾಗಲಿದ್ದಾರೆ. ಇಂದು ಚಿತ್ರತಂಡವನ್ನು ವಾಣಿಜ್ಯ ಮಂಡಳಿಗೆ ಕರೆಸುತ್ತೇ, ಚಿತ್ರತಂಡ ಮತ್ತು ಕರಗ ಸಮಿತಿ ಸದಸ್ಯರನ್ನು ಎದುರು ಬದುರು ಕೂರಿಸಿ ಸಮಸ್ಯೆ ಇರ್ತ್ಯರ್ಥ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇನ್ನೂ, ಹೆಡ್ ಬುಷ್’ ಸಿನಿಮಾದಲ್ಲಿ ವಿವಾದ ಬೆನ್ನಲ್ಲೇ ನಟ ಡಾಲಿ ಧನುಂಜಯ್ ಸುದ್ದಿಗೋಷ್ಟಿ ನಡೆಸಿ “ವೀರಾಗಾಸೆ ಕಲಾವಿದರಿಗೆ ನೋವಾಗಿದ್ರೆ ಕ್ಷಮೆ ಕೇಳುತ್ತೇನೆ ” ಎಂದು ಸ್ಪಷ್ಟಪಡಿಸಿದ್ದಾರೆ.ಧನಂಜಯ್ (Dhananjay) ನಟನೆಯ ‘ಹೆಡ್ ಬುಷ್’ ಸಿನಿಮಾ ಸಾಕಷ್ಟು ಸುದ್ದಿ ಆಗುತ್ತಿದೆ. ಈ ಚಿತ್ರದಲ್ಲಿ ವೀರಗಾಸೆಯವರಿಗೆ ಅವಮಾನ ಮಾಡಲಾಗಿದೆ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ಅವರ ಡಾಲಿ ಧನಂಜಯ್ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಸ್ಪಷ್ಟನೆ ನೀಡಿದ್ದರು.
ಧನಂಜಯ್ ಮಾತ್ರವಲ್ಲದೆ ಅಖಿಲ ಭಾರತ ವೀರಶೈವ ಸಂಘದ ಬೆಂಗಳೂರು ಜಿಲ್ಲಾಧ್ಯಕ್ಷ ಎಸ್. ಗುರುಸ್ವಾಮಿ ಮೊದಲಾದವರು ಈ ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದಾರೆ.ಸಿನಿಮಾದಲ್ಲಿ ವೀರಾಗಾಸೆ ವಿವಾದ ಸೃಷ್ಟಿಸಿದವರಿಗೆ ನಟ ಡಾಲಿ ಧನುಂಜಯ್ ಪ್ರಶ್ನೆಯನ್ನು ಕೇಳಿದ್ದಾರೆ ಈ ವರೆಗೆ ಅವರ ಬಗ್ಗೆ ಯಾವತ್ತಾದ್ರೂ ಯೋಚಿಸಿದ್ದೀರಾ. ಅವರಿಗೆ ಸರ್ಕಾರಿಂದ ಮಾಸಾಶನ ನೀಡಬೇಕು. ನಾನು ಕೂಡ ವೀರಭದ್ರ ದೇವರ ಆರಾಧಕ ಆಗಿರುವುದರಿಂದ ಯಾವುದೇ ಕಾರಣಕ್ಕೂ ಅವಮಾನ ಮಾಡಿಲ್ಲ. ಈ ವಿಷಯವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುತ್ತೇನೆ. ನನಗೂ ವೀರಭದ್ರ ದೇವರ ಮೇಲೆ ಅಪಾರ ಭಕ್ತಿ.. ಹಾಗಾಗಿ ನನ್ನಿಂದ ಯಾವುದೇ ಅವಮಾನ ಆಗುವಂತಹ ಕೆಲಸ ಆಗಲ್ಲ ಧನಂಜಯ್ಎಂದಿದ್ದಾರೆ.
BREAKING NEWS: ಸರ್ಕಾರದಿಂದ ಓಲಾ, ಉಬರ್ ಗೆ ಮೂಗುದಾರ; ಮುಂದಿನ ವಾರದಲ್ಲೇ ಹೊಸ ದರ ನಿಗದಿ