ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧಕ್ಕೆ ಒಳಗಾಗಿರುವಂತ ಹೇಮಂತ್ ಸೊರೆನ್ ಅವರು ಜೈಲು ಪಾಲಾಗೋ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಆಯ್ಕೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ರಾಜಭವನಕ್ಕೆ ತೆರಳಿರುವಂತ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಹೇಮಂತ್ ಸೊರೆನ್ ಬದಲಿಗೆ ಚಂಪೈ ಸೊರೆನ್ ಜಾರ್ಖಂಡ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಬುಧವಾರ ಪ್ರಕಟಿಸಿದೆ.
ಈ ಬೆನ್ನಲ್ಲೇ ಸಿಎಂ ಹೇಮಂತ್ ಸೊರೆನ್ ಇಡಿ ಅಧಿಕಾರಿಗಳೊಂದಿಗೆ ರಾಜಭವನಕ್ಕೆ ತೆರಳಿದಂತ ಅವರು, ತಮ್ಮ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನು ಜೆಎಂಎಂ ರಾಜ್ಯಸಭಾ ಸಂಸದ ಮಹುವಾ ಮಾಝಿ ಹೇಳಿದ್ದಾರೆ.
‘ಭೂ ಹಗರಣ’ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಹೇಮಂತ್ ಸೊರೆನ್ ಅವರನ್ನು ಇಡಿ ವಿಚಾರಣೆಗೆ ಒಳಪಡಿಸುವ ಮಧ್ಯೆ ಈ ಸುದ್ದಿ ಬಂದಿದೆ. ನಾಪತ್ತೆಯಾಗಿದ್ದ ಮಾಜಿ ಸಿಎಂ ನಿನ್ನೆ ರಾಂಚಿಯ ತಮ್ಮ ನಿವಾಸದಲ್ಲಿ ಕೇಂದ್ರ ಸರ್ಕಾರಿ ಸಂಸ್ಥೆ ದಾಳಿ ನಡೆಸಿದ ನಂತರ 36 ಲಕ್ಷ ರೂ ಮತ್ತು ಎಸ್ಯುವಿಯನ್ನು ವಶಪಡಿಸಿಕೊಂಡಿದ್ದರು. ಇದೇ ಪ್ರಕರಣದಲ್ಲಿ ಈಗ ಇಡಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವಂತ ಹೇಮಂತ್ ಸೊರೆನ್ ಅವರು, ತಮ್ಮ ಜಾರ್ಖಂಡ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಫೆ.19, 20ರಂದು ರಾಜ್ಯಮಟ್ಟದ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ
BREAKING : ‘CUET PG 2024’ ನೋಂದಣಿ ಗಡುವು ವಿಸ್ತರಣೆ ; ಫೆ.7ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ