ತುಮಕೂರು : ಕುಣಿಗಲ್ ತಾಲೂಕಿನ ಎಲ್ಲಾ ಗ್ರಾಮಗಳಿಗೂ ಹೇಮಾವತಿ ನೀರು ಒದಗಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆಶ್ವಾಸನೆ ನೀಡಿದರು.

ತುಮಕೂರಿನ ಕುಣಿಗಲ್ ನಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಹೇಮಾವತಿ ಕಾಲುವೆ ಮೂಲಕ ನೀರು ಪೂರೈಸಲಾಗುತ್ತದೆ, ಮಾರ್ಕೋನಹಳ್ಳಿ ಜಲಾಶಯದಿಂದ ಮಂಗಳ ಜಲಾಶಯಕ್ಕೆ ನೀರು ಹರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಬೊಮ್ಮಾಯಿ ಹೇಳಿದರು.

ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಎಂದು ಸಿಎಂ ಬೊಮ್ಮಾಯಿ ಗುಡುಗಿದ್ದಾರೆ.ಜನಸಂಕಲ್ಪ ಯಾತ್ರೆ ನಮ್ಮ ನಿರೀಕ್ಷೆ ಮೀರಿ ಮುನ್ನುಗ್ಗುತ್ತಿದೆ, ಎಲ್ಲೆಡೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದರು.ಇಡೀ ದೇಶದಲ್ಲಿ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ರಾಜ್ಯದಲ್ಲಿ ಕೂಡ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ಈ ಬಾರಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಕಾಂಗ್ರೆಸ್ ವಿರುದ್ಧ ಗುಡುಗಿದ ಬೊಮ್ಮಾಯಿ ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಆಗಿದೆ.ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ನ್ನು ಬಿಜೆಪಿ ಕ್ಲೀನ್ ಸ್ವಿಪ್ ಮಾಡಲಿದೆ.ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ, ಜಾತಿ ಆಧಾರಿತವಾಗಿ ವೋಟ್ ಕೇಳುತ್ತಿದೆ, ಸಿದ್ದರಾಮಯ್ಯ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ತಲೆದಿಂಬು ವಿತರಣೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಸಿಎಂ ಬೊಮ್ಮಾಯಿ ಗುಡುಗಿದ್ದಾರೆ.

Better Sleep Tips: ಮಲಗಿದಾಗ ರಾತ್ರಿ ಹಠಾತ್ತನೆ ಎಚ್ಚರವಾಗುತ್ತಾ? ಈ ಸಮಸ್ಯೆಗೆ ಇಲ್ಲಿದೆ ಸಿಂಪಲ್ ಟಿಪ್ಸ್

ಮತ್ತೆ ಬಂತಾ ‘ಝಾಂಬಿ ವೈರಸ್’.? ರಸ್ತೆಯಲ್ಲಿ ವಿಚಿತ್ರವಾಗಿ ವರ್ತಿಸೋ ವ್ಯಕ್ತಿಗಳ ಆಘಾತಕಾರಿ ವಿಡಿಯೋ ವೈರಲ್

Share.
Exit mobile version