ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಂತ ಭಕ್ತರ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿತ್ತು. ಈ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಇನ್ಮುಂದೆ ಮಲೆಮಹದೇಶ್ವರ ಬೆಟ್ಟಕ್ಕೆ ರಾತ್ರಿ ವೇಳೆ ಪಾದಯಾತ್ರೆಗೆ ನಿಷೇಧ ಹೇರಲಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆಗೆ ಭಕ್ತ ಪ್ರವೀಣ್ ಬಲಿ ಪ್ರಕರಣದಿಂದಾಗಿ ಅರಣ್ಯ ಇಲಾಖೆ ಕಟ್ಟು ನಿಟ್ಟಿನ ಕ್ರಮವಹಿಸಿದೆ. ಇನ್ಮುಂದೆ ಬೆಟ್ಟಕ್ಕೆ ತೆರಳುವ ಪಾದಯಾತ್ರಿಗಳಿಗೆ ಹೊಸ ನಿಯಮ ಜಾರಿಗೊಳಿಸಿದೆ. ಅದರಂತೆ ಮಲೆ ಮಹದೇಶ್ವರ ಬೆಟ್ಟಕ್ಕೆ ಇನ್ಮುಂದೆ ರಾತ್ರಿ ವೇಳೆ ಪಾದಯಾತ್ರೆ ಬಂದ್ ಮಾಡಲಾಗಿದೆ.
ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆ ಮಾಡೋದಕ್ಕೆ ನಿರ್ಬಂಧ ಹೇರಲಾಗಿದೆ. ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ರಾತ್ರಿ ವೇಳೆ ಪಾದಯಾತ್ರೆಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ನಡೆದಂತ ಮಹತ್ವದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ರಾತ್ರಿ ವೇಳೆ ಪಾದಯಾತ್ರೆಗಿ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಚಿನ್ನದ ಬೆಲೆ ಮತ್ತೆ ದಿಢೀರ್ ಏರಿಕೆ: ಇಂದು 10 ಗ್ರಾಂ ಬಂಗಾರ 1.60 ಲಕ್ಷ ರೂಪಾಯಿ | Gold Price Today








