Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ : ಶತಾಯುಷಿ ತಾಯಿಯ ನಿಧನದ ಸುದ್ದಿ ತಿಳಿದು 75 ವರ್ಷದ ಮಗಳು ಸಾವು.!

ಇಂದು ಅಹಮದಾಬಾದ್ ನಲ್ಲಿ 19ನೇ ಆವೃತ್ತಿಯ `IPL’ಫೈನಲ್ : `RCB’ಗೆ ಈ ಸಲವೂ ಸಿಗುತ್ತಾ ಕಪ್?

BIG NEWS : ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಫೇಸ್, ಲೊಕೇಶನ್ ಹಾಜರಾತಿ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಲ್ಲಿದೆ ಇಂದು ಸಿಎಂ ಸಿದ್ಧರಾಮಯ್ಯ KSRTC ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು
KARNATAKA

ಇಲ್ಲಿದೆ ಇಂದು ಸಿಎಂ ಸಿದ್ಧರಾಮಯ್ಯ KSRTC ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳೊಂದಿಗೆ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು:

• ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಯಾವತ್ತೂ ದುಡಿಯುವ ವರ್ಗದ ಪರವಾಗಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

• ಹಿಂದಿನ ಸರ್ಕಾರ ಸುಮಾರು 40 ಸಾವಿರ ಕೋಟಿ ರೂ. ಬಾಕಿ ಬಿಲ್ಲುಗಳನ್ನು ಉಳಿಸಿ ಹೋಗಿದೆ. ಇದು ಸರ್ಕಾರದ ಮೇಲೆ ಆರ್ಥಿಕ ಹೊರೆ ಉಂಟು ಮಾಡಿದೆ. ಸರ್ಕಾರದ ಇತಿಮಿತಿಯ ಒಳಗಾಗಿ ಬೇಡಿಕೆಗಳನ್ನು ಪರಿಶೀಲಿಸಲಾಗುವುದು.

• ಸಾರಿಗೆ ನೌಕರರಿಗೆ ಸಮಾನ ವೇತನ ಜಾರಿ ಸೇರಿದಂತೆ ಎಲ್ಲಾ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಬೇಡಿಕೆಗಳ ಈಡೇರಿಕೆ ಕುರಿತಾಗಿ ಇನ್ನೊಮ್ಮೆ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆಯನ್ನು ಆದಷ್ಟು ಬೇಗನೆ ಕರೆಯಲಾಗುವುದು ಎಂದರು.

• ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸಂಸ್ಥೆಗೆ ರೂ. 4ಸಾವಿರ ಕೋಟಿಯಷ್ಟು ಮೊತ್ತವನ್ನು ಹಿಂದಿನ ಸರ್ಕಾರ ಬಾಕಿ ಉಳಿಸಿ ಹೋಗಿತ್ತು. ಸಂಸ್ಥೆಯನ್ನು ಬಲಪಡಿಸಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ನೌಕರರಿಗೆ ನಗದು ರಹಿತ ಚಿಕಿತ್ಸೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ವರ್ಷದ ಬಜೆಟ್ನಲ್ಲಿ 350 ಕೋಟಿ ಸಾಲವನ್ನು ಪಡೆಯಲು ಸಂಸ್ಥೆಗೆ ಅನುಮತಿ ನೀಡಲಾಗಿದೆ. ಸಂಸ್ಥೆಯನ್ನು ಇನ್ನಷ್ಟು ಬಲಪಡಿಸಲು 2ಸಾವಿರ ಬಸ್ಗಳನ್ನು ಹೊಸದಾಗಿ ಖರೀದಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾಹಿತಿ ನೀಡಿದರು.

• ಚಾಲಕ ಮತ್ತು ನಿರ್ವಾಹಕರ ಮಾದರಿಯಲ್ಲಿ ಮೆಕ್ಯಾನಿಕ್ಗಳ ನೇಮಕಾತಿಗೆ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

• ದಿನಾಂಕ 01/01/24 ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳ ಮತ್ತು ನೌಕರರ ವೇತನ ಪರಿಷ್ಕರಣೆ ಮಾಡಬೇಕು. ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನವನ್ನು ಸಾರಿಗೆ ನೌಕರರಿಗೂ ಜಾರಿಗೊಳಿಸಬೇಕು.

• 01.01.20ರಿಂದ ಜಾರಿಯಾಗಬೇಕಾದ ವೇತನ ಪರಿಷ್ಕರಣೆ 01.03.23ರಿಂದ ಅನುಷ್ಠಾನಕ್ಕೆ ಬಂದಿದ್ದು, 38 ತಿಂಗಳ ಬಾಕಿ ಹಣವನ್ನು ಪಾವತಿಸಬೇಕು.

• ಈ ಹಿಂದೆ 2020 ಮತ್ತು 2021ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಬೇಕು.

• ಸಾರಿಗೆ ನಿಗಮದ ವಿದ್ಯುತ್ ಬಸ್ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು. ಸದರಿ ಬಸ್ಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ದತಿಯನ್ನು ಕೈಬಿಡಬೇಕು ಎಂದು ಕಾರ್ಮಿಕ ಸಮಿತಿಗಳ ಪ್ರತಿನಿಧಿಗಳು ಮನವಿ ಮಾಡಿದರು.

• ಸಚಿವರಾದ ಜಿ.ಪರಮೇಶ್ವರ್, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜ್, ನಸೀರ್ ಅಹ್ಮದ್, ಸಾರಿಗೆ ನಿಗಮಗಳ ಅಧ್ಯಕ್ಷರಾದ ಎಸ್.ಆರ್.ಶ್ರೀನಿವಾಸ್, ರಾಜು ಕಾಗೆ, ಕಾರ್ಮಿಕ ಮುಖಂಡರು, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರವೀಣ್ ನೆಟ್ಟರ್ ಹತ್ಯೆ ಪ್ರಕರಣ: ಮತ್ತೆ ನಾಲ್ವರ ವಿರುದ್ಧ NIA ಆರೋಪ ಪಟ್ಟಿ ಸಲ್ಲಿಕೆ | Praveen Nettar murder case

ವಾಹನ ಸವಾರರೇ ಗಮನಿಸಿ : ಕೇವಲ 3,000 ರೂ.ಗೆ `ಫಾಸ್ಟ್ ಟ್ಯಾಗ್ ಪಾಸ್’ ಪಡೆದ್ರೆ ಎಲ್ಲಾ ಟೋಲ್ ಗಳಲ್ಲೂ ಅನ್ ಲಿಮಿಟೆಡ್ ಪ್ರವೇಶ.!

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ : ಶತಾಯುಷಿ ತಾಯಿಯ ನಿಧನದ ಸುದ್ದಿ ತಿಳಿದು 75 ವರ್ಷದ ಮಗಳು ಸಾವು.!

1 Min Read

ಇಂದು ಅಹಮದಾಬಾದ್ ನಲ್ಲಿ 19ನೇ ಆವೃತ್ತಿಯ `IPL’ಫೈನಲ್ : `RCB’ಗೆ ಈ ಸಲವೂ ಸಿಗುತ್ತಾ ಕಪ್?

2 Mins Read

BIG NEWS : ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಫೇಸ್, ಲೊಕೇಶನ್ ಹಾಜರಾತಿ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

2 Mins Read
Recent News

ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ : ಶತಾಯುಷಿ ತಾಯಿಯ ನಿಧನದ ಸುದ್ದಿ ತಿಳಿದು 75 ವರ್ಷದ ಮಗಳು ಸಾವು.!

ಇಂದು ಅಹಮದಾಬಾದ್ ನಲ್ಲಿ 19ನೇ ಆವೃತ್ತಿಯ `IPL’ಫೈನಲ್ : `RCB’ಗೆ ಈ ಸಲವೂ ಸಿಗುತ್ತಾ ಕಪ್?

BIG NEWS : ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಫೇಸ್, ಲೊಕೇಶನ್ ಹಾಜರಾತಿ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

BIG NEWS : ಜೂ.3ರ ಸಂಜೆ 4.05ಕ್ಕೆ ಕರ್ನಾಟಕದ 25ನೇ `CM’ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ.!

State News
KARNATAKA

ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ : ಶತಾಯುಷಿ ತಾಯಿಯ ನಿಧನದ ಸುದ್ದಿ ತಿಳಿದು 75 ವರ್ಷದ ಮಗಳು ಸಾವು.!

By kannadanewsnow57 KARNATAKA 1 Min Read

ಬಾಗಲಕೋಟೆ : ಹೆತ್ತ ತಾಯಿಯ ಮಮತೆ ಹಾಗೂ ಮಗಳ ಜನ್ಮಜನ್ಮಾಂತರದ ಅನುಬಂಧಕ್ಕೆ ಸಾಕ್ಷಿಯಾದ ಹೃದಯವಿದ್ರಾವಕ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿ…

ಇಂದು ಅಹಮದಾಬಾದ್ ನಲ್ಲಿ 19ನೇ ಆವೃತ್ತಿಯ `IPL’ಫೈನಲ್ : `RCB’ಗೆ ಈ ಸಲವೂ ಸಿಗುತ್ತಾ ಕಪ್?

BIG NEWS : ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಫೇಸ್, ಲೊಕೇಶನ್ ಹಾಜರಾತಿ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

BIG NEWS : ಜೂ.3ರ ಸಂಜೆ 4.05ಕ್ಕೆ ಕರ್ನಾಟಕದ 25ನೇ `CM’ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.