ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಆ ಸಭೆಯ ಮುಖ್ಯಾಂಶಗಳನ್ನು ಮುಂದೆ ಓದಿ.

• ಹೊಸಪೇಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಾಗೂ 120 ತಾಲ್ಲೂಕುಗಳಲ್ಲಿ ತಾಲ್ಲೂಕು ಕ್ರೀಡಾಂಗಣಗಳಿಲ್ಲ. ಕಳೆದ ಐದು ವರ್ಷಗಳಲ್ಲಿ ಶೇ. 95 ರಷ್ಟು ಕಾಮಗಾರಿಗಳನ್ನು ಕೆ.ಆರ್.ಐ.ಡಿ.ಎಲ್. ಮೂಲಕ ಮಾಡುತ್ತಿದ್ದಾರೆ. ಟೆಂಡರ್‌ ಕರೆಯದೆ ಮಾಡುತ್ತಿದ್ದಾರೆ. ಎರಡು ಕೋಟಿ ಮಿತಿಯಲ್ಲಿ ಕಾಮಗಾರಿಗಳನ್ನು ಸೀಮಿತಗೊಳಿಸಿ, ಅಪೂರ್ಣವಾಗಿರುವಂತಹ ಸ್ಥಿತಿ ಒದಗಿಸದೆ ಎಂದು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ತಿಳಿಸಿದರು. ಇಲಾಖೆಯ ಕಾಮಗಾರಿಗಳ ಯೋಜನೆ ರೂಪಿಸಲು, ಮೇಲ್ವಿಚಾರಣೆಗೆ ಲೋಕೋಪಯೋಗಿ ಇಲಾಖೆಯಿಂದ ಇಬ್ಬರು ಎಂಜಿನಿಯರುಗಳ ಸೇವೆ ಪಡೆಯುವಂತೆ ಸೂಚಿಸಿದರು. ಎಲ್ಲ ಕಾಮಗಾರಿಗಳನ್ನು ಟೆಂಡರ್‌ ಆಹ್ವಾನಿಸಿಯೇ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
• 174 ಕೋಚ್‌ಗಳ ನೇಮಕಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ವೃಂದ ಮತ್ತು ನೇಮಕಾತಿ ನಿಯಮ ಅಂತಿಮಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು. 1486 ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡಲಾಗಿದೆ ಎಂದು ಆಯುಕ್ತರು ತಿಳಿಸಿದರು.
• ಬೆಂಗಳೂರಿನಲ್ಲಿ ಬಾಸ್ಕೆಟ್‌ ಬಾಲ್‌ ಹಾಗೂ ಮೈಸೂರಿನಲ್ಲಿ ಸೈಕ್ಲಿಂಗ್‌ ವೆಲೋಡ್ರೋಂ ಘೋಷಣೆ ಬಗ್ಗೆ ಭೂಮಿ ಗುರುತಿಸಲಾಗುತ್ತಿದೆ ಎಂದು ತಿಳಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ವಸ್ತುಸಂಗ್ರಹಾಲಯ ನಿರ್ಮಾಣ ಕುರಿತಂತೆ ಯಾವುದೇ ಕ್ರಮ ಆಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚಿಸಿದರು.
• ಆಯವ್ಯಯದ ಘೋಷಣೆಗಳ ಕುರಿತಂತೆ ಕೂಡಲೇ ಆದೇಶ ಹೊರಡಿಸುವಂತೆ ಸೂಚಿಸಿದರು. ಪ್ರಸಕ್ತ ಆಯವ್ಯಯದ ಘೋಷಣೆಗಳಿಗೆ ಸಂಬಂಧಿಸಿದಂತೆ ಒಂಬತ್ತು ಘೋಷಣೆಗಳ ಪೈಕಿ ಎಂಟು ಘೋಷಣೆಗಳ ಕುರಿತು ಸರ್ಕಾರಿ ಆದೇಶವಾಗಿದ್ದು, ಒಂದು ಆದೇಶ ಮುಖ್ಯಮಂತ್ರಿಯವರ ಅನುಮೋದನೆಗೆ ಕಡತ ಸಲ್ಲಿಸಲಾಗಿದೆ ಎಂದರು.

ಈ ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್‌, ಆಯುಕ್ತ ಶಶಿಕುಮಾರ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಮೋದಿ ಪ್ರಧಾನಿಯಾದ ಬೆನ್ನಲ್ಲೇ ಷೇರು ಮಾರುಕಟ್ಟೆ ಸಂಚಲನ : 5 ಟ್ರಿಲಿಯನ್ ಡಾಲರ್ ದಾಟಿದ ಮಾರುಕಟ್ಟೆ ಕ್ಯಾಪ್ | PM Modi

ಜನಸಾಮಾನ್ಯರಿಗೆ ʻದುಬಾರಿ ದುನಿಯಾʼ : ದವಸ, ಧಾನ್ಯಗಳು ಸೇರಿ ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ |

Share.
Exit mobile version