ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳನ್ನು ಮುಂದಿದೆ ಓದಿ.
• ಅಟ್ರಾಸಿಟಿ ಪ್ರಕರಣಗಳಲ್ಲಿ ಸರ್ಕಾರಿ ಪ್ರಾಸಿಕ್ಯೂಟರ್ಗಳು ಸರಿಯಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಬೇಕು. ದೌರ್ಜನ್ಯ ಮಾಡಿದವರು ಸುಲಭವಾಗಿ ಜಾಮೀನು ಪಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಒದಗಿಸುವುದು ಎಲ್ಲರ ಜವಾಬ್ದಾರಿ.
• ದೌರ್ಜನ್ಯ ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿಯನ್ನು ನಿಗದಿತ ಅವಧಿಯ ಒಳಗಾಗಿ ಸಲ್ಲಿಸಬೇಕು.
• ಬ್ಯಾಕ್ಲಾಗ್, ನೇಮಕಾತಿ ಮತ್ತು ಮುಂಬಡ್ತಿ ಪ್ರಕರಣಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಈ ಕುರಿತು ಇಲಾಖೆವಾರು ಸಭೆ ನಡೆಸಲು ಮುಖ್ಯಕಾರ್ಯದರ್ಶಿಯವರಿಗೆ ಸೂಚನೆ.
• ದೇವದಾಸಿ ಪದ್ದತಿ ಯಾವುದೇ ಜಿಲ್ಲೆಗಳಲ್ಲಿ ನಡೆದರೆ ಅದಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅವರೇ ನೇರ ಹೊಣೆ. ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸುವುದು ಜಿಲ್ಲಾಡಳಿತದ ಜವಾಬ್ದಾರಿ. ಈ ಕುರಿತು ಯಾವುದೇ ದೂರಿಗೆ ಅವಕಾಶವಿಲ್ಲದಂತೆ ಕಾರ್ಯ ನಿರ್ವಹಿಸಬೇಕು.
• ಅರಣ್ಯ ಹಕ್ಕು ಸಮಿತಿ ನಿಗದಿತವಾಗಿ ಸಭೆಗಳನ್ನು ನಡೆಸಿ, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು. 3430 ಪ್ರಕರಣಗಳಲ್ಲಿ ಹಕ್ಕುಪತ್ರ ನೀಡಲು ಇನ್ನೂ ಬಾಕಿಯಿದ್ದು, ಇದನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು.
• ಹಕ್ಕುಪತ್ರ ನೀಡಿದ ಬಳಿಕ ಪಹಣಿಯಲ್ಲಿ ಅವರ ಹೆಸರು ನಮೂದಿಸುವ ಕಾರ್ಯ ತ್ವರಿತಗೊಳಿಸಬೇಕು. ಕಂದಾಯ ಇಲಾಖೆ ಅಧಿಕಾರಿಗಳು ಇದನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು.
• ಎಸ್ಸಿ/ಎಸ್ಟಿ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. 60ದಿನಗಳ ಒಳಗಾಗಿ ಆರೋಪಪಟ್ಟಿ ದಾಖಲಿಸಬೇಕು. ಇನ್ನೂ 665 ಪ್ರಕರಣಗಳು ತನಿಖೆಗೆ ಬಾಕಿಯಿದ್ದು, ಇದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನ್ಯಾಯಾಲಯಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆಯಾಗುವುದನ್ನು ಒಪ್ಪಲು ಸಾಧ್ಯವಿಲ್ಲ.
• ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ಇ ಕೋಶವನ್ನು ಸ್ಥಾಪಿಸುವ ಕುರಿತು ಈಗಾಗಲೇ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
• ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಬೇಕು. ಪ್ರಾಸಿಕ್ಯೂಶನ್ ಸಹ ಪರಿಶೀಲನೆ ನಡೆಸಬೇಕು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಈ ಸಭೆಯಲ್ಲಿ ಭಾಗವಹಿಸಲು ಸೂಚನೆ ನೀಡಲಾಗುವುದು.
• ಮೃತಪಟ್ಟ ಪ್ರಕರಣಗಳಲ್ಲಿ ಅನುಕಂಪ ಆಧಾರದ ಉದ್ಯೋಗಕ್ಕಾಗಿ ಮೃತಪಟ್ಟ ದಿನಾಂಕದಿಂದ 3 ವರ್ಷದ ಒಳಗೆ, ಅಪ್ರಾಪ್ತ ವಯಸ್ಸಿನ ಮಕ್ಕಳು 18 ವರ್ಷಗಳನ್ನು ಪೂರೈಸತಕ್ಕದ್ದು, ಎಂಬ ಮಿತಿಯನ್ನು ತೆಗೆದು ಹಾಕುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
• ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಅಂತಹ ಪ್ರಮಾಣ ಪತ್ರ ನೀಡುವ ಅಧಿಕಾರಿಯನ್ನು ಸಹ ಆರೋಪಿಯನ್ನಾಗಿ ಮಾಡಲಾಗುತ್ತದೆ. ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು.
ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿ.ಎಂ ಎಚ್ಚರಿಕೆ
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ*
ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೊಡಿ ಎಂದು ಗರಂ ಆಗಿ ಅಧಿಕಾರಿಗಳಿಗೆ ಪ್ರಶ್ನಿಸಿದ ಸಿಎಂ
*ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ADGP ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸಿಎಂ ಸೂಚಿಸಿದರು.
ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಸಭೆಯ ಗಮನಕ್ಕೆ ತಂದರು.
ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ತಗೊತೀವಿ
ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು
ಪರಿಶಿಷ್ಢ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ
*ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ Review ಮೀಟಿಂಗ್ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.
*ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಎಚ್ಚರಿಸಿದರು.
ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಕ್ರಿಯಾ ಸಮಿತಿ ಅಡಿಯಲ್ಲಿ ನಡೆಯುತ್ತಿರುವ ಮಹಿಳೆಯರ ಅಹೋರಾತ್ರಿ ಧರಣಿ ವಿಚಾರವನ್ನು ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಪ್ರಸ್ತಾಪಿಸಿದರು
ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು, ವೈಜ್ಞಾನಿಕವಾಗಿ ದೇವದಾಸಿ ಮಹಿಳೆಯರ ಸ್ಥಿತಿ ಗತಿ ಬಗ್ಗೆ ಸಮೀಕ್ಷೆ ನಡೆಸಬೇಕು ಎನ್ನುವುದು ಪ್ರತಿಭಟನಾ ನಿರತರ ಬೇಡಿಕೆಯಾಗಿದೆ ಎಂದು ಉಲ್ಲೇಖಿಸಿದ ಮುಖ್ಯಮಂತ್ರಿಗಳು ದೇವದಾಸಿಯರ ಪುನರ್ವಸತಿ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಕೇಳಿದರು
ಈ ಬಗ್ಗೆ ಕೆಲ ಹೊತ್ತು ಚರ್ಚೆ ನಡೆದ ಬಳಿಕ ದೇವದಾಸಿ ಸಮಸ್ಯೆ ಮತ್ತು ಪುನರ್ವಸತಿ ಬಗ್ಗೆ ಸಮಗ್ರ ವರದಿ ಸಿದ್ದಪಡಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು
ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಸೂಚಿಸಿದರು
ಸಭೆಗೆ ಅಧಿಕಾರಿಗಳು ನೀಡಿರುವ ಅನುಪಾಲನಾ ವರದಿಯಲ್ಲಿ ಮುಂದಿನ ಬಾರಿ ಜಿಲ್ಲಾವಾರು ಅಂಕಿ ಅಂಶ ನಮೂದಿಸಲು ಸೂಚಿಸಲಾಯಿತು.
ದೌರ್ಜನ್ಯ ಪ್ರಕತಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದರು
*ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹಲವು ದಶಕಗಳಿಂದ 3℅ ಗಿಂತ ಹೆಚ್ಚಾಗಿಲ್ಲ. ಈ ಕಾರಣಕ್ಕೂ ನಾನು DCRE ಸೆಲ್ ಗಳಿಗೆ ಪೊಲೀಸ್ ಠಾಣೆ ಶಕ್ತಿ ನೀಡಿದ್ದಾಗಿದೆ. ಇನ್ನೂ ಶಿಕ್ಷೆ ಪ್ರಮಾಣ ಹೆಚ್ಚಾಗದಿದ್ದರೆ ಹೇಗೆ? ಪ್ರಕರಣಗಳ ತನಿಖೆಯ ಗುಣಮಟ್ಟದ ಬಗ್ಗೆ ಗಮನ ಹರಿಸಲು ಸಿಎಂ ಸೂಚಿಸಿದರು.
*ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ, ಕೌಂಟರ್ ಕೇಸ್ ಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಾಗಿದೆಯೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಅಸಮಾಧಾನದಿಂದ ಸಭೆಯಲ್ಲಿ ಪ್ರಶ್ನಿಸಿದರು. 3 ವಿಶೇಷ ನ್ಯಾಯಾಲಯಗಳಿಗೆ ಮಾತ್ರ ಅನುಮತಿ ಸಿಕ್ಕಿದೆ. ಇನ್ನೂ 24 ವಿಶೇಷ ನ್ಯಾಯಾಲಯಗಳಿಗೆ ಅನುಮತಿ ದೊರೆತಿಲ್ಲ ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು. ಬಳಿಕ ಈ ಬಗ್ಗೆ ತಾವು ತೀವ್ರವಾಗಿ ಗಮನಿಸಿ ಬಾಕಿ ನ್ಯಾಯಾಲಯಗಳಿಗೆ ಬೇಗ ಅನುಮತಿ ಸಿಗುವ ದಿಕ್ಕಿನಲ್ಲಿ ಗಮನ ಹರಿಸುವುದಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ತಿಳಿಸಿದರು.
*ಪರಿಶಿಷ್ಠರ ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ತನಿಖೆ ತಡ ಆದಷ್ಟೂ, ನ್ಯಾಯಾಲಯಗಳಲ್ಲಿ ವಿಚಾರಣೆ ತಡೆ ಆದಷ್ಟೂ ಸಾಕ್ಷಿ ನಾಶ ಆಗುತ್ತದೆ. ಈ ಪ್ರಕರಣಗಳಲ್ಲಿ Burden of proof ಆರೋಪಿಗಳ ಮೇಲಿರುತ್ತದೆ. ಆದ್ದರಿಂದ ಶಿಕ್ಷೆ ಪ್ರಮಾಣ ಹೆಚ್ಚಾಗಲೇ ಬೇಕು. ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ ಸಿಎಂ, ಆರೋಪ ಪಟ್ಟಿ ಶೀರ್ಘವಾಗಿ ಸಲ್ಲಿಸಿ ಸಾಕ್ಷ್ಯಗಳನ್ನು ಪರಿಣಾಮಕಾರಿಯಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಎಂದು ಸಿಎಂ ಸೂಚಿಸಿದರು.
ಪೋಕ್ಸೋ ಪ್ರಕರಣಗಳು ನ್ಯಾಯಾಲಯಗಳಲ್ಲಿ ದೀರ್ಘ ಕಾಲದಿಂದ ಬಾಕಿ ಇದ್ದರೆ ಪ್ರಾಸಿಕ್ಯೂಷನ್ ಜೊತೆ ಚರ್ಚಿಸಿ ಬೇಗ ಇತ್ಯರ್ಥ ಪಡಿಸಲು, ಶೀರ್ಘ್ರ ನ್ಯಾಯದಾನಕ್ಕೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರೇ ಗಮನಿಸಿ: ‘ವಿದ್ಯುತ್ ಟ್ರಾನ್ಸ್ ಫಾರ್ಮರ್’ ಸಮಸ್ಯೆ ಇದ್ದರೆ ಈ ನಂಬರ್ಗೆ ಕರೆ ಮಾಡಿ.!
BREAKING: ‘ಪುಷ್ಪಾ 2’ ಸಿನಿಮಾ ಒಟಿಟಿ ರಿಲೀಸ್ ಡೇಟ್ ಫಿಕ್ಸ್! | Pushpa 2