Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಿ.7ರಂದು ಬೆಂಗಳೂರಲ್ಲಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಯಿಂದ ‘ಬೃಹತ್ ಶೈಕ್ಷಣಿಕ ಸಮ್ಮೇಳನ’ ಆಯೋಜನೆ

04/12/2025 9:30 PM

ಹೀಗಿವೆ ಇಂದಿನ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

04/12/2025 9:17 PM

‘ಪುಟಿನ್’ ತಂಗಲಿರುವ ದೆಹಲಿ ಹೋಟೆಲ್ ಹೇಗಿದೆ.? ಒಂದು ರಾತ್ರಿ ಬಾಡಿಗೆಗೆ ನೀವೊಂದು ಕಾರು ಖರೀದಿಸ್ಬೋದು!

04/12/2025 9:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿವೆ ಇಂದಿನ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
KARNATAKA

ಹೀಗಿವೆ ಇಂದಿನ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

By kannadanewsnow0904/12/2025 9:17 PM

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 4-12-2025 ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳನ್ನು ಮುಂದಿವೆ ಓದಿ..

ಅಧ್ಯಕ್ಷರು, ಹಾಸನ ಜಿಲ್ಲಾ ಒಕ್ಕಲಿಗರ ಸಂಘ (ರಿ), ಹಾಸನ ಜಿಲ್ಲೆ, ಹಾಸನ ಇವರಿಗೆ ಎಸ್.ಎಂ.ಕೆ ನಗರ ವಸತಿ ಬಡಾವಣೆಯ ಸಿ.ಎ ನಿವೇಶನ ಸಂ: 4/7 ಮತ್ತು 4/9 ರಲ್ಲಿನ ನಾಗರೀಕ ಸೌಲಭ್ಯ ನಿವೇಶನದ 3964 ಚ.ಮೀವುಳ್ಳ (42652 ಚ.ಅಡಿ) ನಾಗರೀಕ ನಿವೇಶನವನ್ನು ಗ್ರಾಮೀಣ ವಿದ್ಯಾರ್ಥಿ ನಿಲಯ ಮತ್ತು ಸಮುದಾಯ ಭವನ ಉದ್ದೇಶಕ್ಕಾಗಿ 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ರೂ.3,76,61,716/- ಗಳನ್ನು ನಿಗದಿಪಡಿಸಿ ಹಂಚಿಕೆ ಮಾಡಲಾಗಿದೆ. ಸದರಿ ಸಂಸ್ಥೆಯವರು ಮಂಜೂರಾತಿ ಕೋರಿ ಸಲ್ಲಿಸಿದ ಅರ್ಜಿಯೊಂದಿಗೆ ರೂ.37,66,236/- ಗಳನ್ನು ಪಾವತಿಸಿರುತ್ತಾರೆ. ಬಾಕಿ ಮೊತ್ತ ರೂ.3,38,95,480/- ಗಳನ್ನು ಪಾವತಿಸಬೇಕಾಗಿರುತ್ತದೆ. ಸದರಿ ಬಾಕಿ ಮೊತ್ತಕ್ಕೆ ವಿನಾಯಿತಿ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

ವಿವಿಧ ನಗರ ಯೋಜನಾ ಪ್ರಾಧಿಕಾರಗಳು / ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನಿವೇಶನಗಳನ್ನು ಬ್ಲಾಕ್ ಕಾಂಗ್ರೆಸ್ ಕಛೇರಿ ನಿರ್ಮಾಣ ಮಾಡುವ ಸಲುವಾಗಿ ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು ಇವರಿಗೆ ಗುತ್ತಿಗೆ ಆಧಾರದ ಮೇಲೆ ಮಾರುಕಟ್ಟೆ ಮೌಲ್ಯದ ಶೇ.5% ರಷ್ಟಕ್ಕೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳಲ್ಲಿ ಒಟ್ಟು 1777-02 1/2 ಎಕರೆ / ಗುಂಟೆ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಗಳಿಂದ ಕೈಬಿಡಲು / ಹೊರತುಪಡಿಸಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ ಕಲಂ 4ರಡಿಯಲ್ಲಿ ಅಧಿಸೂಚನೆ ಹೊರಡಿಸಿರುವುದನ್ನು ಕೈಬಿಡಲು ಸಚಿವ ಸಂಪುಟ ನಿರ್ಧರಿಸಿದೆ.

· ಹೆಬ್ಬಾಳ ಜಂಕ್ಷನ್‌ನಿAದ ಮೇಕ್ರಿ ವೃತ್ತದವರೆಗೂ ಸ್ಥಳೀಯ ವಾಹನ ದಟ್ಟಣೆಯನ್ನು ನಿರ್ವಹಿಸಲು ನಿರ್ಮಾಣ ಮಾಡಲು ಉದ್ದೇಶಿಸಿರುವ ಮೂರು ಪಥದ ಅವಳಿ ಸುರಂಗ ಮಾರ್ಗವನ್ನು ಕಟ್ & ಕವರ್ ಮಾದರಿಯಲ್ಲಿ ಹಾಗೂ ಇದಕ್ಕೆ ಪೂರಕವಾಗಿ ಎಲಿವೇಟೆಡ್ ಕಾರಿಡಾರ್ ವಿಥ್ ಅಪ್ ಅಂಡ್ ಡೌನ್ ರಾಂಪ್ ಅನ್ನು ರೂ.2215.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ವಿಧಾ£ಮಂಡಲ ಅಧಿವೇಶನದ ಬಗ್ಗೆ ಸೂಕ್ತ ತಯಾರಿ, ಸಂಬAಧಿಸಿದವರಿಎ ಉತ್ತರ ಒದಗಿಸುವುದನ್ನು ಗಂಭೀರವಾಇ ಪರಿಗಣಿಸುವುದು ಚರ್ಚೆಗಳ ಕುರಿತು ಮಾಡಿಕೊಳ್ಳಬೇಕಾಗಿರುವ ಸಿದ್ಧತೆಗಳ ಬಗ್ಗೆ ಮುಖ್ಯಮಂತ್ರಿಗಳು ಸಲಹೆ, ಸೂಚನೆ, ಮಾರ್ಗದರ್ಶನವನ್ನು ನೀಡಿದ್ದಾರೆ.

· ಮೆಕ್ಕೆಜೋಳದ ಬಗ್ಗೆ ರೈತರಿಗೆ ತೊಂದರೆಯಾಗುತ್ತಿದ್ದು, ಮೆಕ್ಕೆ ಜೋಳವನ್ನು ಖರೀದಿಸುವ ಬಗ್ಗೆ ರಾಜ್ಯ ಸರ್ಕಾರ ಹಲವಾರು ಪ್ರಯತ್ನಗಳನ್ನು ಮಾಡುತ್ತಿದೆ. 17,500 ಲಕ್ಷ ಎಕರೆ ಭೂಮಿಯಲ್ಲಿ 55 ಲಕ್ಷ ಟನ್ ಮೆಕ್ಕೆ ಜೋಳ ಬೆಳೆದಿದೆ. ಎಥನಾಲ್ ಕಾರ್ಖಾನೆಗಳು 7.50 ಲಕ್ಷ ಟನ್ ನ್ನು ಖರೀದಿಸಬೇಕಾಗಿದೆ. ಎಂ.ಎಸ್.ಪಿ ದರ 2400 ರೂ.ಗಳಿಗೆ ಖರೀದಿಸಬೇಕು. 2639 ರೂ.ಗಳನ್ನು ನೀಡಬೇಕೆಂಬ ಕೇಂದ್ರ ಸರ್ಕಾರದ ಸೂಚನೆಯಲ್ಲಿ ಎಥನಾಲ್ ಫ್ಯಾಕ್ಟರಿಯವರು ಸರ್ಕಾರದ ಜೊತೆ ಚರ್ಚಿಸಿ 239 ರೂ.ಗಳನ್ನು ರಾಜ್ಯ ಸರ್ಕಾರ ನೀಡಿದರೆ, ರೈತರಿಗೆ 2400 ನೀಡಬೇಕೆಂದು ಸೂಚಿಸಲಾಗಿತ್ತು. ಕೆಲವರು ಇಂಡೆಂಟ್ ಕೊಟ್ಟಿದ್ದಾರೆ, ಕೆಲವರು ಕೊಟ್ಟಿಲ್ಲ. ಇಂಡೆAಟ್ ಕೊಟ್ಟಿಲ್ಲದವರಿಗೆ ಸೂಕ್ತ ಸೂಚನೆಯನ್ನು ನೀಡಬೇಕೆಂದು ಸೂಚಿಸಲಾಗಿದೆ. ಇದರ ಜೊತೆಗೆ ಕೆಎಂಎಫ್ ಅವರು 50,000 ಮೆ.ಟನ್ ಖರೀದಿಸಬೇಕು ಆದಷ್ಟು ಬೇಗ ಖರೀದಿಸಲು ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ಮಾರುಕಟ್ಟೆಯಲ್ಲಿ ಸ್ಥಿರತೆ ಸಾಧ್ಯವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

· “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ 2025, “ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ (ತಿದ್ದುಪಡಿ) ವಿಧೇಯಕ 2025”, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ (ತಿದ್ದುಪಡಿ) ವಿಧೇಯಕ 2025” ಕರಡು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯಿ ದತ್ತಿಗಳ (ತಿದ್ದುಪಡಿ) ವಿಧೇಯಕ 2025”, “ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇನ್ನಿತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ 2025” ಗಳನ್ನು ಅನುಮೋದಿಸಲು ಹಾಗೂ ಸದರಿ ವಿಧೇಯಕವನ್ನು ವಿಧಾನಮಂಡಲದ ಮುಂದೆ ಮಂಡಿಸಲು ಸಚಿವ ಸಂಪುಟ ನಿರ್ಧರಿಸಿದೆ.

· ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ – “ಇನ್ವೆಸ್ಟ್ ಕರ್ನಾಟಕ 2025”ದ ಪರಿಷ್ಕೃತ ವೆಚ್ಚ ರೂ.100.70 ಕೋಟಿಗಳಿಗೆ ಘಟನೋತ್ತರ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.

· ಸಹಕಾರ ಇಲಾಖೆಯಡಿ “ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ ಯೋಜನೆಯಲ್ಲಿ 5491 ಪ್ಯಾಕ್ಸ್ಗಳ ಗಣಕೀಕರಣವನ್ನು ಪೂರ್ಣಗೊಳಿಸಲು ಮೆ.Satra Service and Solutions Pvt Ltd (L1) ಗೆ ರೂ.7138.30 ಲಕ್ಷಗಳಿಗೆ ನೀಡಿದ ಆಡಳಿತಾತ್ಮಕ ಅನುಮೋದನೆಯನ್ನು ಪರಿಷ್ಕರಿಸಿ, ಈ ಸಂಸ್ಥೆಗೆ 4453 ಪ್ಯಾಕ್ಸ್ಗಳನ್ನು ಮಾತ್ರ ರೂ.5788.90 ಲಕ್ಷಗಳ ವೆಚ್ಚದಲ್ಲಿ ಗಣಕೀಕರಣ ಪೂರ್ಣಗೊಳಿಸಲು ಹಾಗೂ ಉಳಿದ 1038 ಪ್ಯಾಕ್ಸ್ಗಳನ್ನು ಮೆ. Satra Service and Solutions Pvt Ltd (L1) ಯಿಂದ ಹಿಂಪಡೆದು Choice Consultancy Services Pvt ¸ÀA¸ÉÜ (L3) UÉ L1 ದರದಲ್ಲಿಯೇ ಅಂದರೆ ರೂ.1349.40 ಲಕ್ಷ ವೆಚ್ಚದಲ್ಲಿ ಹಂಚಿಕೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲು” ಸಚಿವ ಸಂಪುಟ ನಿರ್ಣಯಿಸಿದೆ.

· ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಡಿ “ಕರ್ನಾಟಕ ಒಳನಾಡು ನೌಕೆ ನಿಯಮಗಳು, 2025”ಕ್ಕೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

· ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಕಲಬುರಗಿ, ಗದಗ, ದಾವಣಗೆರೆ, ಮಂಗಳೂರು, ಭೀಮನಕುಪ್ಪೆ (ಬೆಂಗಳೂರಿನ ಕೆಂಗೇರಿ ಹತ್ತಿರ) ಮತ್ತು ಮೈಸೂರಿನಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳನ್ನು ರೂ.452.89 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

· ರಾಷ್ಟಿçÃಯ ಆರೋಗ್ಯ ಅಭಿಯಾನ PM-ABHIM ಯೋಜನೆಯಡಿ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ Critical Care Block ನಿರ್ಮಾಣ ಕಾಮಗಾರಿಗಳನ್ನು ರೂ.28.69 ಕೋಟಿಗಳ ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 19 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣವನ್ನು ರೂ.304.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

· ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಡಿ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ತಿದ್ದುಪಡಿ) ವಿಧೇಯಕ, 2025”ಕ್ಕೆ ಅನುಮೋದನೆಯನ್ನು ಸಚಿವ ಸಂಪುಟ ನೀಡಿದೆ.

· ಬೆಂಗಳೂರು ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಸೇರಿದ ಸಜ್ಜೇಪಾಳ್ಯ ಗ್ರಾಮದ ಸ.ನಂ.4 ರಲ್ಲಿ ಲಭ್ಯವಿರುವ 03 ಎಕರೆ ಜಮೀನನ್ನು ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ “ನೆಫ್ರೋ-ಯುರಾಲಜಿ ಸಂಸ್ಥೆ”ಗೆ (Institute of Nephro-Urology) ಆಸ್ಪತ್ರೆ ನಿರ್ಮಾಣಕ್ಕೆ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ಸಚಿವ ಸಂಪುಟ ನಿರ್ಣಯಿಸಿದೆ.

· ಕೊಪ್ಪಳ ಜಿಲ್ಲೆ, ಯಲಬುರ್ಗಾ ತಾಲ್ಲೂಕು, ಯಡ್ಡೋಣಿ ಇಲ್ಲಿನ ಮಹರ್ಷಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಶಾಲಾ ಸಂಕೀರ್ಣವನ್ನು ರೂ.30.00 ಕೋಟಿಗಳ ಮೊತ್ತದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· PM-ABHIM ಯೋಜನೆಯಡಿ ರಾಜ್ಯದಾದ್ಯಂತ 334 ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ರೂ.217.10 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ನೀಡಿದೆ.

· 22 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (UHPC) ನಿರ್ಮಿಸುವ ಕಾಮಗಾರಿಗಳನ್ನು ರೂ.22.00 ಕೋಟಿಗಳ ಅಂದಾಜು ಮೊತ್ತದಲ್ಲಿ 15ನೇ ಹಣಕಾಸು ಆಯೋಗದಡಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ನಿರ್ಣಯಿಸಲಾಗಿದೆ.

· ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣವಾರ ಹಾಗೂ ಗಂಡಸಿ ಬ್ಲಾಕ್‌ನ 530 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಮುಂದಿನ 5 ವರ್ಷಗಳ ಕಾರ್ಯಾಚರಣೆ ಹಾಗೂ ನಿರ್ವಹಣೆ (O&Mಯನ್ನು ರೂ.73.22 ಕೋಟಿಗಳಲ್ಲಿ ನಿರ್ವಹಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· ಭಕ್ತರಹಳ್ಳಿ ಮತ್ತು ಕುಣಿಗಲ್ ತಾಲ್ಲೂಕಿನ ಇತರ 21 ಟ್ಯಾಂಕ್‌ಗಳನ್ನು ತುಂಬಲು ಕೊತ್ತಗೆರೆ ಗ್ರಾಮದ ಸಮೀಪವಿರುವ ಕೊತ್ತಗೆರೆ ಟ್ಯಾಂಕ್ ನಿಂದ ನೀರು ಎತ್ತುವ ಯೋಜನೆಯನ್ನು ರೂ.34.00 ಕೋಟಿಗಳ ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಗೂಡೇಹೊಸಹಳ್ಳಿ ಬಳಿ ಹೇಮಾವತಿ ನದಿಯಿಂದ ನೀರನ್ನು ಎತ್ತಿ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಮತ್ತು ನಾಗಮಂಗಲ ತಾಲ್ಲೂಕು ಹಾಗೂ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕುಗಳ ಕೆರೆ ತುಂಬಿಸುವ (ಹಂತ-2) ರೂ.67.00 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಡಚಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ 9.215 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ರೂಪಿಸಲಾದ ಚಡಚಣ ಏತ ನೀರಾವರಿ ಯೋಜನೆಯ ರೂ. 485.00 ಕೋಟಿ ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

· 800 ಸರ್ಕಾರಿ (Magnet) ಗಳನ್ನು ADB, KKRDB ನಿಧಿ ಹಾಗೂ CEPMIZ ತಾಲ್ಲೂಕುಗಳಲ್ಲಿನ KMERC ನಿಧಿಗಳ ಸಹಾಯದಿಂದ ಕೆ.ಪಿ.ಎಸ್ ಮಾನದಂಡಗಳ ಕೈಪಿಡಿಯಂತೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನಾಗಿ (KPS) ಉನ್ನತೀಕರಿಸಲು DPR ತಯಾರಿಸಲು ಸಂಸ್ಥೆಯನ್ನು ಆಯ್ಕೆ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಅಧಿಕಾರ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

Share. Facebook Twitter LinkedIn WhatsApp Email

Related Posts

ಡಿ.7ರಂದು ಬೆಂಗಳೂರಲ್ಲಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಯಿಂದ ‘ಬೃಹತ್ ಶೈಕ್ಷಣಿಕ ಸಮ್ಮೇಳನ’ ಆಯೋಜನೆ

04/12/2025 9:30 PM1 Min Read

ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ಮಸೂದೆಗಳ ವಿವರ ಹೀಗಿದೆ.!

04/12/2025 8:00 PM1 Min Read

‘ಸೊರಬ KUWJ ಸಂಘ’ದ ಅಧ್ಯಕ್ಷರಾಗಿ ತೋಟಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಬಾಪಟ್ ನೇಮಕ

04/12/2025 7:45 PM1 Min Read
Recent News

ಡಿ.7ರಂದು ಬೆಂಗಳೂರಲ್ಲಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಯಿಂದ ‘ಬೃಹತ್ ಶೈಕ್ಷಣಿಕ ಸಮ್ಮೇಳನ’ ಆಯೋಜನೆ

04/12/2025 9:30 PM

ಹೀಗಿವೆ ಇಂದಿನ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

04/12/2025 9:17 PM

‘ಪುಟಿನ್’ ತಂಗಲಿರುವ ದೆಹಲಿ ಹೋಟೆಲ್ ಹೇಗಿದೆ.? ಒಂದು ರಾತ್ರಿ ಬಾಡಿಗೆಗೆ ನೀವೊಂದು ಕಾರು ಖರೀದಿಸ್ಬೋದು!

04/12/2025 9:10 PM

Watch Video : ಸ್ನೇಹಿತನಿಗಾಗಿ ಶಿಷ್ಟಾಚಾರ ಮುರಿದ ಪ್ರಧಾನಿ ಮೋದಿ, ಪುಟಿನ್ ಜೊತೆ ಒಂದೇ ಕಾರಿನಲ್ಲಿ ಪ್ರಯಾಣ

04/12/2025 8:42 PM
State News
KARNATAKA

ಡಿ.7ರಂದು ಬೆಂಗಳೂರಲ್ಲಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಯಿಂದ ‘ಬೃಹತ್ ಶೈಕ್ಷಣಿಕ ಸಮ್ಮೇಳನ’ ಆಯೋಜನೆ

By kannadanewsnow0904/12/2025 9:30 PM KARNATAKA 1 Min Read

ಬೆಂಗಳೂರು: ಕರ್ನಾಟಕ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ (ಕುಸ್ಮ) ಸಂಸ್ಥಾಪಕ ಅಧ್ಯಕ್ಷರಾಗಿದ್ದ ದಿವಂಗತ ಜಿ.ಎಸ್. ಶರ್ಮಾಜಿ ಅವರ ಜನ್ಮ ಶತಾಬ್ದಿ…

ಹೀಗಿವೆ ಇಂದಿನ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

04/12/2025 9:17 PM

ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ಮಸೂದೆಗಳ ವಿವರ ಹೀಗಿದೆ.!

04/12/2025 8:00 PM

‘ಸೊರಬ KUWJ ಸಂಘ’ದ ಅಧ್ಯಕ್ಷರಾಗಿ ತೋಟಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಬಾಪಟ್ ನೇಮಕ

04/12/2025 7:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.