ಬೆಂಗಳೂರು: ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ನಾಳೆ ನಡೆಯಲು ಉದ್ದೇಶಿಸಿದ್ದಂತ ಮದ್ಯ ಮಾರಾಟ ಪ್ರತಿಭಟನೆಯನ್ನು ಕೈಬಿಡಲಾಗಿದೆ. ಹಾಗಾದ್ರೆ ಇಂದಿನ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.
ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಭೆಯ ಪ್ರಮುಖ ಹೈಲೈಟ್ಸ್
*ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು.
*ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ enforcement ಮಾಡಲಾಗುವುದು.
*ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು.
*ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದರು.
ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.
ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಅಲ್ಲದೇ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಹೀಗಾಗಿ ನಾಳೆ ಮದ್ಯ ಮಾರಾಟ ಬಂದ್ ಮಾಡಿ ನಡೆಸಲು ಉದ್ದೇಶಿಸಿದ್ದಂತ ಪ್ರತಿಭಟನೆಯನ್ನು ಕೈಬಿಡಲಾಗಿದೆ.
‘BPL ರೇಷನ್ ಕಾರ್ಡ್’ಗೆ ಅನರ್ಹರಾದವರು ‘APL’ಗೆ ಸೇರ್ಪಡೆ: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ
ಕಾಂಗ್ರೆಸ್ ನಲ್ಲೂ ‘ಕಿಂಡರ್ ಗಾರ್ಡನ್’ ಪದ್ಧತಿ ಇದೆ : ಸಚಿವ ಸ್ಥಾನದ ಕುರಿತು ಶಾಸಕ ನರೇಂದ್ರ ಸ್ವಾಮಿ ಅಸಮಾಧಾನ