Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `IPL’ 2025ರ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ: ಇಲ್ಲಿದೆ ಸಂಪೂರ್ಣ ಪಟ್ಟಿ | IPL 2025 Revised Schedule

13/05/2025 5:56 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಸರ್ಕಾರದಿಂದ 2025-26ನೇ ಸಾಲಿನ ‘ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ | Transfer

13/05/2025 5:53 AM

BIG NEWS : ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಿ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

13/05/2025 5:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಲ್ಲಿದೆ ಇವತ್ತಿನ ‘ಸಿಎಂ ಸಿದ್ಧರಾಮಯ್ಯ’ ಅವರ ಪತ್ರಿಕಾಗೋಷ್ಠಿಯ ಪ್ರಮುಖ ಹೈಲೈಟ್ಸ್ | CM Siddaramaiah
KARNATAKA

ಇಲ್ಲಿದೆ ಇವತ್ತಿನ ‘ಸಿಎಂ ಸಿದ್ಧರಾಮಯ್ಯ’ ಅವರ ಪತ್ರಿಕಾಗೋಷ್ಠಿಯ ಪ್ರಮುಖ ಹೈಲೈಟ್ಸ್ | CM Siddaramaiah

By kannadanewsnow0909/07/2024 7:35 PM

ಬೆಂಗಳೂರು: ಜುಲೈ 8 ಹಾಗೂ 9 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಪತ್ರಿಕಾಗೋಷ್ಠಿಯ ಹೈಲೈಟ್ಸ್ ಗಳನ್ನು ಮುಂದೆ ಓದಿ.

1. ಜಿಲ್ಲಾಧಿಕಾರಿಗಳು- ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಿನ್ನೆ 10 ಗಂಟೆಯಿಂದ ನಡೆಯಿತು. ನಿನ್ನೆ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8.15 ಗಂಟೆಯವರೆಗೆ ಸುಮಾರು 9 ಗಂಟೆಗಳ ಕಾಲ ಪರಿಶೀಲನಾ ಸಭೆ ನಡೆಸಲಾಯಿತು. ಇಂದೂ ಕೂಡ 10.30 ರಿಂದ ಈವರೆಗೆ ನಡೆದಿದೆ.

2. ಡಿ.ಸಿ. ಮತ್ತು ಸಿ.ಇ.ಓ. ಗಳ ಸಭೆ ಪ್ರತಿಯನ್ನು ಪ್ರತಿ 3 ತಿಂಗಳಿಗೆ ಒಮ್ಮೆ ನಡೆಸುವುದು ನಮ್ಮ ಉದ್ದೇಶ. ಕಳೆದ ವರ್ಷ 12-9-2023 ಮತ್ತು 13-9-2023 ರ ದಿನಾಂಕಗಳಂದು ಸಭೆ ನಡೆಸಿದ್ದೆವು. ಆ ನಂತರ ಅಕ್ಟೋಬರ್ ತಿಂಗಳಿನಿಂದಲೆ ಜಿಲ್ಲಾಧಿಕಾರಿಗಳು/ ಜಿಲ್ಲಾಡಳಿತ ಮತದಾರರ ಪಟ್ಟಿ ಸಿದ್ಧತೆ ಮತ್ತು ಚುನಾವಣಾ ತಯಾರಿಗಳಲ್ಲಿ ತೊಡಗಿಕೊಂಡರು. ಆದ್ದರಿಂದ ಸಭೆ ನಡೆಸಲಾಗಿರಲಿಲ್ಲ. ಆದರೆ ಹಲವು ವಿಡಿಯೊ ಕಾನ್ಫರೆನ್ಸ್ ಗಳನ್ನು ಮಾಡಿದ್ದೆವು. ಬರಗಾಲ, ಬರಗಾಲದ ಪರಿಹಾರ, ಕುಡಿಯುವ ನೀರು, ಮೇವು ಮುಂತಾದವುಗಳನ್ನು ನಿಭಾಯಿಸುವ ಕುರಿತೂ ಸಹ ಸಭೆಗಳನ್ನು ನಡೆಸಿದ್ದೆವು.

3. ಈ ವರ್ಷದ ಜೂನ್ ಮೊದಲ ವಾರದವರೆಗೆ ಕೋಡ್ ಆಫ್ ಕಂಡಕ್ಟ್ ಇದ್ದ ಕಾರಣದಿಂದ ಜುಲೈ ಮೊದಲ ವಾರದಲ್ಲೆ ಸಭೆ ನಡೆಸುತ್ತಿದ್ದೇವೆ.

4. ಡಿ.ಸಿ./ ಸಿ.ಇ.ಓ. ಗಳು ಸರ್ಕಾರ ಎಂಬ ವಾಹನದ ಚಕ್ರಗಳು/ ಸ್ಟೀಯರಿಂಗ್ ಇದ್ದ ಹಾಗೆ. ಇವುಗಳು ಸರಿಯಿದ್ದರೆ ಮಾತ್ರ ಸರಾಗವಾಗಿ ಮುನ್ನಡೆಯಲು ಸಾಧ್ಯ. ಇವುಗಳನ್ನು ಸರಿಯಾಗಿಟ್ಟುಕೊಳ್ಳಬೇಕೆಂಬ ಉದ್ದೇಶದಿಂದಲೆ ಈ ಸಭೆಗಳನ್ನು ನಡೆಸುತ್ತಿದ್ದೇವೆ.

5. ಸಭೆಯಲ್ಲಿ ಚೆನ್ನಾಗಿ ಕೆಲಸ ಮಾಡುವವರ ಬೆನ್ನು ತಟ್ಟುವ ಹಾಗೆಯೆ, ಸರಿಯಾಗಿ ಕೆಲಸ ಮಾಡದವರ ಕಿವಿ ಹಿಂಡಿ ಚುರುಕುಗೊಳಿಸುವುದು ಸಭೆಯ ಒಂದು ಉದ್ದೇಶವಾದರೆ, ಮತ್ತೊಂದು ಮುಖ್ಯ‌ ಉದ್ದೇಶ ಸರಕಾರದ ಧ್ಯೇಯೋದ್ದೇಶಗಳೇನು? ಆಶಯಗಳೇನು? ಆಸಕ್ತಿಗಳೇನು? ಆದ್ಯತೆಗಳೇನು? ಎಂಬುದನ್ನು ಮನವರಿಕೆ ಮಾಡಿಕೊಟ್ಟು ಕೆಲಸ ಮಾಡಿಸುವುದೂ ಆಗಿದೆ.

6. ನಮ್ಮ ಉದ್ದೇಶ ದಮನಿತರು, ದಲಿತರು, ಮಹಿಳೆಯರು, ರೈತರು, ಕಾರ್ಮಿಕರು, ಯುವ ಜನರು, ಮಕ್ಕಳು ಮುಂತಾದವರ ಏಳಿಗೆ/ ಅಭಿವೃದ್ಧಿ ಸಾಧ್ಯವಾಗಬೇಕು. ಶ್ರೀಮಂತರು ಮತ್ತು‌ ಬಡವರ ನಡುವಿನ ಅಂತರ ಕಡಿಮೆಯಾಗಬೇಕು. ಹಾಗಾಗಬೇಕಾದರೆ ಅವಕಾಶ ವಂಚಿತ ಜನರಿಗೆ ಹೆಚ್ಚು ಆದ್ಯತೆಗಳು ಸಿಗಬೇಕು . ಇವುಗಳ ಜೊತೆಗೆ ಪ್ರಾದೇಶಿಕ ಅಸಮಾನತೆ ಕೂಡ ಕಡಿಮೆಯಾಗಬೇಕು.

7. ಸಭೆಯಲ್ಲಿ ವಿಪತ್ತು ನಿರ್ವಹಣೆ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು, ನರೇಗಾ, ಹೆದ್ದಾರಿ, ಮೂಲಸೌಕರ್ಯ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ, ಅನರ್ಹ ಪಡಿತರ ಚೀಟಿಗಳ ರದ್ದು ಸೇರಿದಂತೆ 30 ಇಲಾಖೆಗಳ 68 ವಿಷಯಗಳ ಕುರಿತು ಚರ್ಚಿಸಲಾಯಿತು. ವಿವಿಧ ಕಾರ್ಯಕ್ರಮಗಳ ಪ್ರಗತಿಯನ್ನು ಜಿಲ್ಲಾವಾರು ಪರಿಶೀಲಿಸಲಾಯಿತು. ಕಡಿಮೆ ಸಾಧನೆಯಾದ ಜಿಲ್ಲೆಗಳ ಅಧಿಕಾರಿಗಳಿಗೆ ಕೆಲಸಗಳನ್ನು ಚುರುಕುಗೊಳಿಸುವಂತೆ ಸೂಚಿಸಲಾಯಿತು.
ವಿಪತ್ತು ನಿರ್ವಹಣೆ

8. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಹಿಂದಿನ ಅನುಭವದ ಆಧಾರದಲ್ಲಿ ರಾಜ್ಯದ 27ಜಿಲ್ಲೆಗಳ 177 ತಾಲ್ಲೂಕುಗಳ 1,247 ಗ್ರಾಮ ಪಂಚಾಯಿತಿಗಳಲ್ಲಿ ಪ್ರವಾಹದ ಅಪಾಯ ಹೊಂದಿರುವ (Flood prone) 2,225 ಗ್ರಾಮಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳ 20,38,334 ಜನರು ಪ್ರವಾಹ ಪೀಡಿತರಾಗುವ ಸಾಧ್ಯತೆ ಇದೆ ಎಂದು ಗುರುತಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಈ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಧಿಕಾರಿಗಳು ಸನ್ನದ್ಧರಾಗಿರುವಂತೆ ಸೂಚಿಸಲಾಗಿದೆ. ಯಾವುದೇ ಜೀವ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಯಿತು.

9. ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 783.69 ಕೋಟಿ ರೂ. ಅನುದಾನ ಲಭ್ಯವಿದೆ. ಪೂರ್ವ ಮುಂಗಾರು ಅವಧಿಯಲ್ಲಿ 3,714 ಮನೆ ಹಾನಿ ಹಾಗೂ ಬೆಳೆ ಹಾನಿ ಸಂಭವಿಸಿದೆ. ಇದಕ್ಕೆ ಎಸ್‌.ಡಿ.ಆರ್.ಎಫ್. ಮಾನದಂಡಗಳಂತೆ ಪರಿಹಾರ ವಿತರಿಸಲು ಸೂಚಿಸಲಾಗಿದೆ.
ಡೆಂಗ್ಯೂ ನಿಯಂತ್ರಿಸಿ.

10. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7,362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.

11. ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ಚಿಕಿತ್ಸೆಗೆ ವಿಶೇಷ ವಾರ್ಡ್‌ ಸಜ್ಜುಗೊಳಿಸಬೇಕು. ಮೆಡಿಕಲ್‌ ಕಾಲೇಜುಗಳಲ್ಲಿಯೂ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಡೆಂಗ್ಯೂ ಪಾಸಿಟಿವ್‌ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‌ ಫೋರ್ಸ್‌ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಪರಿಶೀಲನೆ ನಡೆಸಬೇಕು. ಯಾವುದೇ ರೀತಿಯ ಉದಾಸೀನ ಪ್ರವೃತ್ತಿಯನ್ನು ಸಹಿಸುವುದಿಲ್ಲವೆಂದು ಮನವರಿಕೆ ಮಾಡಿಕೊಡಲಾಗಿದೆ. ಎಲ್ಲ ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಒಂದೂ ಸಾವು ಆಗದಂತೆ ಕ್ರಮವಹಿಸಬೇಕೆಂದು ನಿದೇಶನ ನೀಡಲಾಗಿದೆ.

12. ಇದಾದ ಮೇಲೆ ಭವಿಷ್ಯದ ಕರ್ನಾಟಕವನ್ನು ನಿರ್ಮಾಣ ಮಾಡಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆಗಳನ್ನು ನೀಡಲಾಯಿತು. ಸಭೆಯಲ್ಲಿ ತಕ್ಷಣಕ್ಕೆ ತೆಗೆದುಕೊಳ್ಳಬೇಕಾದ…

ವಿಮಾ ಯೋಜನೆ ಮಾಹಿತಿ ನೀಡಿ

ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಅಡಿ ಪ್ರತಿ ವರ್ಷ 436 ರೂ. ಪ್ರೀಮಿಯಂ ಪಾವತಿಸಿದರೆ, ಯಾವುದೇ ಕಾರಣದಿಂದ ಸಾವು ಸಂಭವಿಸಿದರೆ 2ಲಕ್ಷ ರೂ. ಪಾಲಿಸಿ ಹಣ ದೊರೆಯುವುದು.

18ರಿಂದ 50 ವರ್ಷದೊಳಗಿನವರು ಇದಕ್ಕೆ ಅರ್ಹರಿದ್ದಾರೆ. ಇದೇ ರೀತಿ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ವಾರ್ಷಿಕ ರೂ. 20 ಪ್ರೀಮಿಯಂ ಪಾವತಿಸಿದರೆ, ಅಪಘಾತದಲ್ಲಿ ಮೃತಪಟ್ಟರೆ ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ರೂ. 2ಲಕ್ಷ ರೂ. ಹಾಗೂ ಶಾಶ್ವತ ಭಾಗಶಃ ಅಂಗವೈಕಲ್ಯಕ್ಕೆ 1ಲಕ್ಷ ರೂ. ಪಾಲಿಸಿ ಮೊತ್ತ ದೊರೆಯಲಿದೆ.

18ರಿಂದ 70 ವರ್ಷದೊಳಗಿನವರು ಈ ಯೋಜನೆ ವ್ಯಾಪ್ತಿಗೆ ಬರುತ್ತಾರೆ. ಈ ಕುರಿತು ಸಾರ್ವಜನಿಕರಿಗೆ ವ್ಯಾಪಕವಾದ ಮಾಹಿತಿಯನ್ನು ನೀಡುವ ಕಾರ್ಯ ಮಾಡಬೇಕು. ಇದುವರೆಗೆ ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯಡಿ 72.85 ಲಕ್ಷ ಜನರು ಹಾಗೂ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ 1.74 ಕೋಟಿ ಜನರು ಇದ್ದಾರೆ ಎಂದು ಹೇಳಿದರು.

ಆರ್ಥಿಕ ಶಿಸ್ತು

ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಇಲಾಖೆಗಳಲ್ಲಿ ಕ್ಲೈಮ್‌ ಮಾಡದೇ ಇರುವ, ಖಾತೆಗಳಲ್ಲಿರುವ ಠೇವಣಿಗಳನ್ನು ಪುನಃ ಸಕ್ರಿಯಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಮುಕ್ತಾಯಗೊಳ್ಳದಿರುವ ಯೋಜನೆಗಳಿಗೆ ಸಂಬಂಧಿಸಿದಂತೆ ಖಾತೆಗಳ ಬಗ್ಗೆ ಸಂಬಂಧಪಟ್ಟ ಬ್ಯಾಂಕುಗಳಿಗೆ ಗ್ರಾಹಕರ ಕೈವೈಸಿ ನೀಡಿ ಪುನಃ ಸಕ್ರಿಯಗೊಳಿಸಬೇಕು. ಈ ರೀತಿ ಕ್ಲೈಮ್‌ ಮಾಡದಿರುವ 3305 ಖಾತೆಗಳಲ್ಲಿ 52.78 ಕೋಟಿ ಮೊತ್ತವಿದೆ ಎಂದರು.

ಅರಣ್ಯ

ಪ್ರಸ್ತುತ ಸಾಲಿನಲ್ಲಿ 5ಕೋಟಿ ಸಸಿಗಳನ್ನು ನೆಡುವ ಗುರಿ ಹೊಂದಿದ್ದು, ಮುಂದಿನ 10ವರ್ಷಗಳಲ್ಲಿ ಹಸಿರು ಹೊದಿಕೆ ದ್ವಿಗುಣಗೊಳಿಸುವ ಗುರಿ ಹೊಂದಲಾಗಿದೆ.
ಪ್ರತಿ ಜಿಲ್ಲೆಗಳಲ್ಲಿ ಎಲ್ಲಾ ಇಲಾಖೆಗಳು ವನಮಹೋತ್ಸವ ಸಂದರ್ಭದಲ್ಲಿ ಸಕ್ರಿಯವಾಗಿ ಕೈ ಜೋಡಿಸಬೇಕು. ಅರಣ್ಯ ಇಲಾಖೆ ವತಿಯಿಂದ ನೆಟ್ಟ ಸಸಿಗಳನ್ನು ಮೂರು ವರ್ಷಗಳ ಕಾಲ ನಿರ್ವಹಣೆ ಮಾಡಲಾಗುತ್ತಿದೆ. ಈ ಕಾರ್ಯಕ್ಕಾಗಿ ಶಾಲೆಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರವನ್ನು ಪಡೆದುಕೊಳ್ಳಬೇಕು. ಕೃಷಿ ಯೋಗ್ಯವಲ್ಲದ ಬಂಜರು ಭೂಮಿಯಲ್ಲಿ ಅರಣ್ಯೀಕರಣಕ್ಕಾಗಿ 10146813 ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ ಎಂದರು.

ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಆನೆ ತುಳಿತದಿಂದ 65 ಜನ ಸಾವಿಗೀಡಾಗಿದ್ದಾರೆ. ಮಾನವ ಪ್ರಾಣಿ ಸಂಘರ್ಷ ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಜಿಲ್ಲಾಧಿಕಾರಿಗಳು ಕೈಗೊಳ್ಳಬೇಕು. 330 ಕಿಮೀ ರೈಲ್ವೇ ಬ್ಯಾರಿಕೇಡ್‌ ಹಾಕಲಾಗಿದೆ. ಇನ್ನೂ 300 ಕಿಮೀ ರೈಲ್ವೇ ಬ್ಯಾರಿಕೇಡ್‌ ಹಾಕಬೇಕಾಗಿದೆ. ಈ ಮೂಲಕ ಆನೆ ಹಾವಳಿ ತಡೆಗಟ್ಟಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಘನತ್ಯಾಜ್ಯ ವಿಲೇವಾರಿಗೆ ಪ್ರತಿ ನಗರ, ಪಟ್ಟಣ, ಊರುಗಳಲ್ಲಿ ಜಮೀನು ಗುರುತಿಸುವ ಕಾರ್ಯವನ್ನು ಮಾಡಬೇಕು ಎಂದರು.

ಕೃಷಿ ಇಲಾಖೆ

ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ 82.48 ಲಕ್ಷ ಹೆಕ್ಟೆರ್‌ ಬಿತ್ತನೆ ಗುರಿ ಇದ್ದು, ಇದುವರೆಗೆ 50.91 ಲಕ್ಷ ಹೆಕ್ಟೇರ್‌ ಬಿತ್ತನೆ ಮಾಡಲಾಗಿದೆ. ಇನ್ನೂ 32 ಲಕ್ಷ ಹೆಕ್ಟೇರ್‌ ಬಿತ್ತನೆ ಮಾಡಬೇಕಾಗಿದ್ದು ಈ ಬಾರಿ ಎಲ್ಲಾ ಕಡೆ ಉತ್ತಮ ಮಳೆಯಾಗಿರುವ ಕಾರಣ ಬಿತ್ತನೆ ಗುರಿ ಸಾಧಿಸುವ ಭರವಸೆ ಹೊಂದಲಾಗಿದೆ. ಬಿತ್ತನೆ ಬಳಿಕ ಮಳೆಯಾಗದೇ ಮೊಳಕೆಯಲ್ಲೇ ಹಾಳಾಗಿರುವ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಪ್ರಸ್ತುತ ಸಾಲಿನಲ್ಲಿ 291940 ಕ್ವಿಂಟಾಲ್‌ ಬಿತ್ತನೆ ಬೀಜ ವಿತರಣೆ ಮಾಡಲಾಗಿದ್ದು, ಬೀಜ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದೆ. ಬೀಜ ಮೊಳಕೆ ಬಾರದ ಬಗ್ಗೆ ಯಾವುದೇ ದೂರುಗಳು ಇದುವರೆಗೆ ಬಂದಿಲ್ಲ. *ಕಳಪೆ ಬೀಜ ತಡೆಗಟ್ಟಲು ಎಲ್ಲಾ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಇದೇ ಅವಧಿಯಲ್ಲಿ 1162498 ಮೆಟ್ರಿಕ್‌ ಟನ್‌ ರಸಗೊಬ್ಬರ ಮಾರಾಟ ಮಾಡಲಾಗಿದ್ದು, ಇನ್ನೂ 1516007 ರಸಗೊಬ್ಬರ ದಾಸ್ತಾನು ಇದೆ. ರಸಗೊಬ್ಬರ ಸಮರ್ಪಕವಾಗಿ ವಿತರಣೆ ಮಾಡಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರೈತರಿಗೆ ಬೆಳೆ ವಿಮೆ ಸರಿಯಾಗಿ ದೊರೆಯುವುದನ್ನು ಖಾತ್ರಿಪಡಿಸಲು ಬೆಳೆ ಕಟಾವು ಪ್ರಯೋಗವನ್ನು ಹೆಚ್ಚಿಸಬೇಕು. ಈ ಸಂದರ್ಭದಲ್ಲಿ ರೈತ ಪ್ರತಿನಿಧಿ ಸಹ ಸ್ಥಳದಲ್ಲಿ ಹಾಜರಿರಬೇಕು ಎಂದರು.

ಕಳೆದ ಸಾಲಿನಲ್ಲಿ ಬೆಳೆವಿಮೆ ಯೋಜನೆಯಡಿ 24,52,393 ರೈತರು ನೋಂದಣಿ ಮಾಡಿದ್ದು, ಪ್ರಸ್ತುತ ಮುಂಗಾರಿನಲ್ಲಿ ಇದುವರೆಗೆ 508550 ರೈತರು ನೋಂದಣಿ ಮಾಡಿದ್ದಾರೆ. ಇನ್ನೂ 1943843 ರೈತರು ನೋಂದಣಿ ಮಾಡಬೇಕಾಗಿದೆ. ಬೆಳೆ ವಿಮೆ ಲಾಭ ರೈತರಿಗೆ ಗರಿಷ್ಠ ಪ್ರಮಾಣದಲ್ಲಿ ದೊರೆಯುವುದನ್ನು ಖಾತ್ರಿಪಡಿಸಬೇಕು ಎಂದರು.

ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಿಂದ ಕೆಲವು ರಾಜ್ಯಗಳು ಹೊರ ಬಂದಿವೆ. ಬೆಳೆ ವಿಮೆ ಯೋಜನೆಯ ಸಮರ್ಪಕ ಅನುಷ್ಠಾನ ಕುರಿತು ಪರಿಶೀಲನೆ ನಡೆಸಲು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಹಿರಿಯ ಸಚಿವರ ಸಭೆಯನ್ನು ನಡೆಸಲಾಗುವುದು. ರೈತರಿಗೆ ಬೆಳೆವಿಮೆಯ ಲಾಭ ಪೂರ್ಣವಾಗಿ ದೊರೆಯುವಂತೆ ಮಾಡುವುದು ನಮ್ಮ ಗುರಿಯಾಗಬೇಕು ಎಂದರು.

ಬೆಳೆ ಸಮೀಕ್ಷೆ ಸಮರ್ಪಕವಾಗಿ ನಡೆಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಬೆಳೆ ಸಮೀಕ್ಷೆ ಶೇ.100ರಷ್ಟು ಕೈಗೊಳ್ಳಬೇಕು. ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಸಾಕಷ್ಟು ಅನುದಾನ ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕು. ಈ ಕುರಿತು ರೈತರಿಗೆ ಮಾಹಿತಿ ನೀಡುವ ಕಾರ್ಯ ಮಾಡಬೇಕು ಎಂದರು.

ಪಶುಸಂಗೋಪನೆ

ಈ ವರ್ಷ ಜಾನುವಾರುಗಳ ಗಣತಿ ಕಾರ್ಯ ಕೈಗೊಳ್ಳಲು ಉದ್ದೇಶಿಸಲಾಗಿದೆ. ಇದನ್ನು ವೈಜ್ಞಾನಿಕವಾಗಿ ನಿರ್ವಹಿಸಬೇಕು. ರಾಜ್ಯದಲ್ಲಿ 2.4 ಕೋಟಿ ಲೀಟರ್‌ ಪ್ರತಿದಿನ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದನೆ ಹೆಚ್ಚಿಸಲು ಪೂರಕವಾಗಿ ಲಸಿಕಾ ಕಾರ್ಯಕ್ರಮವನ್ನು ಸಮಗ್ರವಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು

ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಶೇ.6ರ ಬಡ್ಡಿ ಸಹಾಯಧನ ಒದಗಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 2759 ವೈಯಕ್ತಿಕ ಫಲಾನುಭವಿಗಳಿಗೆ ರೂ.1ಕೋಟಿ ಅನುದಾನದಲ್ಲಿ ಸಹಾಯಧನ ಒದಗಿಸಲು ನಿಗದಿಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳು ಅರ್ಹ ಮಹಿಳೆಯರಿಗೆ ಸಹಾಯಧನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಜಾನುವಾರುಗಳ ಮರಣಕ್ಕೆ ಪರಿಹಾರವನ್ನು ತಕ್ಷಣ ಒದಗಿಸಬೇಕು. ಪ್ರಸ್ತುತ ಸಾಲಿನಲ್ಲಿ ಸಾವಿಗೀಡಾದ 10,800 ಜಾನುವಾರುಗಳಿಗೆ 5.83 ಕೋಟಿ ರೂ. ಪರಿಹಾರ ಒದಗಿಸಲಾಗಿದೆ. ಈ ಹಿಂದೆ ಸಾವಿಗೀಡಾದ ಜಾನುವಾರುಗಳಿಗೆ ನೀಡಬೇಕಾದ ಪರಿಹಾರ ಬಾಕಿ ಕುರಿತು ಪರಿಶೀಲನೆ ನಡೆಸಬೇಕು ಎನ್ನುವ ಸೂಚನೆಯನ್ನು ಸಿಎಂ ನೀಡಿದರು.

ಕೌಶಲ್ಯಾಭಿವೃದ್ಧಿ

ನಗರ ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವ ಪಿಎಂ ಸ್ವನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿ ಪಡಿಸಿದ ಗುರಿಗಿಂತ ಹೆಚ್ಚಿನ ಸಾಧನೆಯಾಗಿದೆ. ಶೇ. 54 ರಷ್ಟು ಮಹಿಳೆಯರು ಸಾಲ ಸೌಲಭ್ಯ ಪಡೆದಿದ್ದಾರೆ*

ಉಡುಪಿ, ಕೊಡಗು, ಯಾದಗಿರಿ, ಚಾಮರಾಜನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ನಿಗದಿತ ಗುರಿಗಿಂತ ಹೆಚ್ಚಿನ ಸಾಧನೆಯಾಗಿದೆ.
ಯುವ ನಿಧಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕೈಗಾರಿಕೋದ್ಯಮಗಳಲ್ಲಿ ಬೇಡಿಕೆಗೆ ಅನುಗುಣವಾದ ತರಬೇತಿ ನೀಡಿ ಉದ್ಯೋಗ ಒದಗಿಸಲು ಸಿಎಂ ಸೂಚಿಸಿದರು.

ಅವರಿಗೆ ನಿರುದ್ಯೋಗ ಭತ್ಯೆ ಎರಡು ವರ್ಷ ಮಾತ್ರ ನೀಡುವ ಕಾರಣ, ಅಷ್ಟರೊಳಗೆ ಅವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಉದ್ಯೋಗ ಪಡೆಯಲು ಅನುವು ಮಾಡಿಕೊಡಬೇಕು ಎಂದು ಸೂಚಿಸಿದರು.

ಕಲಿಕೆ ಜೊತೆ ಕೌಶಲ್ಯ ಯೋಜನೆಯಡಿ ಕಲಿಯುವ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಅವರಿಗೆ ಹೆಚ್ಚಿನ ಉದ್ಯೋಗವಾಕಾಶ ಕಲ್ಪಿಸಲಾಗುತ್ತಿದೆ.
ಜಿಟಿಟಿಸಿ ಸಂಸ್ಥೆಗಳನ್ನು ಉನ್ನತೀಕರಿಸಿ, ಪ್ರವೇಶಾವಕಾಶವನ್ನು 3000 ದಿಂದ 5,000 ಕ್ಕೆ ಹೆಚ್ಚಿಸಲಾಗಿದೆ*

ವೈದ್ಯಕೀಯ ಶಿಕ್ಷಣ

ಜಿಲ್ಲೆಗಳಲ್ಲಿರುವ ನರ್ಸಿಂಗ್‌ ಡಿಪ್ಲೊಮಾ ಕಾಲೇಜುಗಳ ಕಾರ್ಯನಿರ್ವಹಣೆಯ ಕುರಿತು ಸಾಕಷ್ಟು ದೂರುಗಳು ಬರುತ್ತಿದ್ದು, ಇವುಗಳನ್ನು ಖುದ್ದು ತಪಾಸಣೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಲಾಯಿತ.

ಅರಣ್ಯ ವಾಸಿಗಳಿಗೆ ಭೂಮಿ ಹಕ್ಕು ಕುರಿತು ನಿರ್ಣಯ

ರಾಜ್ಯದಲ್ಲಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮದಡಿ 298798 ಅರ್ಜಿ ಸ್ವೀಕೃತಗೊಂಡಿದ್ದು, 258086 ಅರ್ಜಿಗಳು ತಿರಸ್ಕೃತಗೊಂಡಿವೆ. 24186 ಅರ್ಜಿಗಳು ಇತ್ಯರ್ಥವಾಗದೇ ಬಾಕಿಯಿವೆ. ಇದುವರೆಗೆ 16426 ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, 56479 ಎಕ್ರೆ ಭೂಮಿ ಮಂಜೂರು ಮಾಡಲಾಗಿದೆ. ಅರಣ್ಯವಾಸಿಗಳಿಗೆ ಭೂಮಿ ಹಕ್ಕು ಖಾತ್ರಿಪಡಿಸಲು ಮುಂದಿನ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದರು

ಬುಡಕಟ್ಟು ಸಮುದಾಯ ಅಭಿವೃದ್ಧಿ

ರಾಜ್ಯದ 5ಜಿಲ್ಲೆಗಳ ಹಾಡಿಗಳಲ್ಲಿ ವಾಸಿಸುತ್ತಿರುವ ಜೇನುಕುರುಬ ಹಾಗೂ ಕೊರಗ ಜನಾಂಗದವರಿಗೆ ಸೌಲಭ್ಯಗಳನ್ನು ಕಲ್ಪಿಸಲು ಪಿಎಂ ಜನಮನ್‌ ಯೋಜನೆ ಜಾರಿಯಲ್ಲಿದೆ.

ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ 44040 ಜೇನುಕುರುಬ ಹಾಗೂ 13007 ಕೊರಗರು ಇದ್ದಾರೆ. ಈ ಜನಾಂಗದ 19 ಸಾವಿರ ಕುಟುಂಬಗಳಿದ್ದು, 6871 ಕುಟುಂಬಗಳಿಗೆ ಮಾತ್ರ ಮನೆಯಿದೆ. 12ಸಾವಿರ ಮನೆಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಸ್ಥಳ ಗುರುತಿಸಿ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕು

ಗುರುತಿನ ಚೀಟಿ ಸಮಸ್ಯೆಯನ್ನು ಬಗೆಹರಿಸಬೇಕು. ಈ ಜನಾಂಗಗಳ ಅಭಿವೃದ್ಧಿಗೆ 9 ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಯೋಜನೆಗಳಿದ್ದು, ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ಅನುಷ್ಠಾನ ಮಾಡಬೇಕು ಎಂದು ಸೂಚನೆ ನೀಡಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ

ರಾಜ್ಯದಲ್ಲಿ 217 ವಕ್ಫ್‌ ಆಸ್ತಿಗಳ ಒತ್ತುವರಿ ತೆರವು ಕಾರ್ಯ ಬಾಕಿಯಿದೆ. 22581 ವಕ್ಫ್‌ ಖಾತೆ ಮ್ಯುಟೇಶನ್‌ ಬಾಕಿಯಿದ್ದು, ಇದನ್ನು ತ್ವರಿತಗೊಳಿಸಬೇಕು. ನ್ಯಾಯಾಲಯಗಳಲ್ಲಿ ತಡೆ ಇರುವ ಪ್ರಕರಣಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮವನ್ನು ಸಮರ್ಪಕವಾಗಿ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಬೇಕು ಎಂದರು.

ಕುವೆಂಪು ಏನು ಹೇಳಿದಾರೆ ಗೊತ್ತಾ: ಮನೋಜ್ ಜೈನ್ ಗೆ ಸಿಎಂ ಹೇಳಿದ ಕುವೆಂಪು ಪಾಠ

ಯಾವುದಾದರೂ ಇಂಗ್ಲಿಷ್ ಪದಕ್ಕೆ ಕನ್ನಡದಲ್ಲಿ ಸೂಕ್ತ ಪದ ಇಲ್ಲದಿದ್ದರೆ ಅದನ್ನು ಇಂಗ್ಲಿಷ್ ನಲ್ಲೇ ಬಳಸಬೇಕು ಎಂದು ಕುವೆಂಪು ಹೇಳಿದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು DC-CEO ಗಳ ಸಭೆಯಲ್ಲಿ ಪ್ರಸ್ತಾಪಿಸಿದ ಪ್ರಸಂಗ ನಡೆಯಿತು. ಅಲ್ಪಸಂಖ್ಯಾತ ಇಲಾಖೆ ಚರ್ಚೆ ನಡೆಯುವ ಸಂದರ್ಭದಲ್ಲಿ ಕಾರ್ಯದರ್ಶಿ ಮನೋಜ್ ಜೈನ್ ಅವರು “ಇಂಡೀಕರಣ” ಪದ ಬಳಸಿದರು.

ಈ ವೇಳೆ ಮುಖ್ಯಮಂತ್ರಿಗಳು ಕುವೆಂಪು ಅವರ ಮಾತನ್ನು ಪ್ರಸ್ತಾಪಿಸಿ, ಇಂಡೀಕರಣ ಎಂದರೆ ಹೆಚ್ಚಿನವರಿಗೆ ಅರ್ಥ ಆಗುವುದಿಲ್ಲ. ಹೀಗಾಗಿ Mutation ಪದವನ್ನೇ ಬಳಸಿ ಎನ್ನುತ್ತಾ, “ಯಾವುದಾದರೂ ಇಂಗ್ಲಿಷ್ ಪದಕ್ಕೆ ಕನ್ನಡದಲ್ಲಿ ಸೂಕ್ತ ಪದ ಇಲ್ಲದಿದ್ದರೆ ಅದನ್ನು ಇಂಗ್ಲಿಷ್ ನಲ್ಲೇ ಬಳಸಬೇಕು ಎಂದು ಕುವೆಂಪು ಹೇಳಿದಾರೆ ಗೊತ್ತಾ” ಎಂದು ಕಿರು ಪಾಠ ಮಾಡಿದರು. ಇಡೀ ಸಭೆ ಕುವೆಂಪು ಪಾಠವನ್ನು ಸಂಭ್ರಮಿಸಿತು.‌

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ವಿದ್ಯುದೀಕರಣಕ್ಕೆ ನೋಂದಾಯಿಸಿದ ಹಾಗೂ ಬಾಕಿ ಇರುವ ಅರ್ಜಿಗಳ ಶೀರ್ಘ ವಿಲೇವಾರಿ ಮಾಡಲು ಸಿಎಂ ಸೂಚನೆ ನೀಡಿದರು.

ಗಂಗಾಕಲ್ಯಾಣ ಯೋಜನೆಯಡಿ ಒಟ್ಟು 9616 ಬೋರ್‌ವೆಲ್‌ ಕೊರೆಯಲಾಗಿದ್ದು, 4413 ಬೋರ್‌ವೆಲ್‌ಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಇನ್ನೂ 5203 ಬೋರ್‌ವೆಲ್‌ಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಕಾಲೇಜುಗಳು ಹೆಚ್ಚಿರುವ ಕಾರಣ ಜಿಲ್ಲಾ ಮಟ್ಟದಲ್ಲಿ ಹೊಸ ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ

ದೌರ್ಜನ್ಯ ತಡೆ ಅಧಿನಿಯಮದ ಅಡಿ ದಾಖಲಾಗಿರುವ ಒಟ್ಟು 26 ಕೊಲೆ ಪ್ರಕರಣಗಳಲ್ಲಿ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಬೇಕಾಗಿದ್ದು, ಆದಷ್ಟು ಬೇಗನೆ ನೌಕರಿ ಒದಗಿಸಬೇಕು. ಜಿಲ್ಲೆಯಲ್ಲಿ ಉಪ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ನಡೆಸಬೇಕು.

ಸಿಂಧುತ್ವ ಪ್ರಮಾಣ ಪತ್ರ

ಸಿಂಧುತ್ವ ಪ್ರಮಾಣ ಪತ್ರವನ್ನು ಒಂದು ತಿಂಗಳ ಒಳಗಾಗಿ ನೀಡಬೇಕು. ಪ್ರಸ್ತುತ 2684 ಅರ್ಜಿಗಳು ಬಾಕಿಯಿದ್ದು, ಅರ್ಹತೆ ಇದ್ದವರಿಗೆ ತಕ್ಷಣ ಪ್ರಮಾಣ ಪತ್ರ ನೀಡಬೇಕು. ವಿನಾಕಾರಣ ಸಿಂಧುತ್ವ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದರೆ ಜಿಲ್ಲಾಧಿಕಾರಿ ಅವರನ್ನೇ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಂಬೇಡ್ಕರ್‌ ಭವನ ನಿರ್ಮಾಣ ಕಾಮಮಗಾರಿ ಹಲವು ಕಡೆ ಅರ್ಧದಲ್ಲಿ ನಿಂತಿದ್ದು, ಕಾಮಗಾರಿ ಪೂರ್ಣಗೊಳಿಸುವ ಕುರಿತು ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ವಿದ್ಯುದೀಕರಣಕ್ಕೆ ನೋಂದಾಯಿಸಿದ ಹಾಗೂ ಬಾಕಿ ಇರುವ ಅರ್ಜಿಗಳ ಶೀರ್ಘ ವಿಲೇವಾರಿ ಮಾಡಲು ಸಿಎಂ ಸೂಚನೆ ನೀಡಿದರು.

ಹಿಂದುಳಿದ ವರ್ಗ

ಗಂಗಾಕಲ್ಯಾಣ ಯೋಜನೆಯಡಿ ಒಟ್ಟು 9616 ಬೋರ್‌ವೆಲ್‌ ಕೊರೆಯಲಾಗಿದ್ದು, 4413 ಬೋರ್‌ವೆಲ್‌ಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಇನ್ನೂ 5203 ಬೋರ್‌ವೆಲ್‌ಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಕಾಲೇಜುಗಳು ಹೆಚ್ಚಿರುವ ಕಾರಣ ಜಿಲ್ಲಾ ಮಟ್ಟದಲ್ಲಿ ಹೊಸ ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದರು.

ಡೆಂಗ್ಯೂ ತಡೆಗೆ ಅಗತ್ಯ ಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ಚಿಕಿತ್ಸೆಗೆ ವಿಶೇಷ ವಾರ್ಡ್‌ ಸಜ್ಜುಗೊಳಿಸಬೇಕು. ಮೆಡಿಕಲ್‌ ಕಾಲೇಜುಗಳಲ್ಲಿಯೂ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಡೆಂಗ್ಯೂ ಪಾಸಿಟಿವ್‌ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‌ಫೋರ್ಸ್‌ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು.

ಪ್ರಸ್ತುತ ಸಾಲಿನಲ್ಲಿ 215 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲು ಅನುಮೋದನೆ ನೀಡಲಾಗಿದ್ದು, 42 ಕಡೆಗಳಲ್ಲಿ ಕಟ್ಟಡ ಗುರುತಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ 503 ನಮ್ಮ ಕ್ಲಿನಿಕ್‌ಗಳು ಕಾರ್ಯಾಚರಿಸುತ್ತಿವೆ. ನಮ್ಮ ಕ್ಲಿನಿಕ್‌ಗಳಲ್ಲಿ ಲಭ್ಯವಿರುವ ಸೇವೆಗಳ ಮಾಹಿತಿಯನ್ನು ಪ್ರಚುರಪಡಿಸಬೇಕು.

ಅಂಗನವಾಡಿ ನೇಮಕ ಪೂರ್ಣಗೊಳಿಸಿ

ಅಂಗನವಾಡಿ ಕಾರ್ಯಕರ್ತೆಯರ 4180 ಹುದ್ದೆಗಳು ಹಾಗೂ ಸಹಾಯಕಿಯರ 9411 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್‌ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು. ನಗರ ಪ್ರದೇಶದಲ್ಲಿ ಸಹಾಯಕಿಯರ ಹುದ್ದೆಯ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸೂಚನೆ ನೀಡಿದರು.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು ಎಂದರು.

ಬಾಲ್ಯ ಗರ್ಭಿಣಿ ಪ್ರಕರಣ ತಡೆಗೆ ಕ್ರಮ

ರಾಜ್ಯದಲ್ಲಿ 2022-23ರ ಅವಧಿಯಲ್ಲಿ 13477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ತಿಳಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಕಲಿಕೆಯಿಂದ ದೂರ ಉಳಿದ ಮಕ್ಕಳನ್ನು ಪತ್ತೆ ಹಚ್ಚಿ ಶಾಲೆಗೆ ಸೇರಿಸಿ.  ರಾಜಪ್ಪ ಎನ್ನುವ ಮೇಸ್ಟ್ರು ಶಾಲೆಯಿಂದ ಹೊರಗೆ ಉಳಿದಿದ್ದ ನನ್ನನ್ನು ಶಾಲೆಗೆ ಸೇರಿಸದಿದ್ದರೆ ನಾನು ಮುಖ್ಯಮಂತ್ರಿಯೇ ಆಗುತ್ತಿರಲಿಲ್ಲ. ಸಾಮಾಜಿಕ-ಆರ್ಥಿಕ ಕಾರಣದಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಕಾಳಜಿ ಇಟ್ಟು ಶಿಕ್ಷಣ ಒದಗಿಸಿ ಎಂದು ಸಿ.ಎಂ ಸೂಚಿಸಿದರು.

ಸಿಎಸ್‌ಆರ್‌ ನೆರವಿನಲ್ಲಿ 2ಸಾವಿರ ಶಾಲೆಗಳ ನಿರ್ಮಾಣ

ಬಜೆಟ್‌ನಲ್ಲಿ ಘೋಷಿಸಿರುವಂತೆ 2 ಸಾವಿರ ಪಂಚಾಯತ್‌ ವ್ಯಾಪ್ತಿಯಲ್ಲಿ ಮಾದರಿ ಶಾಲೆಗಳನ್ನು ಸಿಎಸ್‌ಆರ್‌ ಅಡಿಯಲ್ಲಿ ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಲಾಗಿದೆ. ಇದಕ್ಕಾಗಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ರಾಜ್ಯದಲ್ಲಿ ಖಾಸಗಿ ಕಂಪೆನಿಗಳು ಕಾಯ್ದೆ ಪ್ರಕಾರ ಕಳೆದ ಸಾಲಿನಲ್ಲಿ 8163 ಕೋಟಿ ಕಡ್ಡಾಯವಾಗಿ ಸಿಎಸ್‌ಆರ್‌ ಅಡಿ ವೆಚ್ಚ ಮಾಡಬೇಕಾಗಿತ್ತು. ಖಾಸಗಿ ಕಂಪೆನಿಗಳು ಈ ಅವಧಿಯಲ್ಲಿ 4 ಲಕ್ಷ ಕೋಟಿ ರೂ. ಲಾಭ ಗಳಿಸಿವೆ. 1190 ಕೋಟಿ ಕಳೆದ ವರ್ಷ ಸಿಎಸ್‌ಆರ್‌ ಅಡಿ ವೆಚ್ಚ ಮಾಡಿದ್ದು, ಶೇ.30ರಷ್ಟು ಮಾತ್ರ ಸಿಎಸ್‌ಆರ್‌ ಅಡಿ ಬಳಸುತ್ತಿವೆ ಎಂದರು.

ರಾಮನಗರ ಜಿಲ್ಲೆಯಲ್ಲಿ ಪೈಲೆಟ್‌ ಯೋಜನೆಯಾಗಿ ಆರಂಭಿಸಲಾಗಿದ್ದು, ಮೂರು ಪಂಚಾಯತ್‌ಗಳಿಗೆ ಒಂದು ಶಾಲೆಯಂತೆ ಈಗಾಗಲೇ 20 ಶಾಲೆ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಟೊಯೋಟಾ ಕಂಪೆನಿ ಒಂದೇ 20 ಕೋಟಿ ಸಿಎಸ್‌ಆರ್‌ ಅಡಿ ಒದಗಿಸಿದ್ದಾರೆ. ನಾವು 3 ಎಕ್ರೆ ಜಮೀನು ಒದಗಿಸಬೇಕು. ಶಾಲೆಯ ಮಾದರಿಯನ್ನು ಮಾತ್ರ ನಾವು ಒದಗಿಸುತ್ತೇವೆ. ನಿರ್ಮಾಣ ಕಾರ್ಯವನ್ನು ಅವರೇ ಮಾಡುತ್ತಾರೆ.

ರಾಜ್ಯದಲ್ಲಿ ಈಗಾಗಲೇ 500 ಸ್ಥಳಗಳನ್ನು ಗುರುತಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 2ಸಾವಿರ ಶಾಲೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಪ್ರಮುಖ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಿ

ಶಾಲೆಯಿಂದ ಯಾವ ಮಕ್ಕಳೂ ಹೊರಗುಳಿಯಬಾರದು. ಪ್ರತಿ ವರ್ಷ 6ರಿಂದ 16 ವರ್ಷದೊಳಗಿನ ಮಕ್ಕಳ ಸಮೀಕ್ಷೆಯನ್ನು ನಡೆಸಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮತ್ತೆ ಸೇರಿಸಲು ಕ್ರಮ ಕೈಗೊಳ್ಳಬೇಕು.

ಸಾರಿಗೆ ಇಲಾಖೆ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗುತ್ತಿರುವ ರಸ್ತೆ ಅಪಘಾತಗಳಿಗೆ ಸಿಎಂ ಗರಂ ಆದರು. ಅಧಿಕಾರಿಗಳ ಉದಾಸೀನದಿಂದ ಜನರ ಅಮೂಲ್ಯ ಪ್ರಾಣ ಹೋದರೆ ಸಹಿಸಲ್ಲ: ನೀವು ರಸ್ತೆಗಳಿದು ಸುರಕ್ಷತೆ ಪರೀಕ್ಷಿಸಿ ಎಂದರು.

ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿರುವ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು ಎಂದರು.

ಕಂದಾಯ, ಪೊಲೀಸ್‌, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ. ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಹಾಟ್‌ಸ್ಟಾಟ್‌ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್‌ ವ್ಯವಸ್ಥೆ, ಟ್ರಾಮಾ ಸೆಂಟರ್‌ ನೆಟ್‌ವರ್ಕ್‌ ಮಾಡಬೇಕು ಎಂದರು.

ಹೊಸ ಪ್ರವಾಸೋದ್ಯಮ ನೀತಿ

ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ. 320 ಕಿಮಿ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು.

ಇದರಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು

ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು

ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ

ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ ಎಂದರು

ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲಾ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನವನ್ನು ಒದಗಿಸಲಾಗುವುದು ಎಂದರು

ಕರಾವಳಿಯಲ್ಲಿ ಸಿಆರ್‌ಝೆಡ್‌ ಕಾಯ್ದೆಯಿಂದಾಗಿ ಅಭಿವೃದ್ಧಿಗೆ ಕೆಲವು ತೊಡಕುಗಳಿದ್ದು, ಇದನ್ನು ಬಗೆಹರಿಸಲು ಪ್ರಯತ್ನಿಸಬೇಕು ಎಂದರು

ಪ್ರವಾಸೋದ್ಯಮ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲು ಸಿಎಂ ಸೂಚನೆ

ರಾಜ್ಯದಲ್ಲಿ ಕೆಲವೇ ಪ್ರವಾಸೋದ್ಯಮ ತಾಣಗಳಿಗೆ ಫೋಕಸ್‌ ದೊರೆಯುತ್ತಿದೆ. 25 ಸಾವಿರ ಸ್ಮಾರಕಗಳಿವೆ. ಇವುಗಳ ಪೈಕಿ ಸುಮಾರು 23 ಸಾವಿರ ಸ್ಮಾರಕಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ ಕಾಯ್ದೆ 2015 ಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದರೆ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಸಾಧ್ಯವಿದೆ. ಪ್ರವಾಸೋದ್ಯಮತಾಣಗಳ ಸಮೀಕ್ಷೆ, ಸಂರಕ್ಷಣೆ ಇತ್ಯಾದಿಗಳ ಮಾಸ್ಟರ್‌ ಪ್ಲಾನ್‌ ಜಿಲ್ಲಾವಾರು ಸಿದ್ಧಪಡಿಸಬೇಕು. ಮೂರು ತಿಂಗಳ ಒಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು. ಪ್ರವಾಸಿಕ ತಾಣಗಳನ್ನು ಹಂತ ಹಂತವಾಗಿ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು

ಸ್ಥಳೀಯ ಜನರು, ಎನ್‌ಜಿಒಗಳ ಸಹಯೋಗ ಪಡೆದುಕೊಳ್ಳಬೇಕು. ಜಿಲ್ಲಾ ಪ್ರವಾಸೋದ್ಯಮ ಕುರಿತು ಪುಸ್ತಕಗಳನ್ನು ಬಿಡುಗಡೆಗೊಳಿಸಿ. ಸ್ಮಾರಕ ದತ್ತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಆಸಕ್ತರು ಸ್ಮಾರಕಗಳನ್ನು ದತ್ತು ಪಡೆದು ಸಂರಕ್ಷಣೆ ಕಾರ್ಯ ಮಾಡಬಹುದಾಗಿದೆ ಎಂದು ಹೇಳಿದರು

ಕರಾವಳಿ ಪ್ರವಾಸೋದ್ಯಮಕ್ಕೆ ಆದ್ಯತೆ

ಕರಾವಳಿಯಲ್ಲಿ ಮೆಡಿಕಲ್‌ ಕಾಲೇಜುಗಳು, ಬಂದರುಗಳು, ದೇವಾಲಯಗಳು ಸೇರಿದಂತೆ ಹಲವು ಪ್ರಮುಖ ಸ್ಥಳಗಳು ಇವೆ. ಆದರೆ ಒಂದೇ ಒಂದು ಪಂಚತಾರಾ ಹೊಟೇಲ್‌ ಇಲ್ಲ. ಸಂಜೆಯಾಗುತ್ತಿದ್ದಂತೆಯೇ ಇಡೀ ಮಂಗಳೂರು ಮುಚ್ಚಿಕೊಳ್ಳುತ್ತದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಕ್ಕೆ ಪ್ರತ್ಯೇಕ ಯೋಜನೆಯನ್ನು ರೂಪಿಸಬೇಕಿದೆ. ಕರಾವಳಿಯ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಕಂಡುಕೊಳ್ಳುವ ಅಗತ್ಯವಿದೆ. ಇದರಿಂದ ತೆರಿಗೆ ಸಂಗ್ರಹ ಹಾಗೂ ಸ್ಥಳೀಯರಿಗೆ ಉದ್ಯೋಗವಕಾಶ ಸೃಷ್ಠಿಸಲು ಸಾಧ್ಯವಿದೆ. ಕರಾವಳಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮುಂಬೈ, ಗಲ್ಫ್‌ ದೇಶಗಳಿಗೆ ಉದ್ಯೋಗ ಅರಸಿಕೊಂಡು ಹೋಗುವ ಪರಿಸ್ಥಿತಿ ಬದಲಾಗಬೇಕಿದೆ ಎಂದರು*

ಸಚಿವ ಹೆಚ್.ಕೆ.ಪಾಟೀಲ್ ಅವರ ಪ್ರಸ್ತಾವನೆ…

ರಾಜ್ಯದಲ್ಲಿ 25 ಸಾವಿರ ಸ್ಮಾರಕಗಳಿವೆ. ಇವುಗಳ ಮಹತ್ವ ಅರಿತು ಗೈಡ್ ಗಳನ್ನು ನೇಮಿಸುವುದಾಗಲಿ, ಸಮೀಕ್ಷೆ ನಡೆಸಿ, ಸಂರಕ್ಷಣೆ ಮಾಡಿ ನಿಮ್ಮ ನಿಮ್ಮ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಾಸ್ಟರ್ ಪ್ಲಾನ್ ಸಿದ್ದಪಡಿಸಲು ಅವಕಾಶಗಳಿವೆ. ಇದಕ್ಕೆ ತಕ್ಕಂತೆ ಆಕ್ಷನ್್ ಪ್ಲಾನ್ ಮಾಡಿ, ಬಜೆಟ್ ಪ್ಲಾನ್ ಸಿದ್ದಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬಹುದು. ನಿಮ್ಮ ಜಿಲ್ಲೆಗಳಲ್ಲಿ ಎಷ್ಟೆಲ್ಲಾ ಉತ್ತಮ ಸಾಹಿತಿ, ಬರಹಗಾರರು, ಕಲಾವಿದರು ಇದ್ದಾರೆ. ಅವರ ನೆರವು ಪಡೆದು 3 ತಿಂಗಳಲ್ಲಿ ಮಾಸ್ಟರ್ ಪ್ಲಾನ್ ಸಿದ್ದಪಡಿಸಿ ಪ್ರವಾಸೋದ್ಯಮ ಸಮಿತಿ ಮುಂದೆ ಇಡಿ. ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವವರೂ ಇರ್ತಾರೆ. ಅವರನ್ನು ಗುರುತಿಸಿ. ನೀವು ಸಿದ್ದಪಡಿಸುವ ಮಾಸ್ಟರ್ ಪ್ಲಾನ್ ಗೆ ಹಣಕಾಸು ಒದಗಿಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ಅಭಿಪ್ರಾಯಪಟ್ಟರು.

ಕಪ್ಪತ್ತಗುಡ್ಡ ನಿಸರ್ಗ ಪ್ರದೇಶವನ್ನು ಪ್ರವಾಸೋದ್ಯಮ ಕ್ಷೇತ್ರವಾಗಿ ಇನ್ನಷ್ಟು ಅಭಿವೃದ್ಧಿ ಪಡಿಸಲು ಸಾಧ್ಯವಿದೆ. ಈ ಬಗ್ಗೆ ಗಮನ ಹರಿಸಿ. ಎಲ್ಲಾ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿದರೆ ರಾಜ್ಯದ ಪ್ರತೀ ಜಿಲ್ಲೆಗಳನ್ನೂ ಪ್ರವಾಸೋದ್ಯಮ ಜಿಲ್ಲೆಗಳನ್ನಾಗಿ ಮಾಡಬಹುದಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಅವರು ಪ್ರಸ್ತಾವನೆಗೆ ಮುಂದಿಟ್ಟರು. ಇದಕ್ಕೆ ಧ್ವನಿಗೂಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಅತೀ ವಿಸ್ತಾರವಾದ ಕರಾವಳಿ ಪ್ರದೇಶವಿದೆ. ಕರಾವಳಿಯುದ್ಧಕ್ಕೂ ನಾವು ಪ್ರವಾಸೋದ್ಯಮ ಬೆಳೆಸುವ, ಅಭಿವೃದ್ಧಿಪಡಿಸುವ ಅವಕಾಶಗಳು ಹೇರಳವಾಗಿವೆ ಎಂದರು.

BIG NEWS: ‘ಅನರ್ಹರ ರೇಷನ್ ಕಾರ್ಡ್‌’ಗಳನ್ನು ರದ್ದು, ಅರ್ಹರಿಗೆ ಮಾತ್ರ ಸೌಲಭ್ಯ: ಸಿಎಂ ಸಿದ್ಧರಾಮಯ್ಯ

BREAKING: ನಾಳೆ ಬೆಳಗ್ಗೆ ‘SSLC ಪರೀಕ್ಷೆ-2’ರ ಫಲಿತಾಂಶ ಪ್ರಕಟ | Karnataka SSLC Exam Results

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಸರ್ಕಾರದಿಂದ 2025-26ನೇ ಸಾಲಿನ ‘ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ | Transfer

13/05/2025 5:53 AM3 Mins Read

BIG NEWS : ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಿ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

13/05/2025 5:35 AM1 Min Read

BREAKING : ಬೆಂಗಳೂರಲ್ಲಿ ತಂದೆಯ ಸಿಂಗಲ್ ಬ್ಯಾರಲ್ ಗನ್ ನಿಂದ, ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

12/05/2025 9:11 PM1 Min Read
Recent News

BIG NEWS : `IPL’ 2025ರ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ: ಇಲ್ಲಿದೆ ಸಂಪೂರ್ಣ ಪಟ್ಟಿ | IPL 2025 Revised Schedule

13/05/2025 5:56 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಸರ್ಕಾರದಿಂದ 2025-26ನೇ ಸಾಲಿನ ‘ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ | Transfer

13/05/2025 5:53 AM

BIG NEWS : ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಿ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

13/05/2025 5:35 AM

BREAKING : ಆಫ್ರಿಕಾದ ಬುರ್ಕಿನಾ ಫಾಸೊದಲ್ಲಿ ಭಯೋತ್ಪಾದಕರ ಜಿಹಾದಿ ದಾಳಿ : ಸೈನಿಕರು ಸೇರಿ 100ಕ್ಕೂ ಹೆಚ್ಚು ಜನ ಸಾವು.!

13/05/2025 5:31 AM
State News
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಸರ್ಕಾರದಿಂದ 2025-26ನೇ ಸಾಲಿನ ‘ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ | Transfer

By kannadanewsnow5713/05/2025 5:53 AM KARNATAKA 3 Mins Read

ಬೆಂಗಳೂರು: ರಾಜ್ಯ ಸರ್ಕಾರದಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಈ ಸಂಬಂಧ 2025-26ನೇ ಸಾಲಿನ ಸರ್ಕಾರಿ ನೌಕರರ…

BIG NEWS : ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಿ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

13/05/2025 5:35 AM

BREAKING : ಬೆಂಗಳೂರಲ್ಲಿ ತಂದೆಯ ಸಿಂಗಲ್ ಬ್ಯಾರಲ್ ಗನ್ ನಿಂದ, ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

12/05/2025 9:11 PM

Factcheck: ‘ತುಕ್ಕು ಹಿಡಿದ ಟ್ಯಾಂಕರ್‌’ಗಳಲ್ಲಿ ‘ಅಶುದ್ಧ ನೀರು’ ಎಂಬುದು ಸುಳ್ಳು ಸುದ್ದಿ: ರಾಜ್ಯ ಸರ್ಕಾರ ಸ್ಪಷ್ಟನೆ

12/05/2025 7:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.