Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಲ್ಲಿದೆ ಇಂದಿನ ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಾಧ್ಯಸ್ಥ ಸಭೆಯ ಪ್ರಮುಖ ಹೈಲೈಟ್ಸ್
KARNATAKA

ಇಲ್ಲಿದೆ ಇಂದಿನ ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಾಧ್ಯಸ್ಥ ಸಭೆಯ ಪ್ರಮುಖ ಹೈಲೈಟ್ಸ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ.

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆ.2ರಂದು 6ನೇ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಈ ಮಾಸಾಂತ್ಯದೊಳಗೆ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿರುವ ಹಿನ್ನೆಲೆಯಲ್ಲಿ ನಡೆದ 11 ಜಿಲ್ಲೆಗಳ ಜನಪ್ರತಿನಿಧಿಗಳ (ಬಾಧ್ಯಸ್ಥರ) ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ವಿವರ ನೀಡಿದರು.

ಇಂದು ನಡೆದ ಸಭೆಯಲ್ಲಿ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಸಚಿವರ, ಶಾಸಕರ ಮತ್ತು ಸಂಸತ್ ಸದಸ್ಯರ ಅಭಿಪ್ರಾಯ ಪಡೆಯಲಾಗಿದೆ. ಆ ಎಲ್ಲ ಅಭಿಪ್ರಾಯವನ್ನು ನಾಳೆ ನಡೆಯಲಿರುವ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, ಸಂಪುಟದ ಅನುಮೋದನೆ ಪಡೆದು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದರು.

ಹಲವು ಜನಪ್ರತಿನಿಧಿಗಳು ಈಗಾಗಲೇ ರಾಜ್ಯದಲ್ಲಿ 16114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ ಇದ್ದು, ಇನ್ನು ಹೆಚ್ಚಳ ಮಾಡಿದರೆ ಅರಣ್ಯದಂಚಿನ ಜನರ ಬದುಕೇ ದುಸ್ತರವಾಗುತ್ತದೆ. ಹೀಗಾಗಿ ಬಫರ್ ವಲಯವನ್ನು ಶೂನ್ಯಕ್ಕೆ ತರಬೇಕು ಎಂದು ಸಲಹೆ ನೀಡಿದ್ದಾರೆ. ಹಾಲಿ ಇರುವ 16114 ಚ.ಕಿ.ಮೀ. ಮಿತಿಗೆ ನಾವು ಸಮ್ಮತಿಸಿದರೆ ಶೂನ್ಯ ಬಫರ್ ಆಗುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ ಎಂದರು.

ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಈ ಬಗ್ಗೆ ಭೌತಿಕ ಸರ್ವೆ ನಡೆಸಿದರೆ ಈ ಪ್ರದೇಶ ಇನ್ನೂ ಹೆಚ್ಚಳವಾಗಲಿದೆ ಎಂಬ ಅಭಿಪ್ರಾಯವನ್ನೂ ಜನಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಹಲವು ತಲೆಮಾರುಗಳಿಂದ ಅರಣ್ಯ ಪ್ರದೇಶದಲ್ಲೇ ಜೀವನ ನಡೆಸುತ್ತಿರುವವರನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ. ಅವರಿಗೆ ಬೇರೆ ಕಡೆ ಪುನರ್ವಸತಿ ಕಲ್ಪಿಸಿದರೂ ಅವರು ಅಲ್ಲಿಗೆ ಹೋಗುವುದಿಲ್ಲ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದೆ ಹೀಗಾಗಿ ನಾಳೆಯ ಸಭೆಯಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದರು.

ವಿಶೇಷ ಪ್ಯಾಕೇಜ್ ಗೆ ಒತ್ತಾಯ

ಈಗಾಗಲೇ ಇರುವ 16114 ಚ.ಕಿ.ಪ್ರದೇಶಕ್ಕೆ ಅಂಗೀಕಾರ ನೀಡಿದರೂ ಈ ಪ್ರದೇಶದಲ್ಲಿರುವ 1576 ಗ್ರಾಮಗಳ ಜನರ ಜೀವನೋಪಾಯಕ್ಕೆ ಅನಾನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂಬ ಒತ್ತಾಯ ಮಾಡಬಹುದು ಎಂದು ತಾವು ಸಲಹೆ ನೀಡಿರುವುದಾಗಿ ಅರಣ್ಯ ಸಚಿವರು ತಿಳಿಸಿದರು.

ಪಶ್ಚಿಮ ಘಟ್ಟ ಕೇವಲ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿಗೆ ಮಾತ್ರ ಸಂಬಂಧಿಸಿದ್ದಲ್ಲ. ಈ ಘಟ್ಟ ಪ್ರದೇಶ ಹಲವು ನದಿಗಳ ಉಗಮ ಸ್ಥಾನವಾಗಿದೆ ಮಿಗಿಲಾಗಿ ಮಳೆಯ ಮಾರುತಗಳನ್ನು ತಡೆಯುವ ಕಾರಣ ದೇಶಾದ್ಯಂತ ವ್ಯಾಪಕ ಮಳೆಯಾಗುತ್ತದೆ. ಹೀಗಾಗಿ ಈ ಪಶ್ಚಿಮಘಟ್ಟ ಸಂರಕ್ಷಣೆಯ ಹೊಣೆ ಕೇಂದ್ರದ್ದೂ ಆಗಿದೆ. ಆದ ಕಾರಣ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದರು.

ಒತ್ತುವರಿ ತೆರವಿನ ಬಗ್ಗೆ ಸ್ಪಷ್ಟೀಕರಣ

ಒತ್ತುವರಿ ತೆರವಿನ ಬಗ್ಗೆ ತಾವು ನೀಡಿರುವ ಟಿಪ್ಪಣಿಗಳು ಸ್ಪಷ್ಟವಾಗಿವೆ. 2015ರ ನಂತರದ ಒತ್ತುವರಿ ಮಾತ್ರ ತೆರವು ಮಾಡಲು ಸೂಚಿಸಲಾಗಿದೆ. ಜೊತೆಗೆ 2015ರ ಸರ್ಕಾರದ ಆದೇಶ ಮತ್ತು ನಡವಳಿಯಂತೆ 3 ಎಕರೆಗಿಂತ ಮೇಲ್ಪಟ್ಟ ದೊಡ್ಡ ಒತ್ತುವರಿ ತೆರವು ಮಾಡಲಾಗುತ್ತಿದ್ದು, ಬಡ ರೈತರ ಒತ್ತುವರಿಯನ್ನು (ಪಟ್ಟಾಭೂಮಿ ಮತ್ತು ಒತ್ತುವರಿ ಸೇರಿ 3 ಎಕರೆ) ತೆರವು ಮಾಡಿಸುವುದಿಲ್ಲ ಎಂದು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದರು.

ರಾಜೇಗೌಡರ ಮನವಿ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾಸಕ ರಾಜೇಗೌಡರು 3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವವರ ಜೀವನೋಪಾಯಕ್ಕೆ ತೊಂದರೆ ಆಗದಂತೆ ಕ್ರಮ ವಹಿಸಲು ಮನವಿ ಮಾಡಿರುತ್ತಾರೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇಂದು ನಡೆದ ಸಭೆಯಲ್ಲಿ ಸಚಿವರುಗಳಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೋಳಿ, ಮಧು ಬಂಗಾರಪ್ಪ, ಮಾಂಕಾಳ ವೈದ್ಯ, ವಿಧಾನಪರಿಷತ್ ಉಪ ಸಭಾಪತಿ ಪ್ರಾಣೇಶ್,ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಶಾಸಕರುಗಳಾದ ಆರಗ ಜ್ಞಾನೇಂದ್ರ, ನಯನ ಮೋಟಮ್ಮ, ರಾಜೇಗೌಡ, ಹರೀಶ್ ಪೂಂಜಾ, ಸಂಸದರಾದ ಶ್ರೇಯಸ್ ಪಟೇಲ್ ಮತ್ತಿತರರು ಪಾಲ್ಗೊಂಡಿದ್ದರು.

ಈ ಎಲ್ಲಾ ವಿಕೃತ ವಿದ್ಯೆಗಳಿಗೆ ‘RSS ಶಾಖೆ’ಯಲ್ಲಿ ಟ್ರೈನಿಂಗ್ ಕೊಡಲಾಗುತ್ತಿದೆಯೇ?: ಕಾಂಗ್ರೆಸ್ ಪ್ರಶ್ನೆ

‘ಖಲಿಸ್ತಾನಿ ಭಯೋತ್ಪಾದಕ’ ಪನ್ನುನಿ ಹತ್ಯೆ ಯತ್ನ: ಭಾರತ ಸರ್ಕಾರಕ್ಕೆ ಸಮನ್ಸ್ ಜಾರಿ ಮಾಡಿದ ಅಮೆರಿಕ ಕೋರ್ಟ್

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.