Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ : ‘SIT’ ಆರಂಭಿಸಿದ ಸಹಾಯವಣಿಗೆ ಬರುತ್ತಿವೆ ನೂರಾರು ಕರೆಗಳು!

02/08/2025 10:18 AM

ಭಾರತೀಯ ತೈಲ ಕಂಪನಿಗಳು ರಷ್ಯಾದ ಆಮದನ್ನು ನಿಲ್ಲಿಸಿರುವ ಬಗ್ಗೆ ಯಾವುದೇ ವರದಿಗಳಿಲ್ಲ: ಮೂಲಗಳು

02/08/2025 10:14 AM

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ: ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ

02/08/2025 10:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಲ್ಲಿದೆ ಇವತ್ತಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವಲ್ಲಿ ನಡೆದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting
KARNATAKA

ಇಲ್ಲಿದೆ ಇವತ್ತಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವಲ್ಲಿ ನಡೆದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

By kannadanewsnow0904/07/2024 6:50 PM

ಬೆಂಗಳೂರು: ದಿನಾಂಕ 4-07-2024 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ನಡೆಸಿದ ಪತ್ರಿಕಾ ಗೋಷ್ಠಿಯ ಮುಖ್ಯಾಂಶಗಳನ್ನು ಮುಂದೆ ಓದಿ.

1.ಡಾ. ಜಸ್ಟೀಸ್ ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಹಾಗೂ ಹಾಲಿ ವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶ ಸಂಖ್ಯೆ: ಹಿಂವಕ 114 ಬಿಸಿಎ 2022 (ಭಾ-1) ದಿನಾಂಕ: 04.11.2023 ರಲ್ಲಿ ಜಾರಿಗೊಳಿಸಿರುವ 03 ಶಿಫಾರಸ್ಸುಗಳ ಪೈಕಿ “To bring all urban and Local Bodies Election wing under the control of DPAR” ಎಂಬ ಶಿಫಾರಸ್ಸನ್ನು ಕೈಬಿಡುವುದು. ಹಾಗೂ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಚುನಾವಣಾ ಘಟಕಗಳನ್ನು ಆಯಾ ಇಲಾಖೆಗಳ ನಿಯಂತ್ರಣದಲ್ಲಿ ಉಳಿಸಿ, ಪ್ರಸ್ತುತ ಚಾಲ್ತಿಯಲ್ಲಿರುವ ವ್ಯವಸ್ಥೆಯನ್ನು ಮುಂದುವರೆಸಲು ಸಚಿವ ಸಂಪುಟ ನಿರ್ಣಯಿಸಿದೆ.

2.ಕೆ.ಜಿ.ಐ.ಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018-20 ದ್ವೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus) ಘೋಷಣೆ ಮಾಡಲು ಪ್ರಸ್ತಾಪಿಸಲಾಗಿದ್ದು, ದಿನಾಂಕ: 01.04.2018 ರಿಂದ 31.03.2020ರ ದ್ವೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಲಾಭಾಂಶ (ಬೋನಸ್) ಘೋಷಿಸಲು; ಮತ್ತು ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ದಿನಾಂಕ: 01.04.2020 ರಿಂದ 31.03.2022 ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಮಧ್ಯಂತರ ಲಾಭಾಂಶವನ್ನು (ಇಂಟರೀಮ್ ಬೋನಸ್) ಘೋಷಿಸಲು ಸಚಿವ ಸಂಪುಟ ನಿರ್ಣಯಿಸಿದೆ.

3.5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ದಿನಾಂಕ: 28.02.2025 ರವರೆಗೆ ವಿಸ್ತರಿಸುವ ಸಂಬಂಧ ಆಯೋಗದ ಅವಧಿಯನ್ನು 28ನೇ ಫೆಬ್ರವರಿ 2025 ರವರೆಗೆ ವಿಸ್ತರಿಸುವ ಬಗ್ಗೆ ಹಾಗೂ ಡಿಸೆಂಬರ್ 2024ರ ಒಳಗೆ ಆಯೋಗವು ತನ್ನ ವರದಿಯನ್ನು ಸಲ್ಲಿಸುವಂತೆ ತಿಳಿಸುವ ಬಗ್ಗೆ ಸಚಿವ ಸಂಪುಟದ ಅನುಮೋದನೆ ನೀಡಿದೆ.

4.563 ನಗರ ಆರೋಗ್ಯ ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್)ಗಳಿಗೆ ಪ್ರಯೋಗಾಲಯಗಳನ್ನು ಅಗತ್ಯವಿರುವ ಸಾಮಗ್ರಿಗಳನ್ನು ರೂ.2964.20 ಲಕ್ಷಗಳು ಹಾಗೂ ರೂ.2402.28 ಲಕ್ಷಗಳ ಔಷಧಿಗಳು ಒಟ್ಟು ರೂ.53.66 ಕೋಟಿಗಳ 15ನೇ ಹಣಕಾಸು ಆಯೋಗದ ಅನುದಾನದಲ್ಲಿ ಭರಿಸಿ ಕೆಟಿಪಿಪಿ ಕಾಯ್ದೆ ಹಾಗೂ ನಿಯಮಗಳನ್ನು ಅನುಸರಿಸಿ ಏSಒSಅಐ ಮುಖಾಂತರ ಖರೀದಿಸಿ ಸರಬರಾಜು ಮಾಡಲು ಸಚಿವ ಸಂಪುಟ ಒಪ್ಪಿದೆ.

5.2024-25ನೇ ಸಾಲಿನ ಆಯವ್ಯಯ ಕಂಡಿಕೆ 114ರ ಘೋಷಣೆಯನ್ವಯ 100 ಹಾಸಿಗೆಗಳ ಸಾಮಥ್ರ್ಯದ 07 ತಾಲ್ಲೂಕು ಆಸ್ಪತ್ರೆಗಳ (ಆನೇಕಲ್, ಹೊಸಕೋಟೆ, ಖಾನಾಪುರ, ನೆಲಮಂಗಲ, ಶಿರಹಟ್ಟಿ, ಶೃಂಗೇರಿ, ಯಳಂದೂರು ತಾಲ್ಲೂಕುಗಳು) ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ರೂ.256.15 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಆಸ್ಪತ್ರೆಗಳ ಕಟ್ಟಡ ಕಾಮಗಾರಿಗಳಿಗೆ ತಗಲುವ ವೆಚ್ಚವನ್ನು ರಾಜ್ಯವಲಯದ ಲೆಕ್ಕ ಶೀರ್ಷಿಕೆ: 4210-01-110-1-19-436ರ ನಬಾರ್ಡ್ ಯೋಜನೆಯಡಿ ಭರಿಸಲು ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

6.ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನದಲ್ಲಿ ಕಟ್ಟಡ ನಿರ್ಮಾಣ ಮಾಡಲಾದ 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಹಾಗೂ ವಿವಿಧ ವೃಂದದ ಒಟ್ಟು 158 ಹುದ್ದೆಗಳನ್ನು ಸೃಜಿಸಲು; ಹೆಚ್ಚುವರಿ 217 ಹುದ್ದೆಗಳನ್ನು ಕಡಿಮೆ ಒತ್ತಡ ಇರುವ ಸ್ಥಳಗಳಿಂದ ಅವಶ್ಯವಿರುವ ಕೇಂದ್ರಗಳಿಗೆ ಸ್ಥಳಾಂತರಿಸಲು ಸಚಿವ ಸಂಪುಟ ನಿರ್ಣಯಿಸಿದೆ.

7.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಸ್ತುತ ಇರುವ ಕಟ್ಟಡದ ಉನ್ನತೀಕರಣ ಹಾಗೂ ಹೆಚ್ಚುವರಿ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ರೂ.30.00 ಕೋಟಿ ಅಂದಾಜು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

8.ಕೊಪ್ಪಳ ಜಿಲ್ಲೆ ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಎರಡನೇ ಹಂತದ/ಹೆಚ್ಚುವರಿ ಕಾಮಗಾರಿಗಳ ಪರಿಷ್ಕøತ ಮೊತ್ತ ರೂ.59.32 ಕೋಟಿಗಳ ಅಂದಾಜಿಗೆ ಅನುಮೋದನೆ ನೀಡಲು; ಸದರಿ ಕಾಮಗಾರಿಗೆ ಬಿಡುಗಡೆ ಗೊಳಿಸಬೇಕಾಗಿರುವ ರೂ.1.83 ಕೋಟಿಗಳನ್ನು 2024-25ನೇ ಸಾಲಿನ ಆಯವ್ಯಯ ಲೆಕ್ಕ ಶೀರ್ಷಿಕೆ: 4202-02-104-1-03-386 ರಡಿ ಹಂಚಿಕೆಯಾಗಿರುವ ಅನುದಾನದಲ್ಲಿ ಬಿಡುಗಡೆಗೊಳಿಸಲು ಸಚಿವ ಸಂಪುಟ ನಿರ್ಣಯಿಸಿದೆ.

9.ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ “ಕಾನೂನು ಮತ್ತು ನೀತಿ-2023” ಪ್ರಸ್ತಾವನೆಗೆ ಕರ್ನಾಟಕ ಸರ್ಕಾರದ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಅನುಸೂಚಿ-1ರ ಅಂಶ 28ರನ್ವಯ ಸಚಿವ ಸಂಪುಟ ಅನುಮೋದನೆ ನೀಡಿದೆ.

10.ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಧಾರ್ಮಿಕ ಮತ್ತು ಇನ್ನಿತರೆ ಕಾರ್ಯ ಚಟುವಟಿಕೆಗಳನ್ನು ಮುಂದುವರೆಸುವ ದೃಷ್ಟಿಯಿಂದ ಮುಖ್ಯಮಂತ್ರಿಯವರು ನಿರ್ದೇಶಿಸಿರುವಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮಾವಿನಕೆರೆ ಗ್ರಾಮದ ಸ.ನಂ.434 ರಲ್ಲಿ 20 ಗುಂಟೆ “ಗೋಮಾಳ” ಜಮೀನನ್ನು “ಗೋಮಾಳ” ಶೀರ್ಷಿಕೆಯಿಂದ ತಗ್ಗಿಸಿ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಸಮುದಾಯ ಭವನ ನಿರ್ಮಾಣಕ್ಕಾಗಿ ಪ್ರಸ್ತಾಪಿತ ಜಮೀನಿನ ಕೃಷಿಯೇತರ ಮಾರುಕಟ್ಟೆ ಮೌಲ್ಯದ ಶೇ.100 ರಷ್ಟು ಮತ್ತು ಇನ್ನಿತರೆ ಶಾಸನಬದ್ದ ಶುಲ್ಕಗಳನ್ನು ಮತ್ತು ಜಮೀನಿನ ಅನಧೀಕೃತ ಅಧಿಬೋಗಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ರಂತೆ ದಂಡವನ್ನು ವಿಧಿಸಿ, ಮಂಜೂರು ಮಾಡಲು ಮತ್ತು ಮಾರ್ಗದರ್ಶಿ ಮೌಲ್ಯದ ಶೇ.10 ರಷ್ಟು ವಾರ್ಷಿಕ ಮೌಲ್ಯ ಆಕರಿಸಲು ಸಚಿವ ಸಂಪುಟ ನಿರ್ಧರಿಸಿದೆ.

11.ಕೋವಿಡ್-19 ಕಾರಣದಿಂದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 20(1)(ಸಿ) ಅನ್ನು ಸಡಿಲಿಸಿ, ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ಹೇರೂರು ಗ್ರಾಮದ ಸ.ನಂ. 105 ರಲ್ಲಿ 5-00 ಎಕರೆ ಜಮೀನನ್ನು ಗುಬ್ಬಿ ತಾಲ್ಲೂಕಿನಲಿ ಬಸ್ ಘಟಕ ನಿರ್ಮಾಣಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಉಚಿತವಾಗಿ ಮಂಜೂರು ಮಾಡಲು ಸಚಿವ ಸಂಪುಟ ಅನುಮೋದಿಸಿದೆ.

12.ಕೋವಿಡ್-19 ಕಾರಣದಿಂದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ರ ನಿಯಮ 27ರಲ್ಲಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 20(1)(ಸಿ) ಅನ್ನು ಸಡಿಲಿಸಿ, ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ಹೇರೂರು ಗ್ರಾಮದ ಸ.ನಂ. 105 ರಲ್ಲಿ 5-00 ಎಕರೆ ಜಮೀನನ್ನು ಗುಬ್ಬಿ ತಾಲ್ಲೂಕಿನಲಿ ಬಸ್ ಘಟಕ ನಿರ್ಮಾಣಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಉಚಿತವಾಗಿ ಮಂಜೂರು ಮಾಡುವುದು; ಸಚಿವ ಸಂಪುಟ ಅನುಮೋದಿಸಿದೆ.

13.ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಬೆಂಬಲಿಸುವ ದೃಷ್ಟಿಯಿಂದ ಮುಖ್ಯಮಂತ್ರಿಯವರು ನಿರ್ದೇಶಿಸಿರುವಂತೆ ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ರ ನಿಯಮ 27 ರನ್ವಯ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ವೇಣೂರು ಗ್ರಾಮದ ಸ.ನಂ. 59/1 ರಲ್ಲಿ 0.14 ಎಕರೆ (14 ಸೆಂಟ್) ಜಮೀನನ್ನು ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969 ನಿಯಮ 22ಎ(1)(1)(4) ರಂತೆ ಪ್ರಸ್ತಾಪಿತ ಜಮೀನಿನ ಕೃಷಿಯೇತರ ಮಾರ್ಗಸೂಚಿ ಮೌಲ್ಯ ಹಾಗೂ ಇನ್ನಿತರ ಶಾಸನಬದ್ಧ ಶುಲ್ಕವನ್ನು ವಿಧಿಸಿ, ಬ್ರಹ್ಮಶ್ರೀ ಗುರುನಾರಾಯನ ಸ್ವಾಮಿ ಸೇವಾ ಸಂಘಕ್ಕೆ ಮಂಜೂರು ಮಾಡಲು; ಮತ್ತು ಮಾರ್ಗದರ್ಶಿ ಮೌಲ್ಯದ ಶೇ.10 ರಷ್ಟು ವಾರ್ಷಿಕ ಮೌಲ್ಯ ಆಕರಿಸಲು ನಿರ್ಧರಿಸಿದೆ.

14.ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ, ಬೆಂಗಳೂರು ಇವರಿಗೆ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿ ನೀಡಿರುವ 120*150 ಅಡಿ ನಿವೇಶನದ ಗುತ್ತಿಗೆ ಅವಧಿಯನ್ನು 30 ವರ್ಷಗಳ ಗುತ್ತಿಗೆ ಅವಧಿಯನ್ನು ದಿನಾಂಕ: 30.07.2023 ರಿಂದ ಪೂರ್ವಾನ್ವಯವಾಗುವಂತೆ ಮುಂದಿನ 30 ವರ್ಷಗಳಿಗೆ ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ರ ನಿಯಮ 22ರ (1)(1)(6) ರನ್ವಯ ಸದರಿ ಜಮೀನಿನ ಕೃಷಿಯೇತರ ಮಾರ್ಗಸೂಚಿ ಮೌಲ್ಯದ ಶೇ.2.50 ರಷ್ಟು ವಾರ್ಷಿಕ ಗುತ್ತಿಗೆ ಮೊತ್ತ ಮತ್ತು ಇನ್ನಿತರೆ ಶಾಸನಬದ್ಧ ಶುಲ್ಕವನ್ನು ವಿಧಿಸಿ, ಈ ಗುತ್ತಿಗೆ ಮೊತ್ತವನ್ನು ಎರಡು ವರ್ಷಗಳಿಗೊಮ್ಮೆ ಶೇ.10 ರಷ್ಟು ಹೆಚ್ಚಿಸುವ ಷರತ್ತಿಗೊಳಪಟ್ಟು ಮುಂದುವರೆಸಲು ಹಾಗೂ ವಾರ್ಷಿಕ ರೂ.10,000/- ಗಳಂತೆ ಗುತ್ತಿಗೆ ಬಾಡಿಗೆಯನ್ನು ಹೆಚ್ಚಿಸಲು ಸಚಿವ ಸಂಪುಟ ಒಪ್ಪಿದೆ.

15.ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಮತ್ತು (ಗ್ರೇಡ್-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024 ಕರಡು ನಿಯಮಗಳನ್ನು ಪ್ರಕಟಿಸಿ ಬಾಧಿತರಾಗುವವರಿಂದ ಆಕ್ಷೇಪಣೆ / ಸಲಹೆಗಳನ್ನು ಆಹ್ವಾನಿಸಲು; ಹಾಗೂ ಕೌನ್ಸಲಿಂಗ್ ಮೂಲಕ ವರ್ಗಾವಣೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

16.ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 840 ಬಿ.ಎಸ್-6 ಡೀಸೆಲ್ ಬಸ್ಸುಗಳನ್ನು ಒಟ್ಟು ರೂ.363.82 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಸರಬರಾಜಾಗಿರುವ 20 ಬಸ್ಸುಗಳಿಗೆ ಪ್ರತಿ ಬಸ್‍ಗೆ ರೂ.41.72 ಲಕ್ಷಗಳಂತೆ ಒಟ್ಟು ರೂ.835.00 ಲಕ್ಷಗಳ ಪರಿಷ್ಕøತ ವೆಚ್ಚವನ್ನು ಭರಿಸಲು; 820 ಬಸ್ಸುಗಳನ್ನು ಪ್ರತಿ ಬಸ್‍ಗೆ ರೂ.43.35 ಲಕ್ಷಗಳಂತೆ ಒಟ್ಟು ರೂ.355.47 ಕೋಟಿಗಳ ವೆಚ್ಚದಲ್ಲಿ ಖರೀದಿಸಲು; ಸಚಿವ ಸಂಪುಟ ನಿರ್ಣಯಿಸಿದೆ.

ಇಂದಿರಾ ಕಿಚನ್-ಕಮ್- ಕ್ಯಾಂಟೀನ್‍ಗಳಿಗೆ ಹೊಸ ಮೆನುವಿನಂತೆ ಅಡುಗೆ ಉಪಕರಣ ಹಾಗೂ ಪೀಠೋಪಕರಣಗಳನ್ನು ಒಟ್ಟು ರೂ.84.58 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ.

18.ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆ ಹಂತ-2ನ್ನು ರಾಜ್ಯದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮೊತ್ತ ರೂ.2000.00 ಕೋಟಿಗಳ ಯೋಜನಾ ಅಂದಾಜಿನಲ್ಲಿ ರಾಜ್ಯ ಸರ್ಕಾರದ ಪಾಲಿನ ಶೇ.7.5 ರಷ್ಟು ಮೊತ್ತ ರೂ.150.00 ಕೋಟಿಗಳು, ಮಹಾನಗರ ಪಾಲಿಕೆಯ ಸ್ವಂತ ಸಂಪನ್ಮೂಲದಿಂದ ಶೇ. 7.5 ರಷ್ಟು ಮೊತ್ತ ರೂ.150.00 ಕೋಟಿಗಳು ಹಾಗೂ ಯುಐಡಿಎಫ್ ನಿಂದ ಸಾಲದ ರೂಪದಲ್ಲಿ ಶೇ.85 ರಷ್ಟು ಮೊತ್ತ ರೂ.1700.00 ಕೋಟಿಗಳಲ್ಲಿ 2024-25ನೇ ಸಾಲಿನಿಂದ 2026-27ನೇ ಸಾಲಿನವರೆಗೆ ಮೂರು ವರ್ಷಗಳ ಅವಧಿಯಲ್ಲಿ ಪೌರಾಡಳಿತ ನಿರ್ದೇಶನಾಲಯದಿಂದ ರಾಜ್ಯ ಮಟ್ಟದಲ್ಲಿ ಟೆಂಡರ್ ಕರೆದು ಅನುಷ್ಠಾನಗೊಳಿಸಲು; ಸಚಿವ ಸಂಪುಟ ಅನುಮೋದಿಸಿದೆ.

19.ರೈತರ ಸಹಕಾರಿ ಸಕ್ಕರೆ ಕಾರ್ಖಾನೆ, ರನ್ನನಗರ, ಮುಧೋಳ ತಾಲ್ಲೂಕು, ಬಾಗಲಕೋಟೆ ಜಿಲ್ಲೆ ಈ ಕಾರ್ಖಾನೆಯನ್ನು 2024-25ನೇ ಹಂಗಾಮಿನಿಂದ 30 ವರ್ಷಗಳ ಅವಧಿಗೆ ((Lease Rehabilitate Operate Transfer) LROT) ಆಧಾರದ ಮೇಲೆ ಇದ್ದಲ್ಲಿ ಇದ್ದಂತೆಯೇ (As is where is basis) ಖಾಸಗಿಯವರಿಗೆ ಗುತ್ತಿಗೆ ನೀಡಲು ಸಚಿವ ಸಂಪುಟ ಅನುಮೋದಿಸಿದೆ.

20.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಂಭವಿಸಿದ ಅಗ್ನಿ ಅವಗಡದಲ್ಲಿ ನಿಧನರಾದ ಶ್ರೀ ಸಿ.ಎಂ ಶಿವಕುಮಾರ್, ಅಧೀಕ್ಷಕ ಅಭಿಯಂತರರು ಹಾಗೂ ಪ್ರಭಾರ ಮುಖ್ಯ ಅಭಿಯಂತರರು ಇವರಿಗೆ ರೂ.50.00 ಲಕ್ಷಗಳ ಪರಿಹಾರ ಹಾಗೂ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ಮತ್ತು ತೀವ್ರ ಗಾಯಗೊಂಡ ಉಳಿದವರಿಗೆ ಪರಿಹಾರ ಧನವನ್ನು ಇಲಾಖಾ ಸಚಿವರ ಅನುಮೋದನೆಯೊಂದಿಗೆ ನಿರ್ಧರಿಸಿ, ಸರ್ಕಾರಿ ಉದ್ಯೋಗವನ್ನು ನೀಡಲು ಸಚಿವ ಸಂಪುಟ ಅನುಮೋದಿಸಿದೆ.

‘ಆರ್ಯ ವೈಶ್ಯ ಸಮುದಾಯ’ದವರಿಗೆ ಸಿಹಿಸುದ್ದಿ: ನಿಗಮದ ‘ವಾರ್ಷಿಕ ಕ್ರಿಯಾ ಯೋಜನೆ’ಗೆ ರಾಜ್ಯ ಸರ್ಕಾರ ಅನುಮೋದನೆ

BIG NEWS: ಕಾವೇರಿ ನದಿಗೆ ಕಲುಷಿತ ನೀರು: ಅಧ್ಯಯನಕ್ಕೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ : ‘SIT’ ಆರಂಭಿಸಿದ ಸಹಾಯವಣಿಗೆ ಬರುತ್ತಿವೆ ನೂರಾರು ಕರೆಗಳು!

02/08/2025 10:18 AM1 Min Read

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ: ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ

02/08/2025 10:10 AM1 Min Read

BIG NEWS : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಅಸ್ತಿಪಂಜರ ಪತ್ತೆಯಾದ ಬಳಿಕ ತನಿಖೆ ಚುರುಕು ಗೊಳಿಸಿದ ‘SIT’

02/08/2025 10:08 AM1 Min Read
Recent News

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ : ‘SIT’ ಆರಂಭಿಸಿದ ಸಹಾಯವಣಿಗೆ ಬರುತ್ತಿವೆ ನೂರಾರು ಕರೆಗಳು!

02/08/2025 10:18 AM

ಭಾರತೀಯ ತೈಲ ಕಂಪನಿಗಳು ರಷ್ಯಾದ ಆಮದನ್ನು ನಿಲ್ಲಿಸಿರುವ ಬಗ್ಗೆ ಯಾವುದೇ ವರದಿಗಳಿಲ್ಲ: ಮೂಲಗಳು

02/08/2025 10:14 AM

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ: ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ

02/08/2025 10:10 AM

BIG NEWS : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಅಸ್ತಿಪಂಜರ ಪತ್ತೆಯಾದ ಬಳಿಕ ತನಿಖೆ ಚುರುಕು ಗೊಳಿಸಿದ ‘SIT’

02/08/2025 10:08 AM
State News
KARNATAKA

BREAKING : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ : ‘SIT’ ಆರಂಭಿಸಿದ ಸಹಾಯವಣಿಗೆ ಬರುತ್ತಿವೆ ನೂರಾರು ಕರೆಗಳು!

By kannadanewsnow0502/08/2025 10:18 AM KARNATAKA 1 Min Read

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಭೌತಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅನಾಮಿಕ…

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಇಲ್ಲ: ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ

02/08/2025 10:10 AM

BIG NEWS : ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಅಸ್ತಿಪಂಜರ ಪತ್ತೆಯಾದ ಬಳಿಕ ತನಿಖೆ ಚುರುಕು ಗೊಳಿಸಿದ ‘SIT’

02/08/2025 10:08 AM

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ವಿಷ ಸೇವಿಸಿ ಹೋಟೆಲ್ ಮಾಲೀಕ ಸೂಸೈಡ್

02/08/2025 10:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.