Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಜೂನ್ 12ರಂದು `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

23/05/2025 5:33 AM

GOOD NEWS : `PhonePe, Google Pay’ ಬಳಕೆದಾರರಿಗೆ  ಗುಡ್ ನ್ಯೂಸ್ : ಇನ್ಮುಂದೆ ಈ ಸಮಸ್ಯೆಗೆ ಸಿಗಲಿದೆ ಶಾಶ್ವತ ಪರಿಹಾರ.!

23/05/2025 5:20 AM

BIG NEWS : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ `ಲೈಂಗಿಕ ಕಿರುಕುಳ’ ತಡೆಗೆ ದೂರು ನಿರ್ವಹಣಾ ಸಮಿತಿ ಪುನರ್ ರಚನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

23/05/2025 5:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಲ್ಲಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting
KARNATAKA

ಇಲ್ಲಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

By kannadanewsnow0902/01/2025 8:08 PM

ಬೆಂಗಳೂರು : ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮಗಳ ಪ್ರಯಾಣದರ ಶೇ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ದರವು ಜನವರಿ 5 ರಿಂದ ಜಾರಿಗೆ ಬರಲಿದೆ.

ಸಚಿವ ಸಂಪುಟದ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್ ಅವರು ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದರು.

ಪ್ರತಿ ಲೀಟರ್ ಡೀಸೆಲ್ ಗೆ 10-1-2015ರಲ್ಲಿ ಬಿಎಂಟಿಸಿ ಗೆ ಹತ್ತು ವರ್ಷಗಳ ಹಿಂದೆ ದರ ಪರಿಷ್ಕರಣೆ ಆಗಿತ್ತು. ಅಂದು ರೂ60.98 ಪೈಸೆ ಇತ್ತು. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಅಂದಿನ ಡೀಸೆಲ್ ವೆಚ್ಚ 9 ಕೋಟಿ 16ಲಕ್ಷ ಇದ್ದ್ದು ಈಗ ಪ್ರಸ್ತುತ 13.21ಕೋಟಿ ಹೆಚ್ಚಳ ಆಗಿದೆ.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಂದ ಸಿಬ್ಬಂದಿ ವೆಚ್ಚ 12.85ಕೋಟಿ ಇದ್ದದ್ದು ಪ್ರಸ್ತುತ 18.36 ಕೋಟಿ ಆಗಿದೆ ಪ್ರತಿ ದಿನ 9.56ಕೋಟಿ ಹೆಚ್ಚುವರಿ ಹೊರೆ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಆಗಿದೆ.

ಎಲ್ಲಾ ಕಾರ್ಪೋರೇಷನ್ ಗಳು, ನಗರ ಬಸ್ಸುಗಳು, ಐಷಾರಾಮಿ ಬಸ್ಸುಗಳು ಸೇರಿದಂತೆ ಎಲ್ಲರಿಗೂ ಶೇ 15% ಪರಿಷ್ಕರಿಸಲಾಗಿದೆ. ಇದರಿಂದ ಪ್ರತಿ ತಿಂಗಳು 74.85 ಕೋಟಿಗಳಷ್ಟು ಆದಾಯ ಹೆಚ್ಚಾಗಲಿದೆ. ಶಕ್ತಿ ಯೋಜನೆಗಾಗಿ ಪ್ರಸ್ತುತ ಆರ್ಥಿಕ ವರ್ಷದಲ್ಲಿ 5015 ಕೋಟಿಗಳನ್ನು ಮೀಸಲಿರಿಸಿದೆ. ಪ್ರತಿ ತಿಂಗಳು ನಾಲ್ಕೂ ನಿಗಮಗಳಿಗೆ 417.92 ಕೋಟಿ ಗಳ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗುವುದಿಲ್ಲ. ಕರ್ನಾಟಕ ಅತ್ಯುತ್ತಮ ಆರ್ಥಿಕ ಹೊಣೆಗಾರಿಕೆಯನ್ನು ಅನುಷ್ಠಾನ ಮಾಡಿರುವ ರಾಜ್ಯ ಎಂದು ಸಚಿವರು ತಿಳಿಸಿದರು.

ಬಜೆಟ್ ಮಂಡನೆ ದಿನಾಂಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸಲಿದ್ದಾರೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಮಾಧ್ಯಮದವರಿಗೆ ತಿಳಿಸಿದರು.

ದೀರ್ಘಾವಧಿ ಸಾಲ 137.85 ಕೋಟಿಗಳ ಅನುದಾನವನ್ನು ವಿನಿಯೋಗಿಸಲು ಆಡಳಿತಾತ್ಮಕ ಅನುಮೋದನೆ

ಭಾರತ ಸರ್ಕಾರದ ಆರ್ಥಿಕ ಸಚಿವಾಲಯವು ವಿಶೇಷ ಬಂಡವಾಳ ನೆರವಿನ ಯೋಜನೆಯ ಭಾಗ 7 (ಎ) ಅಡಿ ಕರ್ನಾಟಕದ ರಾಜ್ಯಕ್ಕೆ ಬಂಡವಾಳ ವೆಚ್ಚಕ್ಕಾಗಿ ದೀರ್ಘಾವಧಿ ಸಾಲದ ರೂಪದಲ್ಲಿ ನೀಡಿರುವ 137.85 ಕೋಟಿಗಳ ಅನುದಾನವನ್ನು ವಿನಿಯೋಗಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಸಾಮರ್ಥ್ಯ ಹಾಗೂ ವಿಶ್ವಾಸಾರ್ಹತೆಯ ಹಿನ್ನೆಲೆಯಲ್ಲಿ ಸಾಲವನ್ನು ಪಡೆಯಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು. ಜನಕಲ್ಯಾಣದ ಜೊತೆಗೆ ಅಭಿವೃದ್ದಿ ಗಮನದಲ್ಲಿದೆ ಹಾಗೂ ಹೊರೆಯನ್ನು ಸರಿದೂಗಿಸುವ ವ್ಯವಹಾರಿಕತೆಯ ಹಿನ್ನೆಲೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು.

ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆಯವರು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಸಮಾಪನಗೊಳಿಸುವ ಬಗ್ಗೆ ರಾಜ್ಯ ಸಚಿವ ಸಂಪುಟ ಎಂದು ನಿರ್ಣಯ ತೆಗೆದುಕೊಂಡಿದೆ.

ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ 2022-23 23ನೇ ಸಾಲಿನ ಎಸ್ ಸಿ ಪಿ, ಟಿ ಎಸ್ ಪಿ ಯೋಜನೆಗಳ ಇದ್ದಂತಹ 56ಕೋಟಿ 92ಲಕ್ಷ ರೂಪಾಯಿಗಳ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ವಸತಿ ಶಾಲೆಗಳ ಹಾಗೂ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಬೆಡ್ ಶೀಟ್ ಸೊಳ್ಳೆ ಪರದೆಗಳು ಟ್ರ್ಯಾಕ್ ಸೂಟ್ ಮತ್ತು ನೈಟ್ ಡ್ರೆಸ್ ಗಳ ಸಾಮಗ್ರಿಗಳನ್ನು ಪೂರೈಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ಆಯವ್ಯಯದಲ್ಲಿ ಘೋಷಣೆಯಾಗಿರುವಂತೆ ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿ ಇರುವಂತಹ ಕಟ್ಟಡಗಳ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುವಂತಹ 200 ಪಶು ವೈದ್ಯ ಸಂಸ್ಥೆಗಳಿಗೆ ಒಂದು ನೂರು ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಬಾರ್ಡ್ ಸಹಾಯ ಅನುದಾನದೊಂದಿಗೆ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಕಾನೂನು ಮಾಪನ ಶಾಸನ ಇಲಾಖೆ 2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಲ್ಲಿ ರಾಜ್ಯದ ರೈತರಿಂದ ಭತ್ತ ಮತ್ತು ಬಿಳಿ ಜೋಳ ಖರೀದಿಸಲು ಅವಶ್ಯವಿರುವಂತಹ 580 ಗ್ರಾಂ ತೂಕದ 15 ಲಕ್ಷ ಸೆಣಬಿನ ಗೋಣಿ ಚೀಲಗಳನ್ನು 10 ಕೋಟಿ 88ಲಕ್ಷ ಗಳ ಅಂದಾಜು ವೆಚ್ಚದಲ್ಲಿ ಆವರ್ತಕನಿಧಿ ಅಡಿಯಲ್ಲಿ ರಾಗಿಯನ್ನು ಖರೀದಿಸಲು ಅವಶ್ಯವಿರುವಂತಹ 775 ಗ್ರಾಂ ತೂಕದ 74.82 ಲಕ್ಷ ಸೆಣಬಿನ ಗೋಣಿ ಚೀಲಗಳನ್ನು ಜೆಮ್ ಪೋರ್ಟಲ್ ಮೂಲಕ ಖರೀದಿಸಲು ಅನುಮೋದನೆ.

ಸಾರಿಗೆ ಇಲಾಖೆಯವರು ಮೈಸೂರಿನ ಬನ್ನಿ ಮಂಟಪದಲ್ಲಿ ಆಧುನಿಕ ಬಸ್ ನಿಲ್ದಾಣವನ್ನು 120 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಮಂಜೂರಾತಿ

ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಸಚಿವ ಸಂಪುಟ ನಿರ್ಧರಿಸಿದೆ. ಕರ್ನಾಟಕ ಸಾಂಸ್ಕೃತಿ ಕೇಂದ್ರವಾಗಿದೆ. ಮೂರು ಜ್ಞಾನಪೀಠ ಪ್ರಶಸ್ತಿಯವರ ಊರು ಧಾರವಾಡ ವಿದ್ಯಾಕಾಶಿ ಎಂದು ಪ್ರಖ್ಯಾತಿ ಗಳಿಸಿದೆ.

ಬಂದರು ನಿರ್ಮಾಣಕ್ಕೆ ಅನುಮೋದನೆ

ಕೇಂದ್ರ ಪುರಸ್ಕೃತ ಯೋಜನೆಯಡಿ ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯಲ್ಲಿನ ಮೀನುಗಾರಿಕೆ ಬಂದರು ನಿರ್ಮಾಣ ಕಾಮಗಾರಿಯ 209.13 ಕೋಟಿ ರೂ.ಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.ಕೇಂದ್ರ ಪುರಸ್ಕೃತ ಯೋಜನೆಯಡಿ ಹಾಲಿ ಇರುವ ಮೀನುಗಾರಿಕೆ ಬಂದರುಗಳ ಆಧುನೀಕರಣ ಹಾಗೂಮೀನುಗಾರಿಕೆ ಬಂದರು ಮತ್ತು ಇಳಿದಾಣ ಕೇಂದ್ರಗಳಲ್ಲಿ ನಿರ್ವಹಣಾ ಹೂಳೆತ್ತುವಿಕೆ ಯ ಕಾಮಗಾರಿಗಳ 84.57 ಕೋಟಿ ರೂ.ಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಕೆಐಡಿಬಿ ಸಾಲದ ಮಿತಿ 5000 ಕೋಟಿ ರೂ. ಹೆಚ್ಚಳ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಹಣಕಾಸು ಸಂಸ್ಥೆಗಳಿಂದ ಪಡೆಯುವ ಸಾಲದ ಮಿತಿ ಪ್ರಸ್ತುತ ರೂ. 500 ಕೋಟಿ ಗಳಿದ್ದು, ಅದನ್ನು ರೂ. 5000 ಕೋಟಿಗಳಿಗೆ ಹೆಚ್ಚಿಸಲು ಅನುಮೋದನೆ ನೀಡಲಾಗಿದೆ.

ಚಿಂತಾಮಣಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕಾಮಗಾರಿ

ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕಿನ ವಡಗನಹಳ್ಳಿ ಗ್ರಾಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜಿನ ಕಟ್ಟಡ ಕಾಮಗಾರಿಗಳನ್ನು 149.75 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ವಿದ್ಯಾರ್ಥಿ ನಿಲಯಕ್ಕೆ ರಿಯಾಯಿತಿ ದರಲ್ಲಿ ನಿವೇಶನ

ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಾಯಕ ವಿದ್ಯಾರ್ಥಿ ನಿಲಯ, ದಾವಣಗೆರೆ ಇವರಿಗೆ 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ 523.99 ಚ.ಮೀ ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶವನ್ನು ರಿಯಾಯಿತಿ ದರದಲ್ಲಿ ಮಂಜೂರು ಮಾಡಲಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ

BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: 10ನೇ ಕ್ಲಾಸ್ ವಿದ್ಯಾರ್ಥಿಗೆ ಸಹಪಾಠಿಗಳಿಂದ ಚಾಕು ಇರಿತ

BREAKING: ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್: ಸಾರಿಗೆ ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆಗೆ ಸಂಪುಟ ಅಸ್ತು | KSRTC Bus Ticket Price Hike

Share. Facebook Twitter LinkedIn WhatsApp Email

Related Posts

BIG NEWS : ಜೂನ್ 12ರಂದು `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

23/05/2025 5:33 AM1 Min Read

BIG NEWS : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ `ಲೈಂಗಿಕ ಕಿರುಕುಳ’ ತಡೆಗೆ ದೂರು ನಿರ್ವಹಣಾ ಸಮಿತಿ ಪುನರ್ ರಚನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

23/05/2025 5:18 AM1 Min Read

BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

23/05/2025 5:15 AM1 Min Read
Recent News

BIG NEWS : ಜೂನ್ 12ರಂದು `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

23/05/2025 5:33 AM

GOOD NEWS : `PhonePe, Google Pay’ ಬಳಕೆದಾರರಿಗೆ  ಗುಡ್ ನ್ಯೂಸ್ : ಇನ್ಮುಂದೆ ಈ ಸಮಸ್ಯೆಗೆ ಸಿಗಲಿದೆ ಶಾಶ್ವತ ಪರಿಹಾರ.!

23/05/2025 5:20 AM

BIG NEWS : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ `ಲೈಂಗಿಕ ಕಿರುಕುಳ’ ತಡೆಗೆ ದೂರು ನಿರ್ವಹಣಾ ಸಮಿತಿ ಪುನರ್ ರಚನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

23/05/2025 5:18 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

23/05/2025 5:15 AM
State News
KARNATAKA

BIG NEWS : ಜೂನ್ 12ರಂದು `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5723/05/2025 5:33 AM KARNATAKA 1 Min Read

ಬೆಂಗಳೂರು : ದಿನಾಂಕ:12/06/2025 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ದ ಆಯೋಜನೆಯ ಕುರಿತು ನಿರ್ದೇಶನ ಹಾಗೂ ಅನುದಾನ ಬಿಡುಗಡೆ…

BIG NEWS : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ `ಲೈಂಗಿಕ ಕಿರುಕುಳ’ ತಡೆಗೆ ದೂರು ನಿರ್ವಹಣಾ ಸಮಿತಿ ಪುನರ್ ರಚನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

23/05/2025 5:18 AM

BIG NEWS : ರಾಜ್ಯ ಸರ್ಕಾರಿ ನೌಕರರಿಗೆ`ವಿಶೇಷ ವೇತನ ಬಡ್ತಿ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

23/05/2025 5:15 AM

BIG NEWS : ರಾಜ್ಯದ ಶಾಲೆಗಳಲ್ಲಿ 2025-26 ನೇ ಸಾಲಿಗೆ `RTE’ ಅಡಿ 1-6 ನೇ ತರಗತಿಗೆ ಪ್ರವೇಶ ಪ್ರಕ್ರಿಯೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

23/05/2025 5:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.