Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ : ಬಾಲಕನಿಗೆ 20 ವರ್ಷ ಶಿಕ್ಷೆ ಪ್ರಕಟಿಸಿದ ಕೋರ್ಟ್

13/05/2025 9:03 PM

BREAKING: ಪಾಕ್ ಹೈಕಮಿಷನ್ ಅಧಿಕಾರಿಗೆ ‘ಪರ್ಸನಾ ನಾನ್ ಗ್ರಾಟಾ’ ಘೋಷಿಸಿದ ಭಾರತ: 24 ಗಂಟೆಗಳಲ್ಲಿ ದೇಶ ತೊರೆಯಲು ಆದೇಶ

13/05/2025 8:53 PM

BREAKING : ಹಾವೇರಿಯಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು!

13/05/2025 8:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting
KARNATAKA

ಹೀಗಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

By kannadanewsnow0930/01/2025 5:08 PM

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಗಳ ಕಿರುಕುಳಕ್ಕೆ ಬ್ರೇಕ್ ಹಾಕಲು ಸುಗ್ರೀವಾಜ್ಞೆ ಜಾರಿ ಮಸೂದೆಗೆ ಒಪ್ಪಿಗೆ ಸೇರಿದಂತೆ ಇತರೆ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಆ ಎಲ್ಲಾ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.

ಕೆ.ಪಿ.ಎಸ್.ಸಿ ನಿಯಮಗಳಿಗೆ ತಿದ್ದುಪಡಿ:

Karnataka Public Service Commission (Conditions of Service) (Amendment) Regulations, 2025ರ ಕರಡನ್ನು ಭಾರತ ಸಂವಿಧಾನದ ಅನುಚ್ಛೇದ 318 ರನ್ವಯ ಮಾನ್ಯ ರಾಜ್ಯಪಾಲರ ಅನುಮೋದನೆ ಪಡೆದು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿ ಆಕ್ಷೇಪಣೆ/ ಸಲಹೆಗಳನ್ನು ಆಹ್ವಾನಿಸಲು; ಹಾಗೂ ಸದರಿ ಕರಡು ವಿನಿಮಯಗಳಿಗೆ ಯಾವುದೇ ಆಕ್ಷೇಪಣೆ/ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡು, ಕರಡು ವಿನಿಯಮಗಳಲ್ಲಿ ಯಾವುದೇ ಪ್ರಮುಖ ತಿದ್ದುಪಡಿಗಳನ್ನು ಮಾಡುವ ಅವಶ್ಯಕತೆ ಇಲ್ಲದಿದ್ದಲ್ಲಿ ಸದರಿ ವಿನಿಯಮಗಳನ್ನು ಪುನ: ಸಚಿವ ಸಂಪುಟ ಮುಂದೆ ಮಂಡಿಸದೇ ಅಂತಿಮಗೊಳಿಸಲು; ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಕರ್ನಾಟಕ ಲೋಕಸೇವಾ ಆಯೋಗದ ಅಧಿಕಾರಿ/ಸಿಬ್ಬಂದಿಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗದ ಅಧಿಕಾರಿ/ಸಿಬ್ಬಂದಿಗಳ ಸೇವಾ ಷರತ್ತುಗಳು ಮತ್ತು ನೇಮಕಾತಿ ವಿಧಾನವನ್ನು ಬದಲಾಯಿಸಲು ಪ್ರಸ್ತಾಪಿಸಲಾಗಿತ್ತು.

ಕ್ರೀಡಾಪಟುಗಳ ಮೀಸಲಾತಿ ಹೆಚ್ಚಳ:

ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸಟೇಬಲ್‌ನಿಂದ ಡಿವೈಎಸ್ಪಿ ವರೆಗೆ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2 ರಿಂದ ಶೇ.3ಕ್ಕೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಈಗ ಈ ಮೀಸಲಾತಿ ಪ್ರಮಾಣ ಶೇ.2 ರಷ್ಟಿದ್ದು ಇದನ್ನು ಶೇ.3ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ. 2023ರಲ್ಲಿನ ಅನುಸೂಚಿಯ ಕ್ರಮ ಸಂಖ್ಯೆ (3) ರಲ್ಲಿ ಡಿ.ವೈ.ಎಸ್.ಪಿ ಹುದ್ದೆಯ ವಯೋಮಿತಿ ಕಾಲಂನಲ್ಲಿ ಎಸ್‌ಸಿ/ಎಸ್‌ಟಿ ಹಾಗೂ ಕೆಟಗರಿ-1 ರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ಹೆಚ್ಚಿಸಲು ನಿಯಮಗಳಿಗೆ ತಿದ್ದುಪಡಿ ತರಲಾಗುವುದು.

ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳು (ಪೊಲೀಸ್ ಕಾನ್ಸೆ÷್ಟÃಬಲ್, ಪೊಲೀಸ್ ಸಬ್-ಇನ್ಸೆ÷್ಪÃಕ್ಟರ್ ಮತ್ತು ಪೊಲೀಸ್ ಉಪಾಧೀಕ್ಷಕರ ಹುದ್ದೆಗೆ ಪ್ರತಿಭಾವಂತ ಕ್ರೀಡಾಪಡುಗಳ ನೇರ ನೇಮಕಾತಿ) (ವಿಶೇಷ) (ತಿದ್ದುಪಡಿ) ನಿಯಮಗಳು, 2025ರ ಕರಡು ನಿಯಮಗಳನ್ನು ರಾಜ್ಯ ಪತ್ರದಲ್ಲಿ ಪ್ರಕಟಿಸಿ, ಅದರಿಂದ ಬಾಧಿತರಾದವರಿಂದ ಆಕ್ಷೇಪಣೆ / ಸಲಹೆಗಳನ್ನು ಆಹ್ವಾನಿಸಲು; ಸದರಿ ನಿಯಮಗಳಿಗೆ ಯಾವುದೇ ಗಂಭೀರ ಸ್ವರೂಪದ ಆಕ್ಷೇಪಣೆ / ಸಲಹೆಗಳನ್ನು ಸ್ವೀಕೃತವಾಗದಿದ್ದಲ್ಲಿ ಅಥವಾ ಸ್ವೀಕೃತವಾದ ಆಕ್ಷೇಪಣೆ / ಸಲಹೆಗಳನ್ನು ಪರಿಗಣಿಸಿ ಕರಡು ನಿಯಮಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡದಿದ್ದಲ್ಲಿ ಪುನ: ಸಚಿವ ಸಂಪುಟದ ಮುಂದೆ ಮಂಡಿಸದೇ ಸದರಿ ಕರಡು ನಿಯಮಗಳನ್ನು ಅಂತಿಮಗೊಳಿಸಲು; ಸಚಿವ ಸಂಪುಟ ನಿರ್ಧರಿಸಿದೆ. ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳ ಮೀಸಲಾತಿಯ ಪ್ರಮಾಣವನ್ನು ಶೇ.3 ಕ್ಕೆ ಹೆಚ್ಚಿಸಲು ಘೋಷಿಸಲಾಗಿತ್ತು.

ಪಿಪಿಪಿ ಕಾರ್ಯನೀತಿಗೆ ಅನುಮೋದನೆ

ಕರ್ನಾಟಕ ಸರ್ಕಾರದ (ವ್ಯವಹಾರದ ವಹಿವಾಟು) ನಿಯಮಗಳು, 1977ರ ಮೊದಲ ಶೆಡ್ಯೂಲ್‌ನ ಐಟಂ ಸಂಖ್ಯೆ: 28ರ ಪ್ರಕಾರ, ಅನುಬಂಧ-1 ರಲ್ಲಿ ರಾಜ್ಯ ಮೂಲಸೌಕರ್ಯ ಯೋಜನೆಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಕಾರ್ಯನೀತಿ – 2025ಕ್ಕೆ ಸಚಿವ ಸಂಪುಟವು ಅನುಮೋದನೆ ನೀಡಿದೆ.

ಸುಸ್ಥಿರ ಅಭಿವೃದ್ಧಿಯೊಂದಿಗೆ ಹೆಚ್ಚಿನ ಬೆಳವಣಿಗೆ ಮತ್ತು ಸಮಾನತೆಯನ್ನು ಸಾಧಿಸುವ ಸಾಧನವಾಗಿ ಮೂಲಸೌಕರ್ಯದಲ್ಲಿ ಖಾಸಗಿ ಹೂಡಿಕೆಯನ್ನು ವಿಸ್ತರಿಸಿ, ಆಳಗೊಳಿಸುವುದು ಮತ್ತು ಅಭಿವೃದ್ಧಿಪಡಿಸುವುದು ಮತ್ತು ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಕರ್ನಾಟಕವನ್ನು ಮಾದರಿಯಾಗಿ ಸ್ಥಾಪಿಸುವುದಾಗಿದೆ.

ವಿವಿಧ ವಲಯಗಳ ಮೂಲಸೌಕರ್ಯ ಯೋಜನೆಗಳ ಅಭಿವೃದ್ಧಿಯಲ್ಲಿ ಖಾಸಗಿ ಹೂಡಿಕೆಗಳನ್ನು ಉತ್ತೇಜಿಸಲಾಗುತ್ತದೆ. ಪಿಪಿಪಿ ಕಾರ್ಯನೀತಿ 2018ರ ಪ್ಯಾರಾ (63) ಪ್ರತಿ ಮೂರು ವರ್ಷಗಳಿಗೊಮ್ಮೆ ಭಾಗಿದಾರರ ಪ್ರತಿಕ್ರಿಯೆಗಳ ನಿರ್ಣಾಯಕ ಮೌಲ್ಯಮಾಪನ ಆಧರಿಸಿ ಈ ಹಂತದಲ್ಲಿ ಅಗತ್ಯ ಮತ್ತು ಅಪೇಕ್ಷಣೀಯವೆಂದು ಪರಿಗಣಿಸಲಾದ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಅವಕಾಶ ನೀಡುವ ಮೂಲಕ ಮಧ್ಯಮಾವಧಿ ಪರಿಶೀಲನೆಗೆ ಶಿಫಾರಸ್ಸು ಮಾಡಲಾಗಿದೆ.

ಕಿರು ಬಂದರುಗಳಲ್ಲಿ ಶುಲ್ಕ ಪರಿಷ್ಕರಣೆ

ಲೋಕೋಪಯೋಗಿ ಮತ್ತು ಬಂದರು ಮತ್ತು ಒಳನಾಡು ಜಲಸಾರಿಗೆ ಅದಿಸೂಚನೆಯಂತೆ ರಾಜ್ಯದ ಕಿರು ಬಂದರುಗಳಲ್ಲಿ ಸಂಗ್ರಹಿಸುತ್ತಿರುವ ಬಂದರು ಶುಲ್ಕ ಪರಿಷ್ಕರಿಸಲಾಗಿತ್ತು. ರಾಜ್ಯದ ಕಿರು ಬಂದರುಗಳಲ್ಲಿ ಸಂಗ್ರಹಿಸುತ್ತಿರುವ Pilotage And Tug Services ಶುಲ್ಕಗಳನ್ನು ಪರಿಷ್ಕರಿಸಲು ಪ್ರಸ್ತಾಪಿಸಲಾಗಿತ್ತು.

ರಾಜ್ಯದ ಚಿಕ್ಕ ಬಂದರುಗಳಲ್ಲಿ ವಿಧಿಸಲಾಗುತ್ತಿರುವ ಬಂದರು ಶುಲ್ಕ, ಪೈಲಟೇಜ್ ಮತ್ತು ಟಗ್ ಬಾಡಿಗೆ ಶುಲ್ಕಗಳ ಪರಿಷ್ಕರಣೆ ಹಾಗೂ ಹಾರ್ಬರ್ ಕ್ರಾಫ್ಟ್ ಸರ್ವೆ ಮತ್ತು ನೋಂದಣಿ ಶುಲ್ಕ ಹಾಗೂ ಇನ್‌ಲ್ಯಾಂಡ್ ವೆಸೆಲ್ಸ್ ನಾವೆಗಳ ಸರ್ವೆ ಮತ್ತು ನೋಂದಣಿ ಶುಲ್ಕಗಳ ಪರಿಷ್ಕರಿಸಲು ಸಚಿವ ಸಂಪುಟ ನಿರ್ಧರಿಸಲಾಗಿದೆ.

ಕರ್ನಾಟಕ ಜಲಸಾರಿಗೆ ಮಂಡಳಿಯಿಂದ Inland Vessels ನಾವೆಗಳ ಪರವಾನಗಿ ಮತ್ತು ವಾರ್ಷಿಕ ಪರವಾನಗಿ ನವೀಕರಣ ಶುಲ್ಕಗಳನ್ನು ಪರಿಷ್ಕರಿಸಲು ಉದ್ದೇಸಿಸಲಾಗಿದೆ.

ಈ ಕ್ರಮದಿಂದ ವಾರ್ಷಿಕ ರೂ.3.50 ರಿಂದ 4.00 ರವರೆಗಿನ ಹೆಚ್ಚಿನ ಆದಾಯವನ್ನು ನಿರೀಕ್ಷಿಸಲಾಗಿದೆ. ರಾಜ್ಯದ ಸಣ್ಣ ಬಂದರುಗಳು – ಕಾರವಾರ, ಹೊನ್ನಾವರ, ಮಲ್ಪೆ, ಬೇಲೇಕೇರಿ, ಮಂಕಿ, ಪಡುಬಿದ್ರಿ, ಕೇಣಿ, ಭಟ್ಕಳ, ಹಳೇ ಮಂಗಳೂರು, ತದಡಿ, ಕುಂದಾಪುರ, ಪಾವಿನಕುರ್ವೆ ಮತ್ತು ಹಂಗಾರಕಟ್ಟಾ.

ರೈಲ್ವೆ ಕ್ರಾಸಿಂಗ ಬದಲು ಮೇಲ್ಸೇತುವೆ

ಹೊಳೆನರಸೀಪುರ ರೈಲು ಮಾರ್ಗದ ನಡುವಿನ ಕಿ.ಮೀ 1/600/700 ರಲ್ಲಿ ಬರುವ ರೈಲ್ವೆ ಕ್ರಾಸಿಂಗ್ ಗೇಟ್ ಸಂಖ್ಯೆ 3ರ ಬದಲಿಗೆ ರಸ್ತೆ ಮೇಲ್ಸೇತುವೆ ಮತ್ತು ಕೂಡುರಸ್ತೆ ನಿರ್ಮಾಣ ಕಾಮಗಾರಿಯ ಅಂದಾಜು ಮೊತ್ತವನ್ನು ರೂ.45.99 ಕೋಟಿಗಳಿಂದ ರೂ.83.72 ಕೋಟಿಗಳಿಗೆ ಹೆಚ್ಚುವರಿಯಾಗಿ ಪರಿಷ್ಕರಣೆ ಮಾಡಲು ತಾಂತ್ರಿಕ ಸಮಿತಿಯ ಒಪ್ಪಿಗೆಯನ್ನು ಸಚಿವ ಸಂಪುಟ ಅನುಮೋದಿಸಿದೆ.

ಹಾಸನ-ಹೊಳೆನರಸೀಪುರ ರೈಲು ಮಾರ್ಗದ ನಡುವಿನ ಕಿ.ಮೀ 1/600-700 ರಲ್ಲಿ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ:3 ರ ಬದಲಿಗೆ ರಸ್ತೆ ಮೇಲ್ಸೇತುವೆ ಹಾಗೂ ಕೂಡು ರಸ್ತೆ ನಿರ್ಮಾಣ ಕಾಮಗಾರಿಯನ್ನು ರೂ.83.72 ಕೋಟಿಗಳ ಪರಿಷ್ಕೃತ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು; ಮತ್ತು ರಾಜ್ಯ ಸರ್ಕಾರದ ಪಾಲಿನ ಪರಿಷ್ಕೃತ ಮೊತ್ತ ರೂ.49.54 ಕೋಟಿಗಳಲ್ಲಿ ಈಗಾಗಲೇ ಭರಿಸಿರುವ ರೂ.27.70 ಕೊಟಿಗಳನ್ನು ಹೊರತುಪಡಿಸಿ ಬಾಕಿ ಇರುವ ರೂ.21.84 ಕೋಟಿಗಳ ಮೊತ್ತವನ್ನು ಲೋಕೋಪಯೋಗಿ ಇಲಾಖೆಯಿಂದ ಭರಿಸಲು; ಸಚಿವ ಸಂಪುಟ ಅನುಮೋದಿಸಿದೆ.

ಅಕ್ಷಯ ಫುಡ್ ಪಾರ್ಕ್ಗೆ 4 ಪಥ ರಸ್ತೆ

ಚಿತ್ರದುರ್ಗ ಜಿಲ್ಲೆಯಲ್ಲಿ ತರಕಾರಿ, ಹಣ್ಣು-ಹಂಪಲು ಹಾಗೂ ಇತರೆ ದವಸ ಧಾನ್ಯಗಳನ್ನು ಶೇಖರಿಸಲು ಹಿರಿಯೂರು ನಗರದಿಂದ ಸುಮಾರು 3 ಕಿ.ಮೀ ದೂರದಲ್ಲಿ ದಾಸ್ತಾನು ಮಾಡಲು 107 ಎಕರೆ ವಿಸ್ತೀರ್ಣದಲ್ಲಿ ಅಕ್ಷಯ ಫುಡ್ ಪಾರ್ಕ್ ಕಂಪನಿಯವರು ಒಂದು ಘಟಕವನ್ನು ಮೂಲಭೂತ ಸೌಕರ್ಯಗಳೊಂದಿಗೆ ಸ್ಥಾಪಿಸಿದ್ದಾರೆ. ಅಕ್ಷಯ ಫುಡ್ ಪಾರ್ಕ್ನ್ನು ಸಂಪರ್ಕಿಸಲು 4 ಪಥಗಳ ರಸ್ತೆ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆಗೆ ಪ್ರಸ್ತಾಪಿಸಲಾಗಿತ್ತು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ರಾಜ್ಯ ಹೆದ್ದಾರಿ-24 ರಿಂದ ಅಕ್ಷಯ ಫುಡ್ ಪಾರ್ಕ್ ಸಂಪರ್ಕಿಸಲು 4 ಪಥಗಳ ರಸ್ತೆ ನಿರ್ಮಾಣ ಕಾಮಗಾರಿಯನ್ನು ರೂ.20.00 ಕೋಟಿ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು; ಹಾಗೂ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ಕಾಮಗಾರಿಗೆ ಗುತ್ತಿಗೆ ಆಹ್ವಾನಿಸಲು; ಸಚಿವ ಸಂಪುಟ ನಿರ್ಣಯಿಸಿದೆ.

ಒಟ್ಟು ಯೋಜನಾ ವೆಚ್ಚ ರೂ.20.00 ಕೋಟಿಗಳು. ಭೂಸ್ವಾಧೀನಕ್ಕೆ ರೂ.5.00 ಕೋಟಿ. 1.75 ಕಿ.ಮೀ ಉದ್ದದ 4 ಪಥದ ರಸ್ತೆ ನಿರ್ಮಾಣಕ್ಕೆ ರೂ.15.00 ಕೋಟಿ ವೆಚ್ಚ ಅಂದಾಜಿಸಲಾಗಿದೆ. SIಆಃI ಸಂಸ್ಥೆಯು ರೂ.11.63 ಕೋಟಿ ಸಾಲ ನೀಡುತ್ತಿದ್ದು, ರೂ.8.36 ಕೋಟಿ ರಾಜ್ಯ ಸರ್ಕಾರದಿಂದ ಭರಿಸಲಾಗುವುದು. ಅಕ್ಷಯ ಫುಡ್ ಪಾಕ್‌ಗೆ ಉತ್ತಮ ಸಂಪರ್ಕ ರಸ್ತೆ ಒದಗಿಸುವುದರಿಂದ ಸುತ್ತಮುತ್ತಲಿನ ಭಾಗಗಳಿಂದ ರೈತರು ಬೆಳೆದ ಉತ್ಪನ್ನಗಳನ್ನು ಆಹಾರ ಸಂಸ್ಕರಣೆ ಪಾರ್ಕ್ಗೆ ಸಾಗಾಣೆ ಮಾಡಲು ಹಾಗೂ ಸಂಸ್ಕರಿಸಿದ ಉತ್ಪನ್ನಗಳನ್ನು ಪಾರ್ಕ್ನಿಂದ ಹೊರಗೆ ಸಾಗಾಣೆ ಮಾಡಲು ವಾಹನಗಳಿಗೆ ಹೆಚ್ಚಿನ ಅನುಕೂಲವಾಗುವುದು.

ಕಡಣಿ ಸೇತುವೆ ನಿರ್ಮಾಣಕ್ಕೆ ಅನುಮೋದನೆ

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಡಣಿ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ರೂ.44.50 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.

ಕಲಬುರಗಿ ಜಿಲ್ಲೆ ಸೊನ್ನ ಗ್ರಾಮದ ಬಳಿ ಬ್ರಿಡ್ಜ್-ಕಂ-ಬ್ಯಾರೇಜ್‌ನ್ನು ನಿರ್ಮಿಸಿದ್ದು, ಇದರಿಂದ ನದಿಯಲ್ಲಿ ಪೂರ್ಣ ಪ್ರಮಾಣದ ನೀರು ನಿಲ್ಲಿಸಿದಾಗ ನೀರಿನ ಮಟ್ಟ ಅಧಿಕಗೊಂಡು ಕರ್ನಾಟಕ ಭೂಸೇನ ಮತ್ತು ಸಣ್ಣ ನೀರಾವರಿ ವತಿಯಿಂದ ನಿರ್ಮಿಸಲಾದ ಬ್ರಿಡ್ಜ್-ಕಂ-ಬ್ಯಾರೇಜ್‌ನ ಎತ್ತರವು ಕಡಿಮೆ ಇರುವುದರಿಂದ ಸದರಿ ಸೇತುವೆಯು ಮುಳುಗಡೆಗೊಂಡು ಅಫ್ಜಲ್‌ಪುರ ಮತ್ತು ಸಿಂದಗಿ ತಾಲ್ಲೂಕುಗಳ ಮಧ್ಯೆ ಸಂಪರ್ಕ ಕಡಿತಗೊಂಡು ಸಾರ್ವಜನಿಕ ಸಂಚಾರಕ್ಕೆ ವ್ಯತ್ಯಯವಾಗುವ ಈ ಸಂದರ್ಭದಲ್ಲಿ ಸಾರ್ವಜನಿಕರು ನದಿಯನ್ನು ದೋಣಿ/ತೆಪ್ಪಗಳ ಮೂಲಕ ದಾಟುವ ಅನಿವಾರ್ಯತೆ ಉಂಟಾಗುವುದರಿAದ ಹಲವಾರು ಬಾರಿ ಸಾರ್ವಜನಿಕರ ಜೀವಹಾನಿ ಉಂಟಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸದರಿ ಸೇತುವೆ ನಿರ್ಮಾಣ ಕಾಮಗಾರಿಯಿಂದ ಆಲಮೇಲ ತಾಲ್ಲೂಕಿನ ಕಡಣಿ, ತಾರಪುರ, ಆಲಮೇಲ, ಗುಂದಗಿ, ಬಳಗಾನೂರ, ಕೋರಹಳ್ಳಿ, ಹೂವಿನಹಳ್ಳಿ ಮತ್ತು ಮಿರಗಿ ಹಾಗೂ ಅಫಜಲಪೂರ ತಾಲ್ಲೂಕಿನ ದುಧನಿ, ಕರಜಿಗಿ, ಸಿರ್ವಾರ ಮತ್ತು ಹತ್ತಿರದ ಸಣ್ಣ ಪುಟ್ಟ ಗ್ರಾಮಗಳಿಗೆ ಸಂಚಾರ ಕಲ್ಪಿಸಿದಂತಾಗುತ್ತದೆ ಎಂದು ಪ್ರಸ್ತಾಪಿಸಲಾಗಿದೆ.

50 ಗ್ರಾಮ ಪಂಚಾಯತಿಗಳಲ್ಲಿ ಹೊಂಬೆಳಕು

“ಹೊAಬೆಳಕು” ಯೋಜನೆಯಡಿ 50 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್ ಬೀದಿ ದೀಪಗಳನ್ನು ರೂ.25.00 ಕೋಟಿಗಳ ವೆಚ್ಚದಲ್ಲಿ ಅಳವಡಿಸುವ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಗ್ರಾಮ ಪಂಚಾಯತಗಳಲ್ಲಿನ ವಿದ್ಯುತ್ ಬಳಕೆಯ ಮೇಲೆ ನಿಘಾವಹಿಸಲು ಹಾಗೂ ವಿದ್ಯುತ್ ವೆಚ್ಚ ಕಡಿಮೆ ಮಾಡಲು ಸೌರ ಬೀದಿ ದೀಪಗಳು ಅತ್ಯಾವಶ್ಯಕವಾಗಿವೆ. ಸೌರ ಬೀದಿ ದೀಪಗಳು ನವೀಕರಿಸಬಹುದಾದ, ಪರಿಣಾಮಕಾರಿ ಮತ್ತು ಸ್ಥಾಪಿಸಲು/ನಿರ್ವಹಿಸಲು ಸುಲಭವಾಗಿರುವುದರಿಂದ ಪರಿಸರ ಮಾಲಿನ್ಯ ನಿಯಂತ್ರಣ ಮತ್ತು ಮಿತವ್ಯಯಕ್ಕೆ ಸಹಕಾರಿಯಾಗುವುದರಿಂದ ಸಾಂಪ್ರದಾಯಿಕ ಬೀದಿ ದೀಪಗಳಿಗಿಂತ ಸೌರ ಬೀದಿ ದೀಪಗಳು ಹೆಚ್ಚು ಶಕ್ತಿ ಮತ್ತು ಸಮರ್ಪಕವಾಗಿರುತ್ತವೆ ಎಂದು ಹೊಂಬೆಳಕು ಯೋಜನೆಯಡಿ 50 ಗ್ರಾಮ ಪಂಚಾಯತಿಗಳಲ್ಲಿ ಅಳವಡಿಸಲು ಪ್ರಸ್ತಾಪಿಸಲಾಗಿದೆ.

ಸೇವೆಗೆ ಮರುಸ್ಥಾಪನೆ

ಎಂ.ಬಿ ಭಜಂತ್ರಿ ಸೇವೆಯಿಂದ ವಜಾಗೊಂಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ, ಶಾಲಾ ಶಿಕ್ಷಣ ಇಲಾಖೆ, ಅಥಣಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಇವರನ್ನು ಸೇವೆಯಿಂದ ವಜಾಗೊಳಿಸಿರುವ ಸರ್ಕಾರದ ಆದೇಶ ಸಂಖ್ಯೆ: ಇಡಿ 80 ಡಿಜಿಎಂ 2017, ದಿನಾಂಕ: 15.11.2022 ರಲ್ಲಿ ದಂಡನಾದೇಶವನ್ನು ಹಿಂಪಡೆಯಲು; ಸಚಿವ ಸಂಪುಟ ಅನುಮೋದನೆ ನೀಡಿದೆ.

ಮಾನ್ಯ ಕರ್ನಾಟಕ ಆಡಳಿತ ಮಂಡಳಿ ಬೆಳಗಾವಿ ಪೀಠ ಮತ್ತು ಮಾನ್ಯ ಉಚ್ಛ ನ್ಯಾಯಾಲಯ, ಧಾರವಾಡ ಪೀಠ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಿರುವ ದಂಡನಾ ಆದೇಶವನ್ನು ಪ್ರಸ್ತಾಪಿಸಲಾಗಿತ್ತು.

ಉಪನಗರ ಯೋಜನೆಗೆ ಅನುಮೋದನೆ

ಬೆಂಗಳೂರಿನ ಜನದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರು ಸುತ್ತಮುತ್ತಲಿನ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿ ಪಟ್ಟಣಗಳನ್ನು ರಸ್ತೆ ಮತ್ತು ರೈಲು ಸಂಪರ್ಕಗಳೊಂದಿಗೆ ಸ್ಯಾಟಲೈಟ್ ಟೌನ್‌ಶಿಪ್ ಗಳನ್ನಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಮನಗರ ಜಿಲ್ಲೆ, ರಾಮನಗರ ತಾಲ್ಲೂಕು, ಬಿಡದಿ ಹೋಬಳಿಯ ಬೈರಮಂಗಲ ಬನ್ನಿಗೆರೆ, ಹೊಸೂರು, ಕೆ.ಜಿ. ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ್ಯ, ಕಂಚುಗಾರನಹಳ್ಳಿ ಕಾವಲು, ಮಂಡಲಹಳ್ಳಿ ಹಾಗೂ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಭಾಗಶ: ಗ್ರಾಮ ಸೇರಿ ಒಟ್ಟು 10 ಗ್ರಾಮಗಳ ವ್ಯಾಪ್ತಿಯ ಪ್ರದೇಶದಲ್ಲಿ “ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ” ಯೋಜನೆಯನ್ನು ಅನುಷ್ಟಾನಗೊಳಿಸಲು ಸಚಿವ ಸಂಪುಟ ಅನುಮೋದಿಸಿದೆ.

ರ‍್ಕಾರದ ಅಧಿಸೂಚನೆ ಸಂಖ್ಯೆ: ನಅಇ 97 ಬಿಎಂಆರ್ 2006 ದಿನಾಂಕ:18.10.2006 ರಲ್ಲಿ ಬಿಡದಿ, ಸಾತನೂರು, ರಾಮನಗರ, ಸೋಲೂರು ಮತ್ತು ನಂದಗುಡಿಯಲ್ಲಿ 05 ಸಮಗ್ರ ಉಪನಗರಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿತ್ತು.

2. ರಾಜ್ಯ ರ‍್ಕಾರದ 2024-25 ನೇ ಸಾಲಿನ ಬಜೆಟ್ನ ಪ್ಯಾರಾ 270ರಲ್ಲಿ ಟೌನ್ಶಿಪ್ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳುವುದಾಗಿ ಈ ಕೆಳಕಂಡಂತೆ ಘೋಷಿಸಿದೆ:
“ಬೆಂಗಳೂರಿನ ಜನದಟ್ಟಣೆಯನ್ನು ಕಡಿಮೆ ಮಾಡಲು, ರ‍್ಕಾರವು ಹಲವಾರು ಯೋಜನೆಗಳನ್ನು ರೂಪಿಸುತ್ತದೆ ಸುಸ್ಥಿರ ಮೂಲ ಸೌರ‍್ಯದೊಂದಿಗೆ ರಾಜ್ಯದಲ್ಲಿ ಆರ‍್ಷಕ ನಗರಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಅವಕಾಶಗಳನ್ನು ಕಲ್ಪಿಸುವುದು.

ಬೆಂಗಳೂರು ಸುತ್ತಮುತ್ತಲಿನ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿ ಪಟ್ಟಣಗಳನ್ನು ರಸ್ತೆ ಮತ್ತು ರೈಲು ಸಂರ‍್ಕದೊಂದಿಗೆ ಸ್ಯಾಟಲೈಟ್ ಟೌನ್ಶಿಪ್ಗಳಾಗಿ ಅಭಿವೃದ್ಧಿಪಡಿಸಲಾಗುವುದು.

3. ರ‍್ಕಾರದ ಅಧಿಸೂಚನೆ ಸಂಖ್ಯೆ: ನಅಇ 119 ಬಿಎಂಆರ್ 2023(ಇ), ದಿನಾಂಕ:18.11.2023 ರಲ್ಲಿ ರ‍್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ಕಾಯ್ದೆ,1987 ರಡಿಯಲ್ಲಿ ಗ್ರೇಟರ್ ಬೆಂಗಳೂರು ಬಿಡದಿ ಸ್ಮರ‍್ಟ್ ಸಿಟಿ ಯೋಜನಾ ಪ್ರಾಧಿಕಾರವನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವಾಗಿ ಮೇಲ್ರ‍್ಜೆಗೇರಿಸಿ ಅಧಿಸೂಚಿಸಲಾಗಿರುತ್ತದೆ.

4. ರ‍್ಕಾರದ ಆದೇಶ ಸಂಖ್ಯೆ.ಯುಡಿಡಿ 115 ಬಿಎಂಆರ್ 2024 (ಇ) ದಿನಾಂಕ: 02.09.2024 ರಲ್ಲಿ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿನ ರಾಮನಗರ ತಾಲ್ಲೂಕು, ಬಿಡದಿ ಹೋಬಳಿಯ ಬೈರಮಂಗಲ, ಬನ್ನಿಗೆರೆ, ಹೊಸೂರು, ಕೆ.ಜಿ ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ್ಯ, ಕಂಚುಗಾರನಹಳ್ಳಿ ಕಾವಲು, ಮಂಡಲಹಳ್ಳಿ, ಹಾಗೂ ಹಾರೋಹಳ್ಳಿ ತಾಲ್ಲೂಕು, ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿನ ಸಾಗುವಳಿ ವಿಸ್ತರ‍್ಣ 6023ಎಕರೆ-24ಗುಂಟೆ ಹಾಗೂ ‘ಎ’ ಖರಾಬು ವಿಸ್ತರ‍್ಣದ ಒಟ್ಟು 101ಎಕರೆ-12ಗುಂಟೆ ಮತ್ತು ‘ಬಿ’ ಖರಾಬು ವಿಸ್ತರ‍್ಣ 2818ಎ-39ಗುಂಟೆ ಪೈಕಿ 722ಎ-31ಗುಂಟೆ ಕೆರೆ ಪುದೇಶ ಸೇರಿದಂತೆ ಸುಮಾರು ಒಟ್ಟು 8943ಎ-35ಗುಂಟೆ ಪ್ರದೇಶದಲ್ಲಿ ಈಗಾಗಲೇ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಂದ ಖಾತೆ ತೆರೆದಿರುವ ನಿವೇಶನಗಳನ್ನು ಒಳಗೊಂಡಂತೆ, ಹ್ಯಾಮ್‌ಲೆಟ್, ಸೆಟಲ್ಮೆಂಟ್, ಶಾಲೆ/ಕಾಲೇಜು, ಕೆರೆ, ಸ್ಮಶಾನ ಮತ್ತಿತರೆ ಸರ‍್ವಜನಿಕ ಉದ್ದೇಶಿತ ಜಾಗೆಗಳನ್ನು ಯಥಾವತ್ತಾಗಿ ಕಾಯ್ದಿರಿಸಿ, ಉಳಿದ ಪ್ರದೇಶಕ್ಕೆ ಪ್ರಸ್ತುತ ಪ್ರಥಮ ಹಂತದಲ್ಲಿ ಬಿಡದಿ ಸಮಗ್ರ ಉಪನಗರ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಪ್ರಾಥಮಿಕ ಪ್ರಕ್ರಿಯೆಗಳನ್ನು ಕೈಗೊಳ್ಳುವ ಪ್ರಸ್ತಾವನೆಗೆ ರ‍್ಕಾರದ ತಾತ್ವಿಕ ಅನುಮೋದನೆ ನೀಡಲಾಗಿದೆ.

5. BMR ಪ್ರದೇಶದಲ್ಲಿನ ಎಲ್ಲಾ ಟೌನ್ಶಿಪ್ ಅಭಿವೃದ್ಧಿ ಚಟುವಟಿಕೆಗಳನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಕರ‍್ಯಗತಗೊಳಿಸುತ್ತದೆ.

6. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಮನಗರ ಜಿಲ್ಲೆ, ರಾಮನಗರ ತಾಲ್ಲೂಕು, ಬಿಡದಿ ಹೋಬಳಿಯ ಬೈರಮಂಗಲ, ಬನ್ನಿಗೆರೆ, ಹೊಸೂರು, ಕೆ.ಜಿ ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ್ಯ, ಕಂಚುಗಾರನಹಳ್ಳಿ ಕಾವಲು, ಮಂಡಲಹಳ್ಳಿ ಹಾಗೂ ಹಾರೋಹಳ್ಳಿ ತಾಲ್ಲೂಕು, ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಗ್ರಾಮ ಭಾಗಶಃ ಸೇರಿ ಒಟ್ಟು 10 ಗ್ರಾಮಗಳ ವ್ಯಾಪ್ತಿಯಲ್ಲಿ “ಗ್ರೇಟರ್ ಬೆಂಗಳೂರು ಸಮಗ್ರ ಉಪನಗರದ” ಅಭಿವೃದ್ಧಿ ಯೋಜನೆಯನ್ನು ರ‍್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ, 1987 ರ ಸೆಕ್ಷನ್ 15(1)(b) ಅಡಿಯಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.

7. ಗ್ರೇಟರ್ ಬೆಂಗಳೂರು ಸಮಗ್ರ ಉಪನಗರದ ಯೋಜನೆಗಾಗಿ ಮೇಲಿನ 10 ಗ್ರಾಮಗಳಲ್ಲಿನ ಸುಮಾರು 8943 ಎಕರೆ ಪ್ರದೇಶದ ಪೈಕಿ 8032- 37 ಎಕರೆ-ಗುಂಟೆ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭೂಸ್ವಾಧೀನ ಪ್ರಕ್ರಿಯೆಗಳನ್ನು ರ‍್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ಕಾಯ್ದೆ-1987ರ ಕಲಂ.35 & 36 ರ ಅಡಿಯಲ್ಲಿ ಕೈಗೆತ್ತಿಕೊಳ್ಳಲು ಹಾಗೂ ರ‍್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳು (ಸ್ವಾಧೀನಪಡಿಸಿಕೊಂಡ ಭೂಮಿಗೆ ಬದಲಿ ನಿವೇಶನಗಳ ಹಂಚಿಕೆ ಪರಿಹಾರ) ನಿಯಮಗಳು, 2009ರಲ್ಲಿನ ಭೂ ಹಂಚಿಕೆ ಮಾದರಿಯಲ್ಲಿ(35-50% ಅಭಿವೃದ್ಧಿ ಹೊಂದಿದ ಭೂಮಿಯನ್ನು ಪರಿಹಾರವಾಗಿ)ಪರಿಹಾರವನ್ನು ನೀಡುವ ಮುಖೇನ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.

8. 910 ಎಕರೆ 03 ಗುಂಟೆ ಜಾಗವನ್ನು ಈಗಾಗಲೇ ಕೆಇಎಡಿಬಿ ವತಿಯಿಂದ ಭೂಸ್ವಾಧೀನಗೊಳಿಸಿಕೊಂಡಿದ್ದು, ಸದರಿ ಜಾಗವನ್ನು ಹೊರತು ಪಡಿಸಿ ಟೌನ್‌ಶಿಪ್‌ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿತ್ತು.

8. ಸಮಗ್ರ ಉಪನಗರ ಯೋಜನೆಗಳ ಅನುಷ್ಟಾನಕ್ಕಾಗಿ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರ, ಇಲಾಖೆ ಮತ್ತು ಸಂಸ್ಥೆಗಳನ್ನೊಳಗೊಂಡಂತೆ ರ‍್ಕಾರದ ಅಪರ ಮುಖ್ಯ ಕರ‍್ಯರ‍್ಶಿ, ರ‍್ನಾಟಕ ರ‍್ಕಾರ ರವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲು ಅನುಮೋದನೆ ನೀಡಲಾಗಿದೆ.

9. ಜಾಗತಿಕ ಟೆಂಡರ್ ಕರೆಯುವ ಮೂಲಕ ಅಂತರರಾಷ್ಟ್ರೀಯ ಮಾನದಂಡಗಳ ಪ್ರಕಾರ Work-Live-Play ಪರಿಕಲ್ಪನೆಯಲ್ಲಿ ಟೌನ್ಶಿಪ್ ಅನ್ನು ವಿನ್ಯಾಸಗೊಳಿಸಲು ಮತ್ತು ಯೋಜಿಸಲು ರ‍್ಹ ಸಂಸ್ಥೆಯನ್ನು ನೇಮಿಸಲು ಅನುಮೋದನೆ ನೀಡಲಾಗಿದೆ.

ಮಸೂದೆ ಹಿಂದಕ್ಕೆ

ಪ್ರೀಮಿಯಂ ಎಫ್.ಎ.ಆರ್ ಕುರಿತು “ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ, 2024” ಕ್ಕೆ ತರಲಾಗಿದ್ದ ವಿಧೇಯಕವನ್ನು ಹಿಂಪಡೆಯಲು ಸಚಿವ ಸಂಪುಟ ಅನುಮೋದಿಸಿದೆ.

ರಾಜ್ಯಪಾಲರು ಕೆಲವು ವಿವರಣೆ ಕೋರಿ ವಿಧೇಯಕವನ್ನು ಹಿಂದಿರುಗಿಸಿರುತ್ತಾರೆ. ರಾಜ್ಯಪಾಲರು ವಿವರಣೆ ಕೋರಿರುವ ಅಂಶಗಳು ಕಾನೂನಾತ್ಮಕ ಅಂಶಗಳನ್ನು ಒಳಗೊಂಡಿರುವುದರಿAದ ಸಂಬಂಧಿಸಿದ ಪಾಲುದಾರರೊಂದಿಗೆ ಸಮಾಲೋಚಿಸಿ, ಸಮಗ್ರವಾಗಿ ಪರಿಶೀಲಿಸುವುದು ಸೂಕ್ತವಾಗಿದೆ.

ಆರೋಗ್ಯ ಸಿಬ್ಬಂದಿಗೂ ಎಸ್.ಟಿ.ಎಫ್ ಮಾದರಿಯಲ್ಲಿ ನಿವೇಶನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿ / ಸಿಬ್ಬಂದಿಗಳು ವೀರಪ್ಪನ್ ಕಾರ್ಯಾಚರಣೆಯ ಎಸ್.ಟಿ.ಎಫ್ ಕಾರ್ಯಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ನೀಡಲಾದ ಸೌಲಭ್ಯಗಳನ್ನು ತಮಗೂ ನೀಡಬೇಕೆಂದು ಕೋರಿರುತ್ತಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಲಭ್ಯವಿರುವ ಹಂಚ್ಯಾ-ಸಾತಗಳ್ಳಿ ‘ಎ’ ವಲಯದಲ್ಲಿ ನಿವೇಶನ ಮಂಜೂರು ಮಾಡಲು ಸಚಿವ ಸಂಪುಟ ಅನುಮೋದಿಸಿದೆ.

ಮೂರು ಜನರಿಗೆ ತಲಾ ಒಂದು ನಿವೇಶನವನ್ನು ರೂ.2,100/-ಗೆ ಚ.ಮೀ ದರ ನಿಗದಿಪಡಿಸಲಾಗಿದೆ.

BIG NEWS: ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಸಿಹಿಸುದ್ದಿ: ಪೊಲೀಸ್ ನೇರ ನೇಮಕಾತಿ ಮೀಸಲಾತಿ ಶೇ.2ರಿಂದ 3ಕ್ಕೆ ಹೆಚ್ಚಳ

ಈಗ ‘ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ ಅರ್ಜಿಸಲ್ಲಿಕೆ ಮತ್ತಷ್ಟು ಸರಳ: ಜಸ್ಟ್ ಕುಳಿತಲ್ಲೇ ಆನ್ ಲೈನ್ ಮೂಲಕ ಸಲ್ಲಿಸಿ | Karnataka Chief Minister Relief Fund

ಡಿಜಿಟಲ್ ಪಾವತಿ ವರ್ಷದಿಂದ ವರ್ಷಕ್ಕೆ ಎರಡಂಕಿ ಏರಿಕೆ: RBI | Digital Payments

Share. Facebook Twitter LinkedIn WhatsApp Email

Related Posts

BREAKING : ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ : ಬಾಲಕನಿಗೆ 20 ವರ್ಷ ಶಿಕ್ಷೆ ಪ್ರಕಟಿಸಿದ ಕೋರ್ಟ್

13/05/2025 9:03 PM1 Min Read

BREAKING : ಹಾವೇರಿಯಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು!

13/05/2025 8:50 PM1 Min Read

BREAKING : ರಾಜ್ಯದಲ್ಲಿ ಇಂದು ಒಂದೇ ದಿನ ಸಿಡಿಲಿಗೆ 8 ಜನರು ಬಲಿ!

13/05/2025 8:33 PM2 Mins Read
Recent News

BREAKING : ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ : ಬಾಲಕನಿಗೆ 20 ವರ್ಷ ಶಿಕ್ಷೆ ಪ್ರಕಟಿಸಿದ ಕೋರ್ಟ್

13/05/2025 9:03 PM

BREAKING: ಪಾಕ್ ಹೈಕಮಿಷನ್ ಅಧಿಕಾರಿಗೆ ‘ಪರ್ಸನಾ ನಾನ್ ಗ್ರಾಟಾ’ ಘೋಷಿಸಿದ ಭಾರತ: 24 ಗಂಟೆಗಳಲ್ಲಿ ದೇಶ ತೊರೆಯಲು ಆದೇಶ

13/05/2025 8:53 PM

BREAKING : ಹಾವೇರಿಯಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು!

13/05/2025 8:50 PM

ಚಿಪ್ ಒಳಗೊಂಡ ‘ಇ-ಪಾಸ್ ಪೋರ್ಟ್ ಸೇವೆ’ ಆರಂಭಿಸಿದ ಭಾರತ | India E-Passport

13/05/2025 8:41 PM
State News
KARNATAKA

BREAKING : ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ : ಬಾಲಕನಿಗೆ 20 ವರ್ಷ ಶಿಕ್ಷೆ ಪ್ರಕಟಿಸಿದ ಕೋರ್ಟ್

By kannadanewsnow0513/05/2025 9:03 PM KARNATAKA 1 Min Read

ಬೆಂಗಳೂರು : ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಬಾಲಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಂಗಳೂರಿನ ಒಂದನೇ ಎಫ್…

BREAKING : ಹಾವೇರಿಯಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು!

13/05/2025 8:50 PM

BREAKING : ರಾಜ್ಯದಲ್ಲಿ ಇಂದು ಒಂದೇ ದಿನ ಸಿಡಿಲಿಗೆ 8 ಜನರು ಬಲಿ!

13/05/2025 8:33 PM

ಈ ಐದು ನಿಯಮ ಪಾಲಿಸಿದರೆ ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

13/05/2025 8:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.