Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: 7ನೇ ವೇತನ ಆಯೋಗ ಶಿಫಾರಸ್ಸುಗಳ ಸಂಪೂರ್ಣ ವಿವರ ಇಲ್ಲಿದೆ
KARNATAKA

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: 7ನೇ ವೇತನ ಆಯೋಗ ಶಿಫಾರಸ್ಸುಗಳ ಸಂಪೂರ್ಣ ವಿವರ ಇಲ್ಲಿದೆ

By kannadanewsnow0716/03/2024 1:00 PM

*ಅವಿನಾಶ್‌ ಆರ್ ಭೀಮಸಂದ್ರ

ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗದವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿದರು.

ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಹಾಗಾದ್ರೇ ರಾಜ್ಯದ 7ನೇ ವೇತನ ಆಯೋಗ ಶಿಫಾರಸ್ಸುಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ

  1. 7ನೇ ರಾಜ್ಯ ವೇತನ ಆಯೋಗವು ಶೇ.31 ತುಟ್ಟಿಭತ್ಯೆಯನ್ನು ವಿಲೀನಗೊಳಿಸುವ ಮೂಲಕ ಮತ್ತು ಶೇ.27.50 ರಷ್ಟು ಫಿಟ್ ಮೆಂಟ್ ಪ್ರಯೋಜನವನ್ನು ಒದಗಿಸುವ ಮೂಲಕ ರಾಜ್ಯ ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನವನ್ನು ತಿಂಗಳಿಗೆ ಅಸ್ತಿತ್ವದಲ್ಲಿರುವ ರೂ.17,000 ರಿಂದ ರೂ.27,000 ಕ್ಕೆ ಪರಿಷ್ಕರಿಸಲು ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 5.37).
  2. ವೇತನ ರಚನೆಯಲ್ಲಿ ಕನಿಷ್ಠ ಮತ್ತು ಗರಿಷ್ಠ ವೇತನದ ನಡುವೆ ಅಸ್ತಿತ್ವದಲ್ಲಿರುವ 1:8.86 ರ ಅನುಪಾತವನ್ನು ಹೆಚ್ಚು ಕಡಿಮೆ ಹಾಗೇ ಉಳಿಸಿಕೊಳ್ಳುವುದು ಮತ್ತು ಗರಿಷ್ಠ ವೇತನವನ್ನು ರೂ.2,41,200 ಕ್ಕೆ ನಿಗದಿಪಡಿಸಲು ಆಯೋಗವು ಶಿಫಾರಸ್ಸು ಮಾಡುತ್ತದೆ ( 5.37).
  3. ಹೊಸ ವೇತನ ಶ್ರೇಣಿಗಳನ್ನು ದಿನಾಂಕ: 01.07.2022 ರಿಂದ ಕಾಲ್ಪನಿಕವಾಗಿ ಅನ್ವಯಿಸುತ್ತದೆ. ಅನುಷ್ಠಾನಗೊಳಿಸುವ ನೈಜ್ಯ ದಿನಾಂಕವನ್ನು ರಾಜ್ಯ ಸರ್ಕಾರವು ನಿರ್ಧರಿಸುವುದೆಂದು ಆಯೋಗವು ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 5.57).
  4. ನೌಕರರ ಕುಟುಂಬದ ಕನಿಷ್ಠ ಬಳಕೆ ವೆಚ್ಚದ ಲೆಕ್ಕಾಚಾರಕ್ಕಾಗಿ ಬಳಸಲಾಗುವ ಅಕ್ರೋಯಾ ಸೂತ್ರವನ್ನು ಚಾಲ್ತಿಯಲ್ಲಿರುವ ‘1’ ಮತ್ತು ‘0.8’, ರ ಪ್ರಮಾಣದ ಬದಲಿಗೆ ಪ್ರಾತಿನಿಧಿಕ ಕುಟುಂಬದ ವಯಸ್ಕ ಪುರುಷ ಮತ್ತು ಮಹಿಳಾ ಸದಸ್ಯರಿಗೆ ‘1’ ಸಮಾನ ಪ್ರಮಾಣವನ್ನು ನೀಡುವ ಮೂಲಕ, ಎರಡೂ ಲಿಂಗಗಳನ್ನು ಸಮಾನವಾಗಿ ಪರಿಗಣಿಸಿ, ಸ್ವಲ್ಪ ಮಟ್ಟಿಗೆ ಮಾರ್ಪಡಿಸಲಾಗಿದೆ (ಅಧ್ಯಾಯ 5.33).
  5. 25 ಪರಿಷ್ಕೃತ ಪ್ರತ್ಯೇಕ (individual) ವೇತನ ಶ್ರೇಣಿಗಳೊಂದಿಗೆ, ಪರಿಷ್ಕೃತ ಮುಖ್ಯ ಶ್ರೇಣಿಯನ್ನು ರೂಪಿಸಲಾಗಿದೆ. ಚಾಲ್ತಿಯಲ್ಲಿರುವ ರೂ.400 ರಿಂದ ರೂ.3,100 ರ ಬದಲಿಗೆ ವಾರ್ಷಿಕ ಬಡ್ತಿ ದರಗಳು ಮುಖ್ಯ ಶ್ರೇಣಿಯಾದ್ಯಂತ ರೂ.650 ರಿಂದ ರೂ.5,000 ರದವರೆಗೆ ಆಗಿರುತ್ತದೆ (ಅಧ್ಯಾಯ 5.43).
  6. ಪ್ರಸ್ತುತ ಜಾರಿಯಲ್ಲಿರುವಂತೆ, ಒಂದು ಕ್ಯಾಲೆಂಡರ್ ವರ್ಷದಲ್ಲಿ 1ನೇ ಜನವರಿ ಅಥವಾ 1ನೇ ಜುಲೈನಲ್ಲಿ ವಾರ್ಷಿಕ ಬಡ್ತಿ ದರಗಳನ್ನು ಮಂಜುರೂ ಮಾಡುವುದನ್ನು ಮುಂದುವರೆಸಲು ಆಯೋಗವು ಶಿಫಾರಸ್ಸು ಮಾಡಿರುತ್ತದೆ (ಅಧ್ಯಾಯ 5.44).
  7. ಕೇಂದ್ರದ ತುಟ್ಟಿಭತ್ಯೆ ಸೂತ್ರ ಮತ್ತು ಮಾದರಿಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರಿಸಲಾಗುತ್ತದೆ. ದಿನಾಂಕ: 01.07.2022 ರಂತೆ 361,704 ಸೂಚ್ಯಂಕ ಮಟ್ಟದಲ್ಲಿ ಸಂಪೂರ್ಣವಾಗಿ ತಟಸ್ಥಗೊಂಡಿರುವ ತುಟ್ಟಿಭತ್ಯೆಯೊಂದಿಗೆ, ದಿನಾಂಕ: 01.07.2022 ರಿಂದ ಭಾರತ ಸರ್ಕಾರವು ಮಂಜೂರು ಮಾಡಿದ ಪ್ರತಿ ಶೇ.1 ರಷ್ಟು ತುಟ್ಟಿಭತ್ಯೆಗೆ, ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಬೇಕಾದ ತುಟ್ಟಿಭತ್ಯೆಯು ಪರಿಷ್ಕೃತ ಮೂಲ ವೇತನದ ಶೇ.0.722 ರಷ್ಟು ಆಗಿರುತ್ತದೆ (ಅಧ್ಯಾಯ 5.65).
  1. ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳ ವೇತನ ಶ್ರೇಣಿಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕರಿಸಿದ ರೀತಿಯಲ್ಲಿಯೇ ಪರಿಷ್ಕರಿಸಬೇಕು (ಅಧ್ಯಾಯ 5.54).
  2. ರಾಜ್ಯ ಸರ್ಕಾರವು ಕೇಂದ್ರದ ವೇತನ ರಚನೆಯನ್ನು ಅಳವಡಿಸಿಕೊಳ್ಳಲು ಒಂದು ವಿಧಾನವನ್ನು ಆಯೋಗವು ರೂಪಿಸಿದೆ. ಆದಾಗ್ಯೂ ಪ್ರಸ್ತುತ, ರಾಜ್ಯ ಸರ್ಕಾರವು ಮುಖ್ಯ ಶ್ರೇಣಿ ಮತ್ತು ವಿಭಜಿತ ಪ್ರತ್ಯೇಕ ವೇತನ ಶ್ರೇಣಿಗಳನ್ನು ಒಳಗೊಂಡಿರುವ ಅಸ್ತಿತ್ವದಲ್ಲಿರುವ ವೇತನದ ಮಾದರಿಯನ್ನು ರಾಜ್ಯ ಸರ್ಕಾರವು ಉಳಿಸಿಕೊಳ್ಳುವುದು ಸೂಕ್ತವೆಂದು ಅಭಿಪ್ರಾಯಪಟ್ಟಿದೆ. ಭಾರತ ಸರ್ಕಾರವು ತನ್ನ ನೌಕರರಿಗೆ ಮುಂದಿನ ವೇತನವನ್ನು ಪರಿಷ್ಕರಿಸಿದಾಗ ರಾಜ್ಯ ಸರ್ಕಾರವು ಕೇಂದ್ರೀಯ ವೇತನ ರಚನೆಯ ಆಧಾರದ ಮೇಲೆ ಪರ್ಯಾಯ ರಚನೆಯನ್ನು ಅಳವಡಿಸಿಕೊಳ್ಳಲು ಸೂಕ್ತ ಸಮಯವಾಗಿರುತ್ತದೆ (ಅಧ್ಯಾಯ 6.14).
  3. ಮಾಸಿಕ ಪಿಂಚಣಿ ಪ್ರಮಾಣವು ಅಂತಿಮವಾಗಿ ಪಡೆದ ಮೂಲ ವೇತನದ ಶೇ.50 ರಷ್ಯರಲ್ಲಿಯೇ ಮುಂದುವರೆಯುತ್ತದೆ ಮತ್ತು ಕುಟುಂಬ ಪಿಂಚಣಿಯು ಅಂತಿಮವಾಗಿ ಪಡೆದ ಮೂಲ ವೇತನದ ಶೇ.30 ರಷ್ಯರಲ್ಲಿ ಮುಂದುವರಿಯುತ್ತದೆ. ಅದರಂತೆ, ಕನಿಷ್ಠ ಪಿಂಚಣಿಯನ್ನು ರೂ.13,500 (ಕನಿಷ್ಠ ವೇತನ ರೂ. 27,000 ರ ಶೇ.50 ರಷ್ಟು) ಮತ್ತು ಗರಿಷ್ಠ ಪಿಂಚಣಿಯನ್ನು ರೂ.1,20,600 (ಗರಿಷ್ಠ ರೂ.2,41,200 ವೇತನದ ಶೇ.50 ರಷ್ಟು) ಪರಿಷ್ಕರಿಸುವುದು (ಅಧ್ಯಾಯ 8.18).
  4. 70-80 ವರ್ಷ ವಯಸ್ಸಿನ ಪಿಂಚಣಿದಾರರಿಗೆ ಮೂಲ ಪಿಂಚಣಿಯ ಹೆಚ್ಚುವರಿ ಶೇ.10 ರಷ್ಟನ್ನು ಆಯೋಗವು ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 8.26).
  5. ಆಯೋಗವು ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರನ್ನು ಒಳಗೊಳ್ಳುವ ಉದ್ದೇಶಿತ “ಸಂಧ್ಯಾಕಿರಣ” ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಲು ಒತ್ತಾಯಿಸುತ್ತದೆ ಮತ್ತು ಈ ಮಧ್ಯೆ. ರಾಜ್ಯ ಸರ್ಕಾರವು ಈ ಯೋಜನೆಯ ಅನುಷ್ಠಾನವನ್ನು ಪ್ರಾರಂಭಿಸುವವರೆಗೆ ಎಲ್ಲಾ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರಿಗೆ ವೈದ್ಯಕೀಯ ಭತ್ಯೆಯಾಗಿ ತಿಂಗಳಿಗೆ ರೂ.500 ಪಾವತಿಸುವಂತೆ ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 8.37).
  6. ಪಿಂಚಣಿದಾರರು ಆತ ಅಥವಾ ಆಕೆಯು ಮರಣದ ಹೊಂದಿದಲ್ಲಿ, ಅವರ ಅಂತ್ಯಕ್ರಿಯೆ ವೆಚ್ಚಗಳನ್ನು ಭರಿಸಲು ರೂ.10,000 ಗಳ ಮೊತ್ತವನ್ನು ಪಿಂಚಣಿದಾರರ ನಾಮನಿರ್ದೇಶಿತನಿಗೆ ಪಾವತಿಸಲು ಶಿಫಾರಸ್ಸು ಮಾಡಲಾಗಿದೆ (ಅಧ್ಯಾಯ 8.39).
  7. ಕರ್ನಾಟಕ ಸರ್ಕಾರಿ ನೌಕರರ (ಕುಟುಂಬ ಪಿಂಚಣಿ) ನಿಯಮಗಳು, 2002 ರಲ್ಲಿ ಮಹಿಳಾ ಸರ್ಕಾರಿ ನೌಕರರು / ಪಿಂಚಣಿದಾರರು ತಮ್ಮ ಮಗು / ಮಕ್ಕಳನ್ನು ಕೆಲವು ಸಂದರ್ಭಗಳಲ್ಲಿ ಸಂಗಾತಿಯ ಬದಲಿಗೆ ಕುಟುಂಬ ಪಿಂಚಣಿಗೆ ನಾಮನಿರ್ದೇಶನ ಮಾಡಲು ಅವಕಾಶ ಕಲ್ಪಿಸಬಹುದು ಎಂದು ಆಯೋಗವು ಪ್ರಸ್ತಾಪಿಸಿದೆ.
  8. ಆಯೋಗವು ಅಸ್ತಿತ್ವದಲ್ಲಿರುವ ಎಲ್ಲಾ ಭತ್ಯೆಗಳ ದರಗಳನ್ನು ಪರಿಶೀಲಿಸಿ, ಕೆಲವು ಅಸ್ತಿತ್ವದಲ್ಲಿರುವ ಭತ್ಯೆಗಳನ್ನು ಹೊಸ ವರ್ಗದ ನೌಕರರಿಗೆ ವಿಸ್ತರಿಸಲು ಮತ್ತು ಹೊಸ ಭತ್ಯೆಗಳನ್ನು ನೀಡಲು ಈ ಕೆಳಕಂಡ ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ವೃಂದ ಸಿ ಮತ್ತು ಡಿ ನೌಕರರಿಗೆ ರಾಜ್ಯ ಗುಂಪು ವಿಮಾ ಯೋಜನೆಯ ಮಾಸಿಕ ವಂತಿಗೆಯನ್ನು ಶೇ.100 ರಷ್ಟು ಮತ್ತು ವೃಂದ ಎ ಮತ್ತು ಬಿ ನೌಕರರಿಗೆ ಶೇ.50 ರಷ್ಟು ಹೆಚ್ಚಿಸುವುದು (ಅಧ್ಯಾಯ 8.44). ಎ, ಬಿ ಮತ್ತು ಸಿ ಸ್ಥಳಗಳ ಮೂರು ವರ್ಗಗಳಿಗೆ ಅಸ್ತಿತ್ವದಲ್ಲಿರುವ ಶೇ.24, ಶೇ.16 ಮತ್ತು ಶೇ.8 ರಿಂದ ಪರಿಷ್ಕೃತ ಮೂಲ ವೇತನದ ಕನಿಷ್ಠ ಶೇ.20, ಶೇ.15 ಮತ್ತು ಶೇ. 7.5 ಕ್ಕೆ ಅನುಕ್ರಮವಾಗಿ ಮನೆ ಬಾಡಿಗೆ ದರಗಳನ್ನು ಪರಿಷ್ಕರಿಸಲಾಗಿದೆ. ಶಿಫಾರಸ್ಸು ಮಾಡಲಾದ ಪರಿಷ್ಕೃತ ವೇತನ ಶ್ರೇಣಿಗಳ ಆಧಾರದ ಮೇಲೆ, ಇದು 3 ವರ್ಗಗಳಿಗೆ ತಿಂಗಳಿಗೆ ರೂ.1,320 ರೂ.1,330 ಮತ್ತು ರೂ.690 ಅನುಕ್ರಮವಾಗಿ ಹೆಚ್ಚಳವಾಗಿರುವುದರಿಂದ ನಿಶ್ಚಳವಾಗಿ ಮನೆ ಬಾಡಿಗೆ ಭತ್ಯೆಯಲ್ಲಿ ಸುಮಾರು ಶೇ.40 ರಷ್ಟು ಹೆಚ್ಚಳವಾಗಿದೆ (ಅಧ್ಯಾಯ 7.18).

ಬಿಬಿಎಂಪಿ ವ್ಯಾಪ್ತಿಯೊಳಗಿನ ವೃಂದ ಎ ಮತ್ತು ಬಿ ನೌಕರರಿಗೆ ಮಾಸಿಕ ಅಸ್ತಿತ್ವದಲ್ಲಿರುವ ನಗರ ಪರಿಹಾರ ಭತ್ಯೆಯನ್ನು ರೂ.600 ರಿಂದ ರೂ.900 ಕ್ಕೆ ಮತ್ತು ವೃಂದ ಸಿ ಮತ್ತು ಡಿ ನೌಕರರಿಗೆ ಮಾಸಿಕ ರೂ.500 ರಿಂದ ರೂ.750 ಹೆಚ್ಚಿಸಲಾಗಿದೆ. ನಗರ ಸಮುಚ್ಚಯಗಳಾದ ಬೆಳಗಾವಿ, ಮಂಗಳೂರು, ಮೈಸೂರು, ಹಾಗೂ ಪುರಸಭೆಳಾದ ಹುಬ್ಬಳ್ಳಿ ಧಾರವಾಡ ಮತ್ತು ಕಲಬುರಗಿ ನಗರಗಳ ವೃಂದ ಎ ಮತ್ತು ಬಿ ನೌಕರರಿಗೆ ಮಾಸಿಕ ರೂ.450 ರಿಂದ ರೂ.700 ಕ್ಕೆ ಮತ್ತು ವೃಂದ ಸಿ ಮತ್ತು ಡಿ ನೌಕರರಿಗೆ ಮಾಸಿಕ ರೂ.400 ರಿಂದ ರೂ.600 ಗಳಿಗೆ ನಗರ ಪರಿಹಾರ ಭತ್ಯೆಯನ್ನು ಪರಿಷ್ಕರಿಸಿದೆ (ಅಧ್ಯಾಯ 7,19).

ಸಮವಸ್ತ್ರ ಭತ್ಯೆ ನಿಗದಿತ ಪ್ರಯಾಣ ಭತ್ಯೆ ಸಾಗಣೆ ಭತ್ಯೆ, ರಾಜ್ಯದೊಳಗೆ ಮತ್ತು ಹೊರಗೆ ತಂಗವುದಕ್ಕಾಗಿ ದಿನ ಭತ್ಯೆ ವರ್ಗಾವಣೆ ಅನುದಾನ ಮತ್ತು ಹೊರ ರಾಜ್ಯ ಭತ್ಯೆ (ದೆಹಲಿ ಹೊರತುಪಡಿಸಿ ಇತರ ಸ್ಥಳಗಳಿಗೆ) ಸಾಮಾನ್ಯವಾಗಿ ಅಸ್ತಿತ್ವದಲ್ಲಿರುವ ದರಗಳಿಗಿಂತ ಶೇ.25 ರಷ್ಟನ್ನು ಮೇಲ್ಮುಖವಾಗಿ ಹೆಚ್ಚಿಸಿ ಪರಿಷ್ಕರಿಸಲಾಗಿದೆ ( 7.20). ಎಲ್ಲಾ ಇಲಾಖೆಗಳ ವಿಶೇಷ ಭತ್ಯೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ಪರಿಷ್ಕರಿಸಿದ ( 7.38).

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ವೈದ್ಯರುಗಳಿಗೆ ನೀಡಲಾಗುತ್ತಿರುವ ವಿಶೇಷ ಭತ್ಯೆಯನ್ನು ಪ್ರಸ್ತುತ ಇರುವ ವೈಪರೀತ್ಯಗಳನ್ನು ಸರಿಪಡಿಸುವ ಮೂಲಕ ಇಎಸ್‌ಐ ವೈದ್ಯರುಗಳಿಗೆ ಅವರ ಅರ್ಹತೆಗಳು ಮತ್ತು ಸೇವಾ ವರ್ಷಗಳ ಆಧಾರದ ಮೇಲೆ ವಿಸ್ತರಿಸಲು ಶಿಫಾರಸ್ಸು ಮಾಡಲಾಗಿದೆ ( 7.43).

ಅಸ್ತಿತ್ವದಲ್ಲಿರುವ ಮೂಲ ವೇತನದ ಶೇ.5 ರಷ್ಟು ನಿಯೋಜನೆ ಭತ್ಯೆ / ವಿದೇಶಿ ಸೇವಾ ಭತ್ಯೆಯ ದರವನ್ನು ಹಾಗೇ ಉಳಿಸಿಕೊಂಡು, ಚಾಲ್ತಿಯಲ್ಲಿರುವ ರೂ.200 ಗಳ ಮಿತಿಯಿಂದ ಮಾಸಿಕ ರೂ.2,000 ರದ ಗರಿಷ್ಠ ಮಿತಿಗೊಳಪಟ್ಟು ಹೆಚ್ಚಿಸುವುದು (ಅಧ್ಯಾಯ 7.50).

  1. ಪರಿಷ್ಕೃತ ವೇತನ ಶ್ರೇಣಿಯಲ್ಲಿಯೂ ಶೇ.15 ರಷ್ಟು ಪ್ರಭಾರ ಭತ್ಯೆಯನ್ನು ಮುಂದುವರೆಸಲು ಆಯೋಗವು ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 7.48).
  2. ಇನ್ನು ಮುಂದೆ ಸಂಬಂಧಿಸದ ಅಥವಾ ಅಗತ್ಯವಿಲ್ಲದ ಹಲವಾರು ಹುದ್ದೆಗಳಿಗೆ ವಿಶೇಷ ಭತ್ಯೆಗಳನ್ನು ರದ್ದುಪಡಿಸಲು ಪೊಲೀಸ್ ಇಲಾಖೆ ಮಾಡಿದ ಪ್ರಸ್ತಾವನೆಗೆ ಆಯೋಗವು ಸಹಮತ ವ್ಯಕ್ತಪಡಿಸಿದೆ (ಅಧ್ಯಾಯ 7.39).
  3. ವಿಶೇಷ ಚೇತನ ನೌಕರರಿಗಾಗಿ ಆಯೋಗವು ಈ ಕೆಳಗಿನವುಗಳನ್ನು ಶಿಫಾರಸ್ಸು ಮಾಡಿದೆ ( 7.61). ವಾಹನ ಭತ್ಯೆಯನ್ನು ಕೇವಲ ಅಂಧ ಮತ್ತು ಚಲನವಲನ ವೈಕಲ್ಯತೆಯುಳ್ಳ ವಿಶೇಷ ಚೇತನ ನೌಕರರಿಗೆ ಸೀಮಿತಗೊಳಿಸುವ ಬದಲಾಗಿ ಎಲ್ಲಾ ವಿಶೇಷ ಚೇತನ ನೌಕರರಿಗೆ ಈ ಸೌಲಭ್ಯವನ್ನು ವಿಸ್ತರಿಸುವುದು. ಸರ್ಕಾರಿ ನೌಕರರ ವಿಕಲಚೇತನ ಮಕ್ಕಳ ಶಿಕ್ಷಣ ಭತ್ಯೆಯನ್ನು ಪ್ರತಿ ಮಗುವಿಗೆ ತಿಂಗಳಿಗೆ ರೂ.1,000 ರಿಂದ ರೂ.2,000 ಕ್ಕೆ ಹೆಚ್ಚಿಸುವುದು.

           ಬಡ್ಡಿ ರಹಿತ ರೂ.50,000 ಮುಂಗಡ ಅಥವಾ ಸಲಕರಣೆಗಳ ಬೆಲೆ ಯಾವುದು ಕಡಿಮೆಯೋ ಅದನ್ನು 10 ಮಾಸಿಕ                                  ಕಂತುಗಳಲ್ಲಿ ಮರುಪಡೆಯಬಹುದಾದ ಲ್ಯಾಪ್‌ಟಾಪ್‌ಗಳು, ಡಿಜಿಟಲ್ ಒತ್ತಾಸೆಗಳು, Al-ಚಾಲಿತ ಸ್ಮಾರ್ಟ್ ಗ್ಲಾಸ್‌ಗಳು ಮತ್ತು                 ಇತರ ಸಾಧನಗಳನ್ನು ಖರೀದಿಸಲು ಒದಗಿಸಲಾಗುತ್ತದೆ.

            ವಿಶೇಷ ಚೇತನ ಉದ್ಯೋಗಿಗಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಯಾವುದೇ ವಾಹನದ ಖರೀದಿಗೆ ಅಸ್ತಿತ್ವದಲ್ಲಿರುವ                      ಶೇ.30 ರಿಂದ ಶೇ.40ಕ್ಕೆ ವಾಹನ ದರದ ಗರಿಷ್ಠ ರೂ.60,000 ಕ್ಕೆ ಒಳಪಟ್ಟು ಸಬ್ಸಿಡಿಯನ್ನು ಹೆಚ್ಚಿಸುವುದು.

  1. ವಾಹನಗಳ ಖರೀದಿ ಮುಂಗಡಗಳಿಗೆ ಸಂಬಂಧಿಸಿದಂತೆ ಈ ಕೆಳಗಿನ ಶಿಫಾರಸುಗಳನ್ನು ಮಾಡಲಾಗಿದೆ. ಆಂತರಿಕ ದಹನ (ಐಸಿ) ಎಂಜಿನ್ ಹೊಂದಿರುವ ನಾಲ್ಕು ಚಕ್ರದ ವಾಹನಗಳಿಗೆ ಮುಂಗಡವನ್ನು ಈಗಿರುವ ರೂ.3 ಲಕ್ಷದಿಂದ ಗರಿಷ್ಠ ರೂ.6 ಲಕ್ಷಕ್ಕೆ ಹೆಚ್ಚಿಸುವುದು (5) 7.66), ಐಸಿ ಇಂಜಿನ್‌ಗಳನ್ನು ಹೊಂದಿರುವ ದ್ವಿಚಕ್ರ ವಾಹನಗಳಿಗೆ ಮುಂಗಡವನ್ನು ಈಗಿರುವ ರೂ.50,000 ದಿಂದ ಗರಿಷ್ಠ ರೂ.80,000 ಹೆಚ್ಚಿಸುವುದು (ಅಧ್ಯಾಯ 7.69).
  2. ಆಯೋಗವು ಪರಿಸರ ಸ್ನೇಹಿ ವಾಹನಗಳ ಬಳಕೆಯನ್ನು ಬೆಂಬಲಿಸಲು ಮತ್ತು ಉತ್ತೇಜಿಸಲು ಶಿಫಾರಸ್ಸು ಮಾಡಿದೆ: ಬೈಸಿಕಲ್ ಮುಂಗಡವನ್ನು ಗರಿಷ್ಠ ರೂ.10,000 ಕ್ಕೆ ಹೆಚ್ಚಿಸುವುದು ( 7.72). ವಿದ್ಯುತ್ ಚಾಲಿತ ಬೈಸಿಕಲ್‌ಗಳಿಗೆ ಮುಂಗಡವನ್ನು ಗರಿಷ್ಠ ರೂ.30,000 ಕ್ಕೆ ಹೆಚ್ಚಿಸುವುದು (ಅಧ್ಯಾಯ .73). ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳಿಗೆ ಮುಂಗಡವನ್ನು ಗರಿಷ್ಠ ರೂ.1.25 ಲಕ್ಷಕ್ಕೆ ಹೆಚ್ಚಿಸುವುದು (ಅಧ್ಯಾಯ 7.70). ವಿದ್ಯುತ್ ಚಾಲಿತ ನಾಲ್ಕು ಚಕ್ರದ ವಾಹನಗಳಿಗೆ ಮುಂಗಡವನ್ನು ಗರಿಷ್ಠ ರೂ.10 ಲಕ್ಷಕ್ಕೆ ಹೆಚ್ಚಿಸುವುದು (ಅಧ್ಯಾಯ 7.67).
  3. ಗಣಕಯಂತ್ರ ಮುಂಗಡವನ್ನು ಗರಿಷ್ಠ ರೂ.60,000 ಕ್ಕೆ ಪರಿಷ್ಕರಿಸುವುದು ( 7.75).
  4. ಸೋಲಾರ್ ವಾಟರ್ ಹೀಟರ್, ಸೋಲಾರ್ ಕುಕ್ಕರ್. ಮೊಪೆಡ್ ಮತ್ತು ಮೋಟಾರು ವಾಹನಗಳ ದುರಸ್ತಿ ಮತ್ತು ಉಪಕರಣಗಳಿಗೆ ಮುಂಗಡಗಳನ್ನು ಸ್ಥಗಿತಗೊಳಿಸುವುದು ( 7.76).
  5. ವೃಂದ ಎ ನೌಕ ರಿಗೆ ಗರಿಷ್ಠ ರೂ.65 ಲಕ್ಷ ಮತ್ತು ಇತರ ನೌಕರರಿಗೆ ರೂ.40 ಲಕ್ಷಗಳ ಗೃಹ ನಿರ್ಮಾಣ ಭತ್ಯೆಯನ್ನು ಪರಿಷ್ಕರಿಸಿದ (ಅಧ್ಯಾಯ 7.78).
  6. ನೌಕರರ ಸೇವಾವಧಿಯಲ್ಲಿ ರಜೆ ಪ್ರಯಾಣ ಭತ್ಯೆಯ ಪ್ರಯೋಜನವನ್ನು ಎರಡು ಬಾರಿಯಿಂದ ಮೂರು ಬಾರಿಗೆ ಹೆಚ್ಚಿಸುವುದು (ಅಧ್ಯಾಯ 7.84).
  7. ಸರ್ಕಾರಿ ನೌಕರರ ತರಬೇತಿಯ ಗುಣಮಟ್ಟವನ್ನು ಸುಧಾರಿಸುವುದಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕೆಂದು ಗುರುತಿಸಿ. ತರಬೇತಿ ಸಂಸ್ಥೆಗಳಲ್ಲಿನ ಅಧ್ಯಾಪಕರ ಗುಣಮಟ್ಟವನ್ನು ಹೆಚ್ಚಿಸಲು, ಎಲ್ಲಾ ಸರ್ಕಾರಿ ತರಬೇತಿ ಸಂಸ್ಥೆಗಳಲ್ಲಿ ನಿಯೋಜಿತ ಅಥವಾ ಅಧ್ಯಾಪಕರಾಗಿ ನೇಮಕಗೊಂಡ ನೌಕರರಿಗೆ ಅಸ್ತಿತ್ವದಲ್ಲಿರುವ ವಿಶೇಷ ಭತ್ಯೆಯನ್ನು ಶೇ.25 ಕ್ಕೆ ಹೆಚ್ಚಿಸುವುದು (ಅಧ್ಯಾಯ 7.56).
  8. ಇಲಾಖೆಗೆ ಸಂಬಂಧಿಸಿದ ಅಸ್ತಿತ್ವದಲ್ಲಿರುವ ಭತ್ಯೆಗಳನ್ನು ನಿಯಮಿತವಾಗಿ ಪರಿಶೀಲಿಸಲು ಮತ್ತು ಖಾತರಿಯಿಲ್ಲದವುಗಳನ್ನು ತೆಗೆದುಹಾಕಲು, ಆರ್ಥಿಕ ಇಲಾಖೆ, ಡಿಪಿಎಆ‌ರ್ ಮತ್ತು ಸಂಬಂಧಪಟ್ಟ ಆಡಳಿತ ಇಲಾಖೆಗಳು ಸ್ಥಾಯಿ ಸಮಿತಿಯನ್ನು ರಚಿಸುವ ಅಗತ್ಯತೆಯನ್ನು ಪ್ರಸ್ತಾಪಿಸಿದೆ. ಯಾವುದೇ ಸಂದರ್ಭದಲ್ಲಿ, ಈ ಸ್ಮಾಯಿ ಸಮಿತಿಯು ನಿರ್ದಿಷ್ಟವಾಗಿ ಶಿಫಾರಸು ಮಾಡದ ಹೊರತು ಯಾವುದೇ ಹೊಸ ಭತ್ಯೆಯನ್ನು ಪರಿಚಯಿಸತಕ್ಕದಲ್ಲ (ಅಧ್ಯಾಯ 7.7).
  9. ಪೋಷಕರು ಅಥವಾ ಅತ್ತೆ/ಮಾವಂದಿರು ಅಥವಾ ಕುಟುಂಬದ ಹಿರಿಯರು ಅಥವಾ ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಸಣ್ಣ ಮಕ್ಕಳನ್ನು ಆರೈಕೆ ಮಾಡಲು ನೌಕರರಿಗೆ ಆರೈಕೆ ರಜೆ ಎಂಬ ಹೊಸ ಪ್ರಯೋಜನವನ್ನು ಒದಗಿಸಬೇಕೆಂದು ಹಾಗೂ ರಜೆಯ ಅವಧಿಯಲ್ಲಿ ಶೇ.50 ರಷ್ಟು ವೇತನದೊಂದಿಗೆ ಈ ರಜೆಯ ಗರಿಷ್ಠ ಅವಧಿಯು 180 ದಿನಗಳಿಗೆ (6 ತಿಂಗಳುಗಳು) ನಿಗದಿಪಡಿಸಲು ಆಯೋಗವು ಶಿಫಾರಸ್ಸು ಮಾಡಿದೆ ( 7.89).
  10. ಸೇವೆಗೆ ಸೇರುವ 60 ದಿನಗಳ ಮೊದಲು ಮಗುವಿಗೆ ಜನ್ಮ ನೀಡಿದ ಮಹಿಳಾ ಸರ್ಕಾರಿ ನೌಕ ರಿಗೆ ಸೇವೆಗೆ ಸೇರುವ ಸಮಯದಲ್ಲಿ ನವಜಾತ ಶಿಶುವಿನ ಆರೈಕೆಯ ಅವಧಿಯಲ್ಲಿ ಇರುವವರಿಗೆ 18 ವಾರಗಳ ಹೆರಿಗೆ ರಜೆಯನ್ನು ಶಿಫಾರಸ್ಸು ಮಾಡಿದೆ (ಅಧ್ಯಾಯ 7.92).
  11. ಕೆಲಸ-ವಿರಾಮ ಸಮತೋಲನವನ್ನು ಸುಧಾರಿಸಲು ಮತ್ತು ಆ ಮೂಲಕ ಸರ್ಕಾರಿ ನೌಕರರ ಕೆಲಸದ ಗುಣಮಟ್ಟವನ್ನು ಸುಧಾರಿಸಲು ಸರ್ಕಾರವು ಐದು ದಿನಗಳ ಕೆಲಸದ ವಾರವನ್ನು ಪರಿಚಯಿಸಬೇಕೆಂದು ಆಯೋಗವು ಶಿಫಾರಸ್ಸು ಮಾಡಿದೆ ( 9.42).
  12. ಆಡಳಿತಕ್ಕೆ ಸಂಬಂಧಿಸಿದ ಪರಿಸರ ಸಾಮಾಜಿಕ ಮತ್ತು ಆಡಳಿತ (ESG) ತತ್ತ್ವಗಳು ಮತ್ತು ಸುಸ್ಥಿರ ತಂತ್ರಜ್ಞಾನದಲ್ಲಿನ ಇತ್ತೀಚಿನ ಬೆಳವಣಿಗೆಗಳೊಂದಿಗೆ ಪ್ರತಿಯೊಬ್ಬ ಉದ್ಯೋಗಿಗಳಿಗೆ ಪರಿಚಿತರಾಗಲು ಡಿಪಿಎಆರ್ ತೆಗೆದುಕೊಳ್ಳಬೇಕಾದ ಸಚಿವಾಲಯ ಮತ್ತು ಕ್ಷೇತ್ರ ಮಟ್ಟದ ಸರ್ಕಾರಿ ನೌಕರರ ಸಂಪೂರ್ಣ ಸ್ಪೆಕ್ಷಮ್ ಅನ್ನು ಒಳಗೊಂಡಿರುವ ಸಮಗ್ರ ತರಬೇತಿ ಕಾರ್ಯಕ್ರಮವನ್ನು ಆಯೋಗವು ಬಲವಾಗಿ ಶಿಫಾರಸ್ಸು ಮಾಡುತ್ತದೆ (ಅಧ್ಯಾಯ 9.56).

Here is the complete list of 7th Pay Commission recommendations ರಾಜ್ಯ ಸರ್ಕಾರಿ ನೌಕರರೇ ಗಮನಿಸಿ: 7ನೇ ವೇತನ ಆಯೋಗ ಶಿಫಾರಸ್ಸುಗಳ ಸಂಪೂರ್ಣ ವಿವರ ಇಲ್ಲಿದೆ
Share. Facebook Twitter LinkedIn WhatsApp Email

Related Posts

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

11/05/2025 6:02 PM1 Min Read

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM1 Min Read

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM1 Min Read
Recent News

BREAKING : ಆಪರೇಷನ್ ಸಿಂಧೂರ್ ನಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ : ಭಾರತೀಯ ಸೇನೆ ಸ್ಪಷ್ಟನೆ

11/05/2025 7:30 PM

BREAKING : ಪಾಕಿಸ್ತಾನ ಕರೆ ಮಾಡಿ ಮನವಿ ಮಾಡಿದಕ್ಕೆ ‘ಕದನ ವಿರಾಮ’ ಘೋಷಣೆ : DGMO ರಾಜೀವ್ ಘಾಯ್ ಸ್ಪಷ್ಟನೆ

11/05/2025 7:25 PM

BREAKING : ಪಾಕಿಸ್ತಾನದ 35-40 ಸೈನಿಕರನ್ನು ಕೊಂದಿದ್ದೇವೆ : ಏರ್ ಮಾರ್ಷಲ್ ಅವಧೆಶ್ ಕುಮಾರ್ ಭಾರ್ತಿ ಹೇಳಿಕೆ

11/05/2025 7:08 PM

BREAKING : ‘ಆಪರೇಷನ್ ಸಿಂಧೂರ್’ ನಲ್ಲಿ ಉಗ್ರರ ನೆಲೆಗಳನ್ನು ನಾಶ ಮಾಡಿರೋ ಸಾಕ್ಷಿಗಳಿವೆ : ಫೋಟೋ ರಿಲೀಸ್ ಮಾಡಿದ ಸೇನೆ

11/05/2025 6:55 PM
State News
KARNATAKA

BREAKING : ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ : ಬೆಂಗಳೂರಲ್ಲಿ ಕಾಮುಕ ಅರೆಸ್ಟ್

By kannadanewsnow0511/05/2025 6:02 PM KARNATAKA 1 Min Read

ಬೆಂಗಳೂರು : ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ ಅನ್ನೋದು ಮತ್ತೆ ಮತ್ತೆ ಸಾಬೀತು ಆಗ್ತಿದೆ. ಇದೀಗ ಮಹಿಳಾ ಸಹೋದ್ಯೋಗಿಗಳ ಭಾವಚಿತ್ರಗಳನ್ನು…

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.