ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಸುಸೂತ್ರವಾಗಿ ಮುಕ್ತಾಯಗೊಂಡಿದ್ದು, ಇಂದಿನಿಂದ ಮೌಲ್ಯ ಮಾಪನ ಕಾರ್ಯ ಆರಂಭವಾಗಲಿದೆ ಎಂದು ಕರ್ನಾಟಕ ಶಾಲಾ ಮತ್ತು ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಏಪ್ರಿಲ್ 15ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಸುಮಾರು 20 ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆದಷ್ಟು ಬೇಗನೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಲಿದ್ದು, ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಮಂಜುಳಾ ತಿಳಿಸಿದ್ದಾರೆ.
ಈ ನಡುವೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ದಿನಾಂಕ: 06.04.2024ರಂದು ಮಂಡಲಿಯ ಜಾಲತಾಣದಲ್ಲಿ http://kseab.karnataka.gov.inನಲ್ಲಿ ಪ್ರಕಟಿಸಿದೆ.
ಈ ರೀತಿ ಫಲಿತಾಂಶ ನೋಡಬಹುದು
ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ತಿಳಿದುಕೊಳ್ಳಬೇಕಾದರೆ https://kseab.karnataka.gov.in ಅಥವಾ https://karresults.nic.in ವೆಬ್ ಸೈಟ್ ಗೆ ಭೇಟಿ ನೀಡಿ ತಮ್ಮ ರಿಜಿಸ್ಟರ್ ಅನ್ನು ನಮೂದಿಸುವುದರ ಮೂಲಕ ಫಲಿತಾಂಶವನ್ನು ತಿಳಿದುಕೊಳ್ಳಬಹುದಾಗಿದೆ.