ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಈಗಾಗಲೇ ಕೆಲ ಜಿಲ್ಲೆಯಗಳಲ್ಲಿ ಮಳೆಯ ಅರ್ಭಟ ಹೆಚ್ಚಾಗಿದೆ. ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿನಿಂದಾಗಿ ಮುಂದಿನ ಮುಂದಿನ 3 ದಿನ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

BIGG NEWS: ಬೆಂಗಳೂರು ಜನರೇ ಎಚ್ಚರ…! ಎಟಿಎಂನಲ್ಲಿ ಹಣ ಡ್ರಾ ಮಾಡುವಾಗ ಹುಷಾರಾಗಿರಿ; ಸ್ವಲ್ಪ ಯಾಮಾರಿದ್ರೆ ಹಣ ಪಂಗನಾಮ|ATM theft

 

ಇನ್ನು ಮಲೆನಾಡು ಭಾಗಗಳಲ್ಲಿ ಅಂದರೆ ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಪಶ್ಚಿಮ ಘಟ್ಟದಲ್ಲಿಯೂ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗೆ ಜಿಲ್ಲೆಯಲ್ಲಿ ಈಗಾಗಲೇ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಜೊತೆಗೆ ಕರಾವಳಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಕೊಟ್ಟಿದ್ದಾರೆ. ಮಂಗಳೂರಿನಲ್ಲಿ ಗುರುವಾರದ ಮಳೆಗೆ ಜನ ಚೇತರಿಸಿಕೊಂಡಿಲ್ಲ. ಮತ್ತೊಂದು ಭಾರೀ ಮಳೆ ಆತಂಕ ಸೃಷ್ಟಿಸಿದೆ. ಗದ್ದೆಗಳು ಜಲಾವೃತವಾಗಿದ್ದು, ಭತ್ತ, ತೆಂಗು, ಅಡಿಕೆ ಬೆಳೆಗಳಿಗೆ ಸಂಪೂರ್ಣ ನಾಶವಾಗಿದೆ.

Share.
Exit mobile version