ಬೆಂಗಳೂರು: ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಕ್ಯಾನ್ಸರ್ ಆರಂಭಿಕ ತಪಾಸಣೆಯ ಪ್ರಾಮುಖ್ಯತೆಯನ್ನು ಸಾರಲು ರಂಗೋಲಿ ಮೆಟ್ರೋ ಆರ್ಟ್ ಸೆಂಟರ್‌ನಲ್ಲಿ ವಿಶ್-ವಾಲ್‌ನಲ್ಲಿ ಸಂದೇಶ ಬರೆಯುವುದು, ಇನ್ಫೋಗ್ರಾಫಿಕ್ಸ್ ಮತ್ತು ಪೋಸ್ಟರ್‌ಗಳ ಮೂಲಕ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಹೆಲ್ತ್‌ಕೇರ್ ಗ್ಲೋಬಲ್ ಎಂಟರ್ಪ್ರೈಸಸ್ ಲಿಮಿಟೆಡ್‌ನ ಕರ್ನಾಟಕ ಪ್ರಾದೇಶಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಷಾ ಕುಮಾರ್, ಕ್ಯಾನ್ಸರ್‌ನನ್ನು ಪ್ರಾರಂಭದಲ್ಲಿಯೇ ಪತ್ತೆ ಹಚ್ಚುವುದು ಅನಿವಾರ್ಯ. ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎಚ್‌ಸಿಜಿ ಆಸ್ಪತ್ರೆಯ ಸಿಬ್ಬಂದಿಯು ಮೆಟ್ರೋ ಆರ್ಟ್ ಸೆಂಟರ್‌ನಲ್ಲಿ ಮಾನವ ಸರಪಳಿ ರಚಿಸಿ, ಇನ್ಫೋಗ್ರಾಫಿಕ್ಸ್ ಮತ್ತು ಪೋಸ್ಟರ್‌ಗಳನ್ನು ಪ್ರದರ್ಶಿಸಿದರು. ಜೊತೆಗೆ, ಕ್ಯಾನ್ಸರ್ ರೋಗಿಗಳಿಗೆ ಶುಭಾರೈಸಲು “ವಿಶ್-ವಾಲ್”ನನ್ನು ಸಹ ಇಡಲಾಗಿತ್ತು. ಸಾಕಷ್ಟು ಜನರು ಆಗಮಿಸಿ, ಕ್ಯಾನ್ಸರ್ ರೋಗಿಗಳಿಗೆ ಧೈರ್ಯ ತುಂಬುವ ಸಂದೇಶಗಳನ್ನು ವಿಶ್-ವಾಲ್‌ನಲ್ಲಿ ಬರೆದರು. ಈ ಮೂಲಕ ಕ್ಯಾನ್ಸರ್ ರೋಗಿಗಳಿಗೂ ಆತ್ಮಸ್ಥೈರ್ಯ ತುಂಬಿದಂತಾಯಿತು ಎಂದರು.
ಕ್ಯಾನ್ಸರ್ ರೋಗವನ್ನು ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿದರೆ ಅದನ್ನು ಯಶಸ್ವಿಯಾಗಿ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಬಹುದು, ಹೀಗಾಗಿ ಪ್ರಾರಂಭಿಕ ಪತ್ತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕ. ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯು ಈ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಪಡುತ್ತಿದ್ದು, ಜಾಗೃತಿ ಮೂಡಿಸಲು ಸಾಮಾಜಿಕ ಅಭಿಯಾನಗಳನ್ನು ನಡೆಸುತ್ತಿದೆ.
ಕಾರ್ಯಕ್ರಮದಲ್ಲಿ ಎಚ್‌ಸಿಜಿ ಸಿಬ್ಬಂದಿಯು ಬಣ್ಣಗಳ ಮೂಲಕ ಕ್ಯಾನ್ಸರ್ ರೋಗಿಗಳ ಆತ್ಮಸ್ಥೈರ್ಯ ಹೆಚ್ಚಿಸಲು ಘೊಷಣೆ ಕೂಗಿದರು.
ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ.ಕೆ ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ – ಡಿಸಿಎಂ ಡಿ.ಕೆ. ಶಿವಕುಮಾರ್
ಸರ್ಕಾರದ ವಿರುದ್ಧ ಕಮಿಷನ್ ಆರೋಪ ವಿಚಾರ : ತಕ್ಷಣ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್.ಅಶೋಕ್ ಆಗ್ರಹ