Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಸಿಲಿಂಡರ್ ವ್ಯತ್ಯಯ ಬೆನ್ನಲ್ಲೆ, ಅಡುಗೆ ಎಣ್ಣೆ ಅಂಗಡಿಗಳೂ ಬಂದ್!…

13/03/2026 3:31 PM

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

13/03/2026 3:24 PM

BREAKING : ‘ಇರಾನ್ ಶರಣಾಗುವ ಹಂತದಲ್ಲಿದೆ’ : ಜಿ7 ನಾಯಕರೊಂದಿಗೆ ‘ಟ್ರಂಪ್’ ಮಾತುಕತೆ

13/03/2026 3:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರವೇ ‘KSRTC’ ಪ್ರಯಾಣಕ್ಕೆ ‘ಹೈಟೆಕ್ ಸ್ಪರ್ಶ’: ರಸ್ತೆಗೆ ಇಳಿಯಲು ‘ಐರಾವತ ಕ್ಲಬ್ ಕ್ಲಾಸ್ 2.0 ಬಸ್’ ರೆಡಿ
KARNATAKA

ಶೀಘ್ರವೇ ‘KSRTC’ ಪ್ರಯಾಣಕ್ಕೆ ‘ಹೈಟೆಕ್ ಸ್ಪರ್ಶ’: ರಸ್ತೆಗೆ ಇಳಿಯಲು ‘ಐರಾವತ ಕ್ಲಬ್ ಕ್ಲಾಸ್ 2.0 ಬಸ್’ ರೆಡಿ

By kannadanewsnow0907/10/2024 5:13 PM

ಹೊಸಪೇಟೆ: ರಾಜ್ಯದ ಕೆ ಎಸ್ ಆರ್ ಟಿ ಸಿ ಪ್ರಯಾಣಿಕರಿಗೆ ಐಶಾರಾಮಿ ಮತ್ತೊಂದು ಸುಖಕರ ಪ್ರಯಾಣವನ್ನು ಒದಗಿಸಿಕೊಡಲು ವೇದಿಕೆ ಸಿದ್ಧವಾಗಿದೆ. ಈ ತಿಂಗಳ ಕೊನೆಯ ವಾರದಲ್ಲಿ ಐರಾವತ ಕ್ಲಬ್ ಕ್ಲಾಸ್ 2.0 ಕೆ ಎಸ್ ಆರ್ ಟಿಸಿಗೆ ಸೇರ್ಪಡೆಯಾಗಲಿದ್ದು, ಆ ಬಳಿಕ ಶೀಘ್ರವೇ ರಸ್ತೆಗೆ ಇಳಿದು, ಸಾರಿಗೆ ಬಸ್ ಪ್ರಯಾಣಿಕರಿಗೆ ಹೈಟೆಕ್ ಪ್ರಯಾಣದ ಅನುಭವ ನೀಡಲಿದ್ದಾವೆ.

ಇಂದು ಹೊಸಕೋಟೆ ಬಳಿಯಿರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ, ಬಸ್ಸನ್ನು ಪರಿವೀಕ್ಷಣೆಯನ್ನು ರಾಮಲಿಂಗಾ ರೆಡ್ಡಿ, ಸಾರಿಗೆ ಹಾಗೂ ಮುಜರಾಯಿ ಸಚಿವರು, ಅಧ್ಯಕ್ಷರು ಎಸ್ ಆರ್ ಶ್ರೀನಿವಾಸ್ (ವಾಸು), ಉಪಾಧ್ಯಕ್ಷರು ಮೊಹಮ್ಮದ್ ರಿಜ್ವಾನ್ ನವಾಬ್ ಮತ್ತು ವ್ಯವಸ್ಥಾಪಕ ನಿರ್ದೇಶಕರು ವಿ.ಅನ್ಬುಕುಮಾರ್, ಭಾಆಸೇ, ಕೆ ಎಸ್ ಆರ್ ಟಿ ಸಿ ರವರುಗಳು ನಡೆಸಿದರು.

ಐರಾವತ 2.0 ಮಾದರಿಯ 20 ಬಸ್ಸುಗಳನ್ನು ಕೆ ಎಸ್ ಆರ್ ಟಿ ಸಿ ಯು ಈ ತಿಂಗಳ ಕೊನೆಯ ವಾರದಲ್ಲಿ ತನ್ನ ವಾಹನಗಳ ಸಮೂಹಕ್ಕೆ ಸೇರ್ಪಡೆ ಗೊಳಿಸಲಿದೆ. ಒಂದು ಬಸ್ಸಿನ ದರ ರೂ.1.78 ಕೋಟಿಗಳು. ನಿಗಮದಲ್ಲಿ ಒಟ್ಟು 443 ಬಸ್ಸುಗಳು ಐಷಾರಾಮಿ ಬಸ್ಸುಗಳಿವೆ.

ಈ ಬಸ್ಸಿನ ವಿಶೇಷತೆಗಳು:

*ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿರುವುದರಿಂದ ಕಣ್ ತಣಿಸುವ ಸೌಂದರ್ಯ.

*ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ.

*ನವೀನ ತಂತ್ರಜ್ಙಾನ/ತಾಂತ್ರಿಕತೆಯಿಂದ ಸುಧಾರಿತ ಇಂಜಿನ್ ಹೊಂದಿದ್ದು ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್‌ ಕೆಎಂಪಿಎಲ್ ನೀಡುತ್ತದೆ.

*ಒಟ್ಟಾರೆ ಬಸ್ಸಿನ ಉದ್ದದಲ್ಲಿ 3.5% ಹೆಚ್ಚಳ ಇರುವುದರಿಂದ ಸಲೂನ್‌ನಲ್ಲಿ ಪ್ರಯಾಣಿಕರ ಆಸನಗಳ ನಡುವಿನ ಅಂತರ ಹೆಚ್ಚಾಗಿದೆ.

*ಒಟ್ಟಾರೆ ಬಸ್ಸಿನ ಎತ್ತರದಲ್ಲಿ 5.6% ಹೆಚ್ಚಳ ಇರುವುದರಿಂದ ಹೆಚ್ಚಿನ ಹೆಡ್‌ ರೂಂ ಇರುತ್ತದೆ.

*ವಿಂಡ್‌ಶೀಲ್ಡ್ ಗಾಜು 9.5% ರಷ್ಟು ವಿಸ್ತಾರವಾಗಿದ್ದು, ಚಾಲಕನಿಗೆ ಗೋಚರತೆಯನ್ನು ಹೆಚ್ಚಿಸಿ ಬ್ಲೈಂಡ್ ಸ್ಪಾಟ್ ಅನ್ನು ಕಡಿಮೆ ಮಾಡುತ್ತದೆ.

*ವಿಶಾಲ ಲಗೇಜ್ ಸ್ಥಳಾವಕಾಶವಿದ್ದು , ಹಿಂದಿನ ಬಸ್ ಗಳಿಗೆ ಹೋಲಿಸಿದ್ದಲ್ಲಿ ಶೇ 20% ರಷ್ಟು ಹೆಚ್ಚಿನ ಲಗ್ಗೇಜ್ ಇಡುವ ಸೌಲಭ್ಯವಿರುತ್ತದೆ. ಇದು ಅತ್ಯಂತ ಲಗೇಜ್ ಸ್ಥಳಾವಕಾಶವಿರುವ ಮೊದಲ ಬಸ್ ಆಗಿದೆ‌.

*USB + C ಟೈಪ್ ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಒಳಗೊಂಡಿದೆ.

*ವಿಶಾಲವಾದ ಎಸಿ ಡಕ್ಟ್ ಹೊಂದಿರುವುದರಿಂದ ವಾಹನದ ಒಳಗೆ ಉತ್ತಮ ಹವಾನಿಯಂತ್ರಣಾ ವ್ಯವಸ್ಥೆ ಇರುತ್ತದೆ.

*ಉನ್ನತ ದರ್ಜೆ/ ವಿನ್ಯಾಸದ ಆಸನಗಳು ಮತ್ತು ಸಾಮಗ್ರಿಗಳ ಬಳಕೆಯಿಂದ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಸೌಕರ್ಯ.

*ವಿಶಾಲವಾದ ಪ್ಯಾಂಟೋಗ್ರಾಫಿಕ್ ವಿನ್ಯಾಸದಿಂದ ವಾಹನದ ನಿರ್ವಹಣೆ ಕೈಗೊಳ್ಳಲು ಸುಲಭವಾಗಿರುತ್ತದೆ.

*ಹಿಂಭಾಗದಲ್ಲಿ fog light ಅನ್ನು ಒಳಗೊಂಡಿರುವುದಿರಂದ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸುರಕ್ಷತೆ ಇರುತ್ತದೆ.

*ಸುಲಭವಾಗಿ ಕೈಗೆಟುಕುವ ಚಾಲಕ ನಿಯಂತ್ರಣಗಳು ಮತ್ತು ಸ್ವಿಚ್‌ಗಳನ್ನು ಹೊಂದಿದ್ದು ಚಾಲಕರಿಗೆ ಹೆಚ್ಚು ಅನುಕೂಲಕರವಾಗಿರುತ್ತದೆ.

*ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FAPS) ಅಳವಡಿಸಿದ್ದು ತುರ್ತು ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ. ಬಸ್ಸಿನ ಒಳಗೆ ಪ್ರಯಾಣಿಕರ ಆಸನದ ಎರಡೂ ಬದಿಯಲ್ಲಿ ನೀರಿನ ಪೈಪುಗಳಿದ್ದು 30 ನಾಜ಼ಲ್ ಗಳಿಂದ ನೀರು ಸರಬರಾಜು ಆಗಿ ಬೆಂಕಿ ಅವಘಡದ ಸಂದರ್ಭದಲ್ಲಿ ನೀರು ಸಿಂಪಡಿಸಲು ಪ್ರಾರಂಭವಾಗುತ್ತದೆ.

*ಚಾಲಕರು ಪಾದಚಾರಿಯನ್ನು ಪ್ರಯಾಣಿಕರ ಬಾಗಿಲಿನಿಂದ ಸುಲಭವಾಗಿ ನೋಡಬಹುದಾಗಿದ್ದು ಪಾದಾಚಾರಿಗಳಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ.

ಕರ್ನಾಟಕವು ವಿವಿಧ ಮಾದರಿಯ ಅತ್ಯಾಧುನಿಕ ಬಸ್ಸುಗಳನ್ನು ಪ್ರಯಾಣಿಕರ ಬೇಡಿಕೆಗನುಣವಾಗಿ ಸೇರ್ಪಡೆ ‌ಗೊಳಿಸುತ್ತಿರುವುದರಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ.

ಈ ಸಂದರ್ಭದಲ್ಲಿ ಡಾ. ಕೆ ನಂದಿನಿದೇವಿ, ಭಾಆಸೇ,‌ ನಿರ್ದೇಶಕರು( ಸಿಬ್ಬಂದಿ & ಭದ್ರತಾ) , ನಿಗಮದ ಹಿರಿಯ ಅಧಿಕಾರಿಗಳು, ವೋಲ್ವೋ ಕಂಪನಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

BREAKING : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್, ಇನ್ ಸ್ಟಾಗ್ರಾಂ’ ಖಾತೆ ಹ್ಯಾಕ್

JOB ALERT: ಕನ್ನಡಿಗರಿಗೆ ಸಿಹಿಸುದ್ದಿ: ರೈಲ್ವೆ ಇಲಾಖೆಯ 12 ಲಕ್ಷ ಹುದ್ದೆಗಳ ಭರ್ತಿಗೆ ಅಧಿಸೂಚನೆ, ಕನ್ನಡದಲ್ಲೇ ಪರೀಕ್ಷೆ

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಸಿಲಿಂಡರ್ ವ್ಯತ್ಯಯ ಬೆನ್ನಲ್ಲೆ, ಅಡುಗೆ ಎಣ್ಣೆ ಅಂಗಡಿಗಳೂ ಬಂದ್!…

13/03/2026 3:31 PM1 Min Read

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

13/03/2026 3:24 PM1 Min Read

ಗ್ಯಾಸ್ ಬಿಕ್ಕಟ್ಟು: ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು; ಕೊಪ್ಪಳ, ಕಲಬುರಗಿಯಲ್ಲಿ ಕಟ್ಟಿಗೆ ಅಡುಗೆ ಶುರು!

13/03/2026 3:19 PM1 Min Read
Recent News

ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಸಿಲಿಂಡರ್ ವ್ಯತ್ಯಯ ಬೆನ್ನಲ್ಲೆ, ಅಡುಗೆ ಎಣ್ಣೆ ಅಂಗಡಿಗಳೂ ಬಂದ್!…

13/03/2026 3:31 PM

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

13/03/2026 3:24 PM

BREAKING : ‘ಇರಾನ್ ಶರಣಾಗುವ ಹಂತದಲ್ಲಿದೆ’ : ಜಿ7 ನಾಯಕರೊಂದಿಗೆ ‘ಟ್ರಂಪ್’ ಮಾತುಕತೆ

13/03/2026 3:19 PM

ಗ್ಯಾಸ್ ಬಿಕ್ಕಟ್ಟು: ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು; ಕೊಪ್ಪಳ, ಕಲಬುರಗಿಯಲ್ಲಿ ಕಟ್ಟಿಗೆ ಅಡುಗೆ ಶುರು!

13/03/2026 3:19 PM
State News
KARNATAKA

ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಸಿಲಿಂಡರ್ ವ್ಯತ್ಯಯ ಬೆನ್ನಲ್ಲೆ, ಅಡುಗೆ ಎಣ್ಣೆ ಅಂಗಡಿಗಳೂ ಬಂದ್!…

By kannadanewsnow0513/03/2026 3:31 PM KARNATAKA 1 Min Read

ಬೆಂಗಳೂರು : ಈಗಾಗಲೇ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿರುವ ಹಿನ್ನೆಲೆ, ಬೆಂಗಳೂರು ಜನ ತತ್ತರಿಸಿ ಹೋಗಿದ್ದು, ಇದರ ಬೆನ್ನಲ್ಲೆ,…

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

13/03/2026 3:24 PM

ಗ್ಯಾಸ್ ಬಿಕ್ಕಟ್ಟು: ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು; ಕೊಪ್ಪಳ, ಕಲಬುರಗಿಯಲ್ಲಿ ಕಟ್ಟಿಗೆ ಅಡುಗೆ ಶುರು!

13/03/2026 3:19 PM

BIG NEWS : ರಾಜ್ಯ ಸರ್ಕಾರದಿಂದ 30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ : ಸನ್ನಡತೆ ಆಧಾರದಲ್ಲಿ ರಿಲೀಸ್​​

13/03/2026 3:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.